Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

*ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ* 
ಚಂದ್ರವಳ್ಳಿ ನ್ಯೂಸ್,​ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

​ಕೇಂದ್ರ ಗೃಹ ಸಚಿವಾಲಯ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ರಾಜ್ಯ ಸರ್ಕಾರವು ಸತತ ಸಂಪರ್ಕದಲ್ಲಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಮತ್ತು ನಾಪತ್ತೆಯಾದವರನ್ನು ಪತ್ತೆಹಚ್ಚಲು ಸಮರಪಾದಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ.

​ನೇಪಾಳದಲ್ಲಿ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಕೊನೆಯದಾಗಿ ಸಂಪರ್ಕಿಸಿದ ಸ್ಥಳ ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ಸರ್ಕಾರಕ್ಕೆ ತಕ್ಷಣವೇ ಒದಗಿಸಲು ಕೋರಲಾಗಿದೆ.

​ಈ ವಿವರಗಳನ್ನು ನಮೂದಿಸಲು ರಾಜ್ಯ ಸರ್ಕಾರವು ವಿಶೇಷ ಗೂಗಲ್ ಫಾರ್ಮ್ (docs.google.com/forms/d/1gnw8B…) ಲಿಂಕ್ ಅನ್ನು ಸಹ ಒದಗಿಸಿದೆ.

​ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) 24x7 ಸಹಾಯವಾಣಿ ತೆರೆದಿದ್ದು, ಸಾರ್ವಜನಿಕರು 1070 (ಟೋಲ್ ಫ್ರೀ) ಅಥವಾ 080-22253707 ಸಂಖ್ಯೆಗೆ ಕರೆ ಮಾಡಬಹುದು. ಇಮೇಲ್ ಮೂಲಕ ಮಾಹಿತಿ ನೀಡಲು [email protected] ವಿಳಾಸಕ್ಕೆ ಕಳುಹಿಸಬಹುದಾಗಿದೆ.

​ಅಲ್ಲದೆ, ನೇಪಾಳದಲ್ಲಿ ಸಿಲುಕಿರುವ ಭಾರತೀಯರಿಗೆ ತುರ್ತು ನೆರವು ನೀಡಲು ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ತುರ್ತು ವಾಟ್ಸಾಪ್ ಹಾಗೂ ಕರೆ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು +977 9851316807, +977 9709107500 ಅಥವಾ +977 9810326117 ಸಂಖ್ಯೆಗಳನ್ನು ನೇರವಾಗಿ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲು ಹಾಗೂ ನೆರವು ಕೋರಲು  ಪ್ರಕಟಣೆಯಲ್ಲಿ ತಿಳಿಸಿದೆ.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿಆತ್ರೇಯ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಗೆ ಅತಂತ್ರ ಸ್ಥಿತಿಸಹಬಾಳ್ವೆ ಮತ್ತು ಸಾಮಾಜಿಕ ಸಾಮರಸ್ಯವೇ ನಮ್ಮ ನಾಡಿನ ಶಕ್ತಿ: ಟಿ.ರಘುಮೂರ್ತಿಅದ್ಧೂರಿಯಾಗಿ ನಡೆದ ಈದ್‌ಮಿಲಾದ್ ಮೆರವಣಿಗೆ  ಹೋರಾಟಗಾರ ಎನ್.ಎಸ್.ಹರ್ಡೆಕರ್‌ರವರಲ್ಲಿ ಶಿಸ್ತು, ದೇಶಭಕ್ತಿ ಎದ್ದು ಕಾಣುತ್ತಿತ್ತು‘ರಸ್ತೆ ರಾಜ’ನ ಕ್ಷೇತ್ರದಲ್ಲಿ ಗುಂಡಿಗಳದ್ದೇ ಸಾಮ್ರಾಜ್ಯ: ಅನುದಾನದ ಹೊಳೆಯಿದ್ದರೂ ತಪ್ಪದ ಯಮಯಾತನೆ!ಕನ್ನಡ ಸಾಹಿತ್ಯ ಪರಿಷತ್ತು ಕಬ್ಜ ಆಗಲು ಬಿಡುವುದಿಲ್ಲ: ಪ್ರೊ.ಎಸ್.ಜಿ ಸಿದ್ದರಾಮಯ್ಯಚಿಕ್ಕಂದವಾಡಿ ಗ್ರಾಮದ ರೇವಜ್ಜರ ಓಂಕಾರಪ್ಪ ಇನ್ನಿಲ್ಲ