Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಳವಾಡಿ ಕೆರೆಗೆ ಎತ್ತಿನಹೊಳೆ ನೀರು; ರೈತರಲ್ಲಿ ಸಂತಸ: ತಮ್ಮಯ್ಯ

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಎತ್ತಿನಹೊಳೆ ಯೋಜನೆಯ ನೀರಿನಿಂದ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಹೋಬಳಿಯ ಬೆಳವಾಡಿ ಕೆರೆ ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರು ಗುರುವಾರ ಕೆರೆಗೆ ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಹೆಚ್.ಡಿ.ತಮ್ಮಯ್ಯ, ಕಳೆದ ಮೂರು ವರ್ಷಗಳಿಂದ ಎತ್ತಿನಹೊಳೆ ಯೋಜನೆಗೆ ರಾಜ್ಯ ಸರ್ಕಾರ ನೀಡಿದ ಆದ್ಯತೆಯ ಫಲವಾಗಿ ಹಳೇಬೀಡು, ಬೆಳವಾಡಿ, ಮಾಚೇನಹಳ್ಳಿ, ಕುರುಬರಹಳ್ಳಿ ಹಾಗೂ ದೇವನೂರು ಸೇರಿದಂತೆ ಹಲವು ಕೆರೆಗಳಿಗೆ ನೀರು ತುಂಬುವಂತಾಗಿದೆ ಎಂದು ಹೇಳಿದರು.

Advertisement

ನೀರಿನ ಸಮಸ್ಯೆಯಿಂದಾಗಿ ಈ ಭಾಗದ ರೈತರು ಹಾಗೂ ಗ್ರಾಮಸ್ಥರು ಹಲವು ವರ್ಷಗಳಿಂದ ಸಂಕಷ್ಟ ಅನುಭವಿಸುತ್ತಿದ್ದರು. ತೋಟಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದೆ ಊರು ತೊರೆಯುವಂತಹ ಪರಿಸ್ಥಿತಿಯೂ ನಿರ್ಮಾಣವಾಗಿತ್ತು. ಇದೀಗ ಎತ್ತಿನಹೊಳೆ ನೀರು ಕೆರೆಗಳಿಗೆ ಹರಿದುಬರುತ್ತಿರುವುದು ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ ಎಂದರು.ನೀರಿದ್ದರೆ ಮಾತ್ರ ಎಲ್ಲವೂ ಸಾಧ್ಯ
ನೀರಿದ್ದರೆ ಮಾತ್ರ ಕೃಷಿ
, ತೋಟಗಾರಿಕೆ ಹಾಗೂ ಗ್ರಾಮೀಣ ಆರ್ಥಿಕ ಚಟುವಟಿಕೆಗಳು ಅಭಿವೃದ್ಧಿಯಾಗಲು ಸಾಧ್ಯ. ಆದ್ದರಿಂದ ಬೆಳವಾಡಿ ಕೆರೆ ಮಾತ್ರವಲ್ಲದೆ ಸುತ್ತಮುತ್ತಲಿನ ಎಲ್ಲ ಕೆರೆಗಳಿಗೂ ನೀರು ತುಂಬಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಕೈಗೊಂಡ ಕ್ರಮಗಳನ್ನು ಪ್ರಸ್ತಾಪಿಸಿದ ಅವರು, ಯೋಜನೆಗೆ ಆರಂಭದಲ್ಲಿ ನೀಡಲಾಗಿದ್ದ ಅನುದಾನವನ್ನು ನಂತರ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪರಿಷ್ಕರಿಸಿ ಕಾಮಗಾರಿಗೆ ವೇಗ ನೀಡಿತು. ಬಳಿಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಅವಧಿಯಲ್ಲಿ ಯೋಜನೆ ಪೂರ್ಣಗೊಳಿಸಿ ನೀರು ಹರಿಸುವ ಕಾರ್ಯಕ್ಕೆ ಚಾಲನೆ ದೊರೆತಿದೆ ಎಂದು ಹೇಳಿದರು.

ಈ ಯೋಜನೆಯ ಪ್ರಯೋಜನ ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಿಗೂ ದೊರೆಯಬೇಕೆಂಬ ಬೇಡಿಕೆಯಿದ್ದು, ನೀರು ಹಂಚಿಕೆ ಹಾಗೂ ಯೋಜನೆಯ ಅನುಷ್ಠಾನದ ಕುರಿತು ರಾಜಕೀಯವಾಗಿ ಆರೋಪ, ಪ್ರತ್ಯಾರೋಪ ಮಾಡುವ ಬದಲು ಜನರ ಹಿತದೃಷ್ಟಿಯಿಂದ ಕೆಲಸ ಮಾಡಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬಡವರು, ಮಹಿಳೆಯರು ಹಾಗೂ ಯುವ ಜನರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ೨,೦೦೦ ರೂ., ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಅನ್ನಭಾಗ್ಯ ಯೋಜನೆಯಡಿ ಉಚಿತ ಅಕ್ಕಿ ಹಾಗೂ ಯುವನಿಧಿ ಯೋಜನೆಯಡಿ ವಿದ್ಯಾವಂತ ನಿರುದ್ಯೋಗಿ ಯುವಜನರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಇಂತಹ ಯೋಜನೆಗಳು ಬಡ ಕುಟುಂಬಗಳ ಬದುಕಿಗೆ ನೆರವಾಗಿವೆ ಎಂದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನ ಪೂರೈಸಿದ್ದು, ರೈತರ ಪರವಾಗಿ ಹಲವು ಮಹತ್ವದ ಘೋಷಣೆಗಳನ್ನು ಮಾಡುವ ನಿರೀಕ್ಷೆಯಿದೆ ಎಂದು ತಮ್ಮಯ್ಯ ಹೇಳಿದರು.

ರಾಜ್ಯ ಬರ ಪರಿಸ್ಥಿತಿಯಿಂದ ತತ್ತರಿಸುತ್ತಿರುವ ಸಂದರ್ಭದಲ್ಲಿ ಜನಪರವಾಗಿ ಕೆಲಸ ಮಾಡುವುದು ಚುನಾಯಿತ ಪ್ರತಿನಿಧಿಗಳ ಕರ್ತವ್ಯ. ತಾವು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ರೈತರು ಮತ್ತು ಬಡವರ ಪರವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಬೆಳವಾಡಿ ಕೆರೆ ತುಂಬಿ ಕೋಡಿ ಬಿದ್ದಿರುವುದು ಈ ಭಾಗದ ಜನರಿಗೆ ಸಂತಸದ ಸಂಗತಿ ಎಂದರು.

ಈ ಭಾಗದ ಜನರು ಹಲವು ವರ್ಷಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿದ್ದರು. ನೀರಿನ ಕೊರತೆಯಿಂದ ತೋಟಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದೆ ಬೇರೆಡೆಗೆ ತೆರಳುವ ಪರಿಸ್ಥಿತಿ ಎದುರಾಗಿತ್ತು. ಎತ್ತಿನಹೊಳೆ ಯೋಜನೆಯಿಂದ ಇದೀಗ ಕೆರೆಗೆ ನೀರು ಬಂದಿರುವುದರಿಂದ ರೈತರು ಹಾಗೂ