Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸ್ಪೀಕರ್ ಓಂಬಿರ್ಲಾ ಅವರನ್ನು ವಜಾಗೊಳಿಸಲು ವಿಪಕ್ಷಗಳ ಅವಿಶ್ವಾಸ ನಿರ್ಣಯ ಮಂಡನೆ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಲೋಕಸಭಾ ಸ್ಪೀಕರ್ ಓಂಬಿರ್ಲಾ ಅವರನ್ನು ತಮ್ಮ ಸ್ಥಾನದಿಂದ ವಜಾಗೊಳಿಸಲು ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿದೆ.

ಸ್ಪೀಕರ್ ಓಂಬಿರ್ಲಾ ಅವರ ವಿರುದ್ಧ ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಲು ಸಂವಿಧಾನದ 94ಸಿ ವಿಧಿಯ ಅಡಿಯಲ್ಲಿ ಮಂಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.


ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಸದನದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾತನಾಡಲು ಅವಕಾಶ ನೀಡದಿದ್ದಕ್ಕಾಗಿ ವಂದನಾ ನಿರ್ಣಯದ ಮೇಲೆ ಸದನದಲ್ಲಿ ಪ್ರತಿಪಕ್ಷ ನಾಯಕರು ಮಾತನಾಡಲು ಅವಕಾಶ ನೀಡುತ್ತಿಲ್ಲ, ಬಿಜೆಪಿ ಸಂಸದ ನಿಶಿಕಾಂತ್​ ದುಬೆ ವಿರುದ್ಧ ಕ್ರಮ ಕೈಗೊಳ್ಳದಿದ್ದಕ್ಕಾಗಿ ಮತ್ತು ಕಾಂಗ್ರೆಸ್‌ನ ಮಹಿಳಾ ಸಂಸದರ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡಿದ್ದಕ್ಕೆ ವಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿವೆ.


ಲೋಕಸಭೆಯಲ್ಲಿ ಶೀಘ್ರದಲ್ಲೇ ಈ ಕುರಿತು ಶಾಸನ ಬದ್ಧ ನಿರ್ಣಯ ಮಂಡಿಸಲಾಗುವುದು ಎಂದು ಅವರು ಹೇಳಿದರು. ಈ ನಿರ್ಣಯಕ್ಕೆ ಲೋಕಸಭೆಯಲ್ಲಿ 100 ಸಂಸದರ ಸಹಿ ಅಗತ್ಯವಿದೆ ಮತ್ತು ವಿವಿಧ ವಿರೋಧ ಪಕ್ಷದ ಸಂಸದರ ಸಹಿ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಉಪಸ್ಥಿತಿಯಲ್ಲಿ ಕರೆಯಲಾಗಿದ್ದ ವಿಪಕ್ಷದ ನಾಯಕರ ಸಭೆಯಲ್ಲಿ ಈ ನಿರ್ಣಯ ಮಂಡಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸಭೆಯಲ್ಲಿ ಟಿಎಂಸಿ, ಸೇರಿದಂತೆ ಡಿಎಂಕೆ, ಎಸ್​ಪಿ, ಆರ್​ಜೆಡಿ, ಶಿವಸೇನಾ (ಯುಬಿಟಿ) ಮತ್ತು ಎನ್​ಸಿಪಿ (ಎಸ್​ಪಿ) ಮತ್ತು ಆರ್​ಎಸ್​ಪಿಗಳು ಭಾಗಿಯಾಗಿದ್ದವು. ಕಾಂಗ್ರೆಸ್ ಪಕ್ಷದ ಸಂಸದ ಕೆ ಸಿ ವೇಣುಗೋಪಾಲ್ ಅವರು ರಾಹುಲ್ ಗಾಂಧಿ ಮತ್ತು ಇತರ ವಿರೋಧ ಪಕ್ಷದ ನಾಯಕರಿಗೆ ಸದನದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ನೀಡುತ್ತಿಲ್ಲ. ಲೋಕಸಭೆಯಲ್ಲಿ ವಿಪಕ್ಷಗಳಿಗೆ ಜಾಗವಿಲ್ಲ. ಸರ್ಕಾರವು ಏನೂ ಬೇಕಾದರೂ ಹಾಗೂ ವಿಪಕ್ಷ ಸದಸ್ಯರ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಸಹ ಮಾಡಬಹುದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸ್ಪೀಕರ್​ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ವಿಪಕ್ಷಗಳು ಮುಂದಾಗಿವೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಂಸತ್​ನಲ್ಲಿ ಏನಾಗುತ್ತಿದೆ ಎಂದು ನೀವು ನೋಡುತ್ತಿದ್ದೀರ. ಈ ಅಧಿವೇಶದನಲ್ಲಿ ವಿಪಕ್ಷ ನಾಯಕ ರಾಹುಲ್​ ಗಾಂಧಿ ಅವರಿಗೆ ಮಾತನಾಡಲು ಅವಕಾಶ ನೀಡಲಿಲ್ಲ.

