Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ‘ಒಪಿಎಸ್’ ಜಾರಿ: ಶಶಿ ಹುಲಿಕುಂಟೆ

ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ರಾಜ್ಯ ಸರ್ಕಾರಿ ನೌಕರರಿಗೆ ಎನ್‌ಪಿಎಸ್ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಪದ್ಧತಿಯನ್ನು (OPS) ಶೀಘ್ರದಲ್ಲೇ ಆರನೇ ಗ್ಯಾರಂಟಿಯಾಗಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ತಿಳಿಸಿದ್ದಾರೆ. ​ತಾಲೂಕಿನ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು,

ಈ ಹಿಂದೆ ಎನ್‌ಪಿಎಸ್ ಜಾರಿಗೆ ತಂದವರೇ ಇಂದು ವಾಪಸ್‌ಗೆ ಒತ್ತಾಯಿಸುತ್ತಿರುವುದು ಮೊಸಳೆ ಕಣ್ಣೀರು. ಕಾಂಗ್ರೆಸ್ ಪಕ್ಷವು ಎಲ್ಲರನ್ನೂ ಸಮಾನತೆಯಿಂದ ಕಾಣುವ ಅಭಿವೃದ್ಧಿಪರ ಪಕ್ಷವಾಗಿದೆ. ನಾನು ಕೇವಲ ಚುನಾವಣೆಗೆ ಸೀಮಿತವಾಗದೆ, ಈ ಭಾಗದ ಪದವೀಧರರ ಸಂಘಟನೆ, ಉದ್ಯೋಗ, ಗೌರವಧನ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ಮೂಲಕ ಪ್ರತಿಯೊಬ್ಬರಿಗೂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇನೆ ಎಂದರು. ​ಸರ್ಕಾರಿ ಹುದ್ದೆಗಳ ಭರ್ತಿಗೆ ಚಾಲನೆ: ರಾಜ್ಯ ಸರ್ಕಾರವು ಯುವಕರಿಗೆ ಉದ್ಯೋಗ ಕಲ್ಪಿಸಲು 75,000 ಹುದ್ದೆಗಳ ಭರ್ತಿಗೆ ಸಿದ್ಧತೆ ನಡೆಸಿದ್ದು, ಈಗಾಗಲೇ 15,000 ಶಿಕ್ಷಕರ ನೇಮಕಾತಿಗೆ ಆದೇಶಿಸಿದೆ.

Advertisement

ಪೊಲೀಸ್, ಅರಣ್ಯ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೇಳಿದರು. ​ನಿರಂತರ ಸಂಪರ್ಕದ ಭರವಸೆ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 1,20,000 ಹಾಗೂ ಹೊಳಲ್ಕೆರೆಯಲ್ಲಿ 4,300 ಮತದಾರರಿದ್ದಾರೆ.

ಈ ಹಿಂದೆ ಗೆದ್ದ ಬಿಜೆಪಿ ಶಾಸಕರು ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂಬ ಆಕ್ರೋಶ ಮತದಾರರಲ್ಲಿದೆ. ನಾನು ಗೆದ್ದು ಬಂದರೆ ಪ್ರತಿ ತಿಂಗಳು ಕ್ಷೇತ್ರಕ್ಕೆ ಭೇಟಿ ನೀಡಿ ಶಿಕ್ಷಕರ ಮತ್ತು ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಸರ್ಕಾರ ಶಿಕ್ಷಕರಿಗೆ ಸರ್ಕಾರಿ ನೌಕರರಿಗೆ 6ನೇ ಗ್ಯಾರಂಟಿಯಾಗಿ ಓಪಿಎಸ್ ಯೋಜನೆ ಜಾರಿಗೆ ತರಲು ಸಿದ್ಧತೆ ನಡೆಸುತ್ತಿದೆ. ಮುಂದಿನ ದಿನಗಳಲ್ಲಿ ಜಾರಿಗೆ ತಂದು ಶಿಕ್ಷಕರ ಸರಕಾರಿ ನೌಕರರ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ನೀಡುತ್ತದೆ ಎಂದು ತಿಳಿಸಿದರು .

​ಈ ಪ್ರಚಾರ ಕಾರ್ಯಕ್ರಮದಲ್ಲಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎ.ಜಯಪ್ಪ, ತಾಲೂಕು ಶಿಕ್ಷಕ ಸಂಘ್ ಅಧ್ಯಕ್ಷ ನಾಗರಾಜಯ್ಯ, ಶಿಕ್ಷಕ ರವಿಕುಮಾರ್, ಶಿವಕುಮಾರ್, ಚಂದ್ರಪ್ಪ, ನಿವೃತ್ತ ನೌಕರರ ಸಂಘದ ಹೇಮಂತ್ ಗೌಡ, ವೆಂಕಟೇಶ್, ಮೃತ್ಯುಂಜಯಪ್ಪ, ಮಲ್ಲೇಶಪ್ಪ ಸೇರಿದಂತೆ ನೂರಾರು ಬೆಂಬಲಿಗರು ಉಪಸ್ಥಿತರಿದ್ದರು. ಫೋಟೋ ಹೊಳಲ್ಕೆರೆ ತಾಲೂಕಿನ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಮತಯಾಚಿಸಿದ ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಶಿಕ್ಷಕರ ಜತೆ ಸಂವಾದ ನಡೆಸಿದರು.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹರಿಯಬ್ಬೆ ಗ್ರಾಮದ ‘ಕಾನಿ ಬಟ್ರು’ ಹನುಮಂತರಾಯಪ್ಪ ವಿಧಿವಶಫುಟ್‌ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿದ   ಬಾಲಕಿಯರು ಎಎಫ್‌ವೈ ವಿದ್ಯಾರ್ಥಿ ವಿಭಾಗ ಉದ್ಘಾಟನೆಯಲ್ಲಿ ಭಾಗವಹಿಸಿ ಮಮತ ನೇರ್ಲಗಿ ಮಾತನಾಡಿದರುಚಿತ್ರದುರ್ಗದಲ್ಲಿಂದು ಪ್ರಾಜೆಕ್ಟ್ ಪಂಚತಂತ್ರ ನಾಟಕ ಪ್ರದರ್ಶನಸರ್ವ ಸಮುದಾಯಗಳ ಏಳಿಗೆಗೆ ಶ್ರಮಿಸುವೆ:ಧೀರಜ್ ಮುನಿರಾಜ್ಕುಡಿಯುವ ನೀರಿನ ಕೊರತೆ: ಖಾಸಗಿ ಲೇಔಟ್‌ಗೆ ನೀರು ಪೂರೈಕೆ, ಕೆರೆಗೆ ಕೊಳಚೆ ನೀರು ಆರೋಪತೂಬಗೆರೆ ಗ್ರಾಮದಲ್ಲಿ ಚಾವಡಿ ಗಣೇಶೋತ್ಸವ ಸಂಪನ್ನರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ‘ಒಪಿಎಸ್’ ಜಾರಿ: ಶಶಿ ಹುಲಿಕುಂಟೆಚಿತ್ರದುರ್ಗ ಸಿಟಿ ಇನ್‌ಸ್ಟಿಟ್ಯೂಟ್‌ನಲ್ಲಿ ಆಡಳಿತ ಲೋಪ ಆರೋಪ: ನಿರ್ದೇಶಕ ಹೆಚ್.ಎನ್. ಲೋಕೇಶ್ ರಾಜೀನಾಮೆಭದ್ರಾ ಕಾಲುವೆ ಹಾಳು, ಸಾರ್ವಜನಿಕ ಆಸ್ತಿ ಹಾಳುಗೆಡವಿದವರ ವಿರುದ್ಧ ಕಠಿಣ ಕ್ರಮ: ಪೊಲೀಸರ ಗಂಭೀರ ಎಚ್ಚರಿಕೆ!