ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.
ಒನಕೆ ಓಬವ್ವ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿದ ತಹಶೀಲ್ದಾರ್ ಮಲ್ಲಪ್ಪ.ಕೆ.ಯರಗೋಳ ಮಾತನಾಡಿ, 18ನೇ ಶತಮಾನದಲ್ಲಿ ಚಿತ್ರದುರ್ಗದ ಪಾಳೆಗಾರ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನವರ ಪತ್ನಿ ಒನಕೆ ಓಬವ್ವ ಚಿತ್ರದುರ್ಗದ ಕೋಟೆಯಲ್ಲಿ ಸಾಮಾನ್ಯ ಮಹಿಳೆಯಾಗಿದ್ದ ಓಬವ್ವ ತನ್ನ ನಾಡಿನೆ ರಕ್ಷಣೆಗೆ ಏಕಾಂಗಿಯಾಗಿ ಹೋರಾಡಿ ಮಡಿದ ಇತಿಹಾಸ ಸ್ಮರಣೀಯ.
ಒನಕೆ ಓಬವ್ವ ನಾಡಿನ ಮಹಿಳಾ ಸಂಕಲ್ಪ ಶಕ್ತಿಯ ಪ್ರತೀಕವಾಗಿದ್ದಾರೆ. ಇಂತಹ ವೀರ ಮಹಿಳೆಯ ಜಯಂತಿಯನ್ನು ಆಚರಿಸುವ ಮೂಲಕ ಅವರ ಸಾಹಸ, ಧೈರ್ಯ ಮತ್ತು ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದುನಮ್ಮೆಲ್ಲರ ಕರ್ತವ್ಯವಾಗಿದೆ. ಇತಿಹಾಸವನ್ನು ಮೆಲುಕು ಹಾಕಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶೇಷಾದ್ರಿ, ಕಲಾವಿದೆ ನಾಗರತ್ನ ಸೇರಿದಂತೆ ಮತ್ತಿತರರು ಇದ್ದರು.