ಸರ್ಕಾರದ ಕಡೆಯವರು ಏನಾದರೂ ಮಾತನಾಡಬಹುದಾಗಿದೆ. ಅವರು ಯಾರ ಬಗ್ಗೆಯಾದರೂ ಮಾತನಾಡಬಹುದಾಗಿದ್ದು, ಅವಹೇಳನಕಾರಿ ಹೇಳಿಕೆಯನ್ನು ನೀಡಲಾಗಿದೆ. ಕಾಂಗ್ರೆಸ್​ ಮಹಿಳಾ ಸಂಸದರ ವಿರುದ್ಧ ಸ್ಪೀಕರ್​ ಆರೋಪ ಮಾಡಿದ್ದಾರೆ. ಸದನದಲ್ಲಿ ವಿಪಕ್ಷಗಳಿಗೆ ಯಾವುದೇ ಸ್ಥಾನವಿಲ್ಲದಂತೆ ಆಗಿದೆ ಎಂದು ತಿಳಿಸಿದರು.

ವಿಪಕ್ಷ ನಾಯಕರಿರಲಿ ಅಥವಾ ಇತರ ವಿರೋಧ ಪಕ್ಷದ ನಾಯಕರಾಗಿರಲಿ, ಅವರಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ವಿರೋಧ ಪಕ್ಷದ ಬಗ್ಗೆ ಈ ರೀತಿಯ ವರ್ತನೆ ಎಂದಿಗೂ ಇರಲಿಲ್ಲ ಎಂದ ಅವರು, ವಿಪಕ್ಷವು ಅಂತಹ ನಿರ್ಣಯವನ್ನು ಮಂಡಿಸಲು ಪ್ರಯತ್ನಿಸುತ್ತದೆಯೇ ಎಂಬ ಪ್ರಶ್ನೆಗೆ, ಕ್ರಮದ ನಂತರ, ನಿಮಗೆ ತಿಳಿಯುತ್ತದೆ. ಈ ನಿಟ್ಟಿನಲ್ಲಿ ಇಡೀ ವಿರೋಧ ಪಕ್ಷಗಳ ಒಕ್ಕೂಟ ಒಗ್ಗಟ್ಟಾಗಿದೆ ಎಂದು ಹೇಳಿದರು.

ಈ ನಡುವೆ ಅನಿರೀಕ್ಷಿತ ಬೆಳವಣಿಗೆಯಲ್ಲಿ, ವಿಪಕ್ಷದ ಸದಸ್ಯರ ನಿರಂತರ ಘೋಷಣೆಗಳ ನಡುವೆ ಪ್ರಧಾನಿ ಅವರ ಭಾಷಣವನ್ನು ಸಾಂಪ್ರದಾಯಿಕ ಉತ್ತರವಿಲ್ಲದೆಯೇ ಲೋಕಸಭೆಯು ಗುರುವಾರ ವಂದನಾ ನಿರ್ಣಯವನ್ನು ಅಂಗೀಕರಿಸಿತು.

ಸ್ಪೀಕರ್​ ಓಂ ಬಿರ್ಲಾ ಈ ವೇಳೆ ಮಾತನಾಡಿ ಕಾಂಗ್ರೆಸ್​ ಸದಸ್ಯರು ಪ್ರಧಾನಿಯವರ ಆಸನದ ಬಳಿ ತೆರಳಿ ಅನಿರೀಕ್ಷಿತ ಕೃತ್ಯ ಎಸಗುವ ಕುರಿತು ಮಾಹಿತಿ ಇದ್ದ ಹಿನ್ನೆಲೆ ಪ್ರಜಾಪ್ರಭುತ್ವದ ಸಂಪ್ರದಾಯಗಳಿಗೆ ಧಕ್ಕೆ ಬಾರದಿರಲಿ ಎಂದು ಪ್ರಧಾನಿಯವರನ್ನು ಸದನಕ್ಕೆ ಬರದಂತೆ ನಾನೇ ಕೋರಿದ್ದೆ ಎಂದು ಹೇಳಿದರು.

ಪ್ರಿಯಾಂಕಾ ಗಾಂಧಿ ವಾದ್ರಾ ಈ ಕುರಿತು ಪ್ರತಿಕ್ರಿಯಿಸಿ ಇದು ಶುದ್ಧ ಸುಳ್ಳು. ಪ್ರಧಾನಿಯುವರು ಸ್ಪೀಕರ್​ ಹಿಂದೆ ಅವಿತುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!