Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆ ಯಾವುದೇ ಅಸಮಾಧಾನವಿಲ್ಲ; ಡಿಸಿಎಂ ಜಿ.ಪರಮೇಶ್ವರ್ ಸ್ಪಷ್ಟನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿಯ ಹಿಂದೆ ಯಾವುದೇ ಅಸಮಾಧಾನದ ಕಾರಣಗಳಿಲ್ಲ. ಒಂದು ವೇಳೆ ಅಸಮಾಧಾನ ಇದ್ದಿದ್ದರೆ ಅವರು ಆ ಹುದ್ದೆಗೇ ಅಂಟಿಕೊಳ್ಳುತ್ತಿದ್ದರು ಹೊರತು ರಾಜೀನಾಮೆ ಕೊಡುತ್ತಿರಲಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಸಿದ್ದರಾಮಯ್ಯ ಮೊದಲಿನಿಂದಲೂ ಹೇಳುತ್ತ ಬಂದಿದ್ದರು. ಅದರಂತೆ ನಡೆದುಕೊಂಡಿದ್ದು, ಈಗ ಆ ಅಧ್ಯಾಯ ಮುಗಿದುಹೋಗಿದೆ. ಈ ವಿಚಾರವನ್ನು ಪದೇ ಪದೆ ಕೆದಕಿ ಚರ್ಚೆ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಸಿದ್ದರಾಮಯ್ಯ ಅವರು ಪ್ರಸ್ತುತ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿರುವುದರಿಂದ ಈ ದೆಹಲಿ ಭೇಟಿ ಅತ್ಯಂತ ಸಹಜ ಪ್ರಕ್ರಿಯೆಯಾಗಿದೆ. ಇದಕ್ಕೆ ಬೇರೆ ಬೇರೆ ರಾಜಕೀಯ ಬಣ್ಣ ಬಳೆಯುವುದು ಸರಿಯಲ್ಲ ಎಂದರು.

Advertisement

ಅಪೆಕ್ಸ್‌ಬ್ಯಾಂಕ್‌ಅಧ್ಯಕ್ಷರ ಆಯ್ಕೆಯಲ್ಲಿ ಯಾವುದೇ ಅಸಮಾಧಾನವಿಲ್ಲ:
ಅಪೆಕ್ಸ್‌ಬ್ಯಾಂಕ್‌ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವುದು ಬೇಡ, ಬದಲಿಗೆ ಅವಿರೋಧವಾಗಿ ಆಯ್ಕೆ ಮಾಡಬೇಕು ಎಂಬುದು ಪಕ್ಷದ ನಿರ್ಣಯವಾಗಿತ್ತು. ಅದರಂತೆ ಕೊನೆಯ ಹಂತದಲ್ಲಿ ವಿಧಾನ ಪರಿಷತ್‌ಸದಸ್ಯ ಎಸ್‌. ರವಿ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಈ ನಿರ್ಣಾಯಕ ಸಭೆಯಲ್ಲಿ ಸಚಿವ ಕೆ.ಎನ್‌. ರಾಜಣ್ಣ ಕೂಡ ಉಪಸ್ಥಿತರಿದ್ದರು. ಅವರ ಸಂಪೂರ್ಣ ಸಮ್ಮತಿಯ ಮೇರೆಗೆಯೇ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದೆ. ಹೀಗಾಗಿ ಈ ವಿಷಯದಲ್ಲಿ ಯಾವುದೇ ಗೊಂದಲ ಅಥವಾ ಅಸಮಾಧಾನದ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

ಇದೇ ವೇಳೆ, ಅಪೆಕ್ಸ್‌ಬ್ಯಾಂಕ್‌ಅಧ್ಯಕ್ಷ ಹುದ್ದೆಯನ್ನು 2.5 ಹಾಗೂ 2.5 ವರ್ಷಗಳ ಅಧಿಕಾರ ಹಂಚಿಕೆ ಸೂತ್ರದಡಿ ವಿಂಗಡಿಸಲಾಗಿದೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿ, ಅಪೆಕ್ಸ್‌ಬ್ಯಾಂಕ್‌ಎನ್ನುವುದು ಒಂದು ಸ್ವತಂತ್ರ ಹಾಗೂ ಪಕ್ಷಾತೀತ ಸಂಸ್ಥೆಯಾಗಿದೆ. ಅದರ ಆಡಳಿತ ಮಂಡಳಿಯ ನಿರ್ದೇಶಕರೇ ಮುಂದಿನ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ನೀರು ಹರಿಸುವ ಕುರಿತ ಮೇಲ್ಮನವಿ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಇಡಿ ದಾಳಿಯಲ್ಲಿ ಸಿಕ್ಕ 2 ಕೋಟಿ ರೂ. ನಮಗೆ ದೊಡ್ಡ ಮೊತ್ತವಲ್ಲ; ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆಚಹಾ ಕಪ್ ರಸ್ತೆ ಬದಿ ಎಸೆದಿದ್ದನ್ನು ಪ್ರಶ್ನಿಸಿದ ಪೌರಕಾರ್ಮಿಕನ ಮೇಲೆ ಹಲ್ಲೆನಕಲಿ ಔಷಧ ಜಾಲ; ಏಕಕಾಲಕ್ಕೆ ಎಸ್‌ಐಟಿ ದಾಳಿ, ಕೋಟ್ಯಂತರ ಮೌಲ್ಯದ ಔಷಧ ಜಪ್ತಿ2028ರ ಚುನಾವಣೆ ಸ್ಪರ್ಧೆ ನಿರಾಕರಣೆ ಹೇಳಿಕೆ: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತುರಸ್ತೆ ಗುಂಡಿ ಮುಚ್ಚಲು ಜೆಟ್ ಪ್ಯಾಚರ್: ಸಚಿವ ಕೃಷ್ಣಭೈರೇಗೌಡ ಚಾಲನೆಸಿಕ್ಕಿರುವುದು ನಮ್ಮದೇ ಹಣ, ಕಾನೂನು ಮೂಲಕ ವಾಪಸ್ ಪಡೆಯುತ್ತೇವೆ: ಸಚಿವ ಸತೀಶ್ ಜಾರಕಿಹೊಳಿನವೆಂಬರ್ 1ರೊಳಗೆ ಪರವಾನಗಿ ಇಲ್ಲದ ಅಕ್ರಮ ಬಂದೂಕು ಒಪ್ಪಿಸಿ: ಸಿಎಂ ಡಿ.ಕೆ ಶಿವಕುಮಾರ್ಇ.ಡಿ ದಾಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡವಿಲ್ಲವಿದೇಶದಲ್ಲಿ ಹೂಡಿಕೆ ಸುಳ್ಳು, ಕುಟುಂಬದ ಹೆಸರು ಕೆಡಿಸಬೇಡಿ: ಬಾಲಚಂದ್ರ ಜಾರಕಿಹೊಳಿ