Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಳೆಯಿಲ್ಲದೆ ಒಣಗಿದ ಜೋಳದ ಹೊಲ ವೀಕ್ಷಿಸಿದ ನಿಖಿಲ್ ಕುಮಾರಸ್ವಾಮಿ; ​

 ಚಂದ್ರವಳ್ಳಿ ನ್ಯೂಸ್, ​ಶಿವಮೊಗ್ಗ:
'ರೈತ ಸ್ವಾಭಿಮಾನ ಯಾತ್ರೆ'ಯ ಅಂಗವಾಗಿ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿರುವ ಜೆಡಿಎಸ್ ಯುವ ಮುಖಂಡರಾದ ನಿಖಿಲ್ ಕುಮಾರಸ್ವಾಮಿ ಅವರು, ಮಳೆಯಿಲ್ಲದೆ ಸಂಪೂರ್ಣವಾಗಿ ಒಣಗಿಹೋಗಿರುವ ರೈತರ ಜಮೀನುಗಳಿಗೆ ಭೇಟಿ ನೀಡಿ ಸಂತ್ರಸ್ತ ರೈತರ ಅಳಲನ್ನು ಆಲಿಸಿದರು.

​​ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ: ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕೋಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ರೈತರಾದ ಇಸ್ಮಾಯಿಲ್ ಮತ್ತು ರಮೇಶ್ ಅವರ ಜಮೀನುಗಳಿಗೆ ಭೇಟಿ ನೀಡಿದ ನಿಖಿಲ್ ಕುಮಾರಸ್ವಾಮಿ, ಲಕ್ಷಾಂತರ ರೂ. ಸಾಲ ಮಾಡಿ ಬಿತ್ತಿದ್ದ ಜೋಳದ ಬೆಳೆ ಮಳೆಯಿಲ್ಲದೆ ಒಣಗಿಹೋಗಿರುವುದನ್ನು ಕಣ್ಣಾರೆ ಕಂಡು ಕಂಗಾಲಾದ ರೈತರಿಗೆ ಸಾಂತ್ವನ ಹೇಳಿದರು.

Advertisement

​ದೇವಸ್ಥಾನದಲ್ಲಿ ವಿಶೇಷ ಪೂಜೆ: ಪಾದಯಾತ್ರೆಗೂ ಮುನ್ನ ಶಿವಮೊಗ್ಗ ಗ್ರಾಮಾಂತರ ಜಿಲ್ಲೆಯ ಕೋಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ರಾಜ್ಯದ ಅನ್ನದಾತರ ಕಲ್ಯಾಣ ಹಾಗೂ ಒಳಿತಿಗಾಗಿ ಪ್ರಾರ್ಥನೆ ಮಾಡಿದರು.

​ಆಯನೂರಿನಲ್ಲಿ ಬೃಹತ್ ಪಾದಯಾತ್ರೆ: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯಾನಾಯ್ಕ್ ಅವರ ನೇತೃತ್ವದಲ್ಲಿ ಆಯನೂರು ಕೋಟೆಯಿಂದ ಪಿಡಬ್ಲ್ಯುಡಿ ಇಲಾಖೆಯ ಪ್ರವಾಸಿ ಮಂದಿರದವರೆಗೆ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಈ ಯಾತ್ರೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ರೈತರು, ಯುವಕರು ಹಾಗೂ ತಾಯಂದಿರು ಉತ್ಸಾಹದಿಂದ ಭಾಗವಹಿಸಿ ಹೆಜ್ಜೆ ಹಾಕಿದರು.

​ಸರ್ಕಾರದ ವಿರುದ್ಧ ಆಕ್ರೋಶ: ರೈತರ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರದ ಆಡಳಿತ ವೈಖರಿಯನ್ನು ತೀವ್ರವಾಗಿ ಖಂಡಿಸಿದ ನಿಖಿಲ್ ಕುಮಾರಸ್ವಾಮಿ, ರೈತರಿಗೆ ಸೂಕ್ತ ಪರಿಹಾರ ಸಿಗುವವರೆಗೆ ಹಾಗೂ ಸರ್ಕಾರದಿಂದ ನ್ಯಾಯ ದೊರಕುವವರೆಗೆ ನಮ್ಮ ಪಕ್ಷ ಮತ್ತು ನಾಯಕರು ರೈತರ ಪರವಾಗಿ ನಿರಂತರ ಹೋರಾಟ ನಡೆಸಲಿದ್ದಾರೆ ಎಂದು ಘೋಷಿಸಿದರು.

​ಜನರ ಬೆಂಬಲಕ್ಕೆ ಕೃತಜ್ಞತೆ: ಪಾದಯಾತ್ರೆ ವೇಳೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜನತೆ ತೋರಿದ ಅಪಾರ ಪ್ರೀತಿ, ಸ್ವಾಗತ, ವಿಶ್ವಾಸ ಹಾಗೂ ಬೆಂಬಲಕ್ಕೆ ಅವರು ಕೃತಜ್ಞತೆ ಸಲ್ಲಿಸಿದರು.

​ಅನ್ನದಾತರ ಕಣ್ಣೀರು ಒರೆಸಲು ಮತ್ತು ರೈತರ ಹಕ್ಕುಗಳ ರಕ್ಷಣೆಗಾಗಿ ಜೆಡಿಎಸ್ ಪಕ್ಷ ಸದಾ ಬದ್ಧವಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.

 

 

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಬಿಡುಗಡೆಲಿಂಗನಹಳ್ಳಿ ಗ್ರಾಮದಲ್ಲಿ ವೀರಗಲ್ಲು, ಮಾಸ್ತಿ ಗಲ್ಲು ಪತ್ತೆಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ:ಕೃಷ್ಣಪ್ಪ ಖ್ಯಾತ ನಟ ರಂಗಾಯಣ ರಘು ಭೇಟಿ: 'ಪ್ರೇಮದ ಊರಲ್ಲಿ' ಸಿನಿಮಾ ವೀಕ್ಷಿಸುವಂತೆ ಆತ್ಮೀಯ ಮನವಿಸೊಂಡೆಕೆರೆ ಗ್ರಾಮದ ಬಸಣ್ಣ ನಿಧನಹಿರಿಯ ಪತ್ರಕರ್ತ ಬಂಡಿಗಡಿ ನಂಜುಂಡಪ್ಪ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪಶ್ರೀರಂಗಪಟ್ಟಣದಿಂದ ಮೈಸೂರಿಗೆ ಬಂದ ದಸರಾ ವೈಭವ:…ಮಳೆಯಿಲ್ಲದೆ ಒಣಗಿದ ಜೋಳದ ಹೊಲ ವೀಕ್ಷಿಸಿದ ನಿಖಿಲ್ ಕುಮಾರಸ್ವಾಮಿ; ​HMT ಕಾರ್ಖಾನೆಯ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ರಣತಂತ್ರ: ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸಮಾಲೋಚನಾ ಸಭೆ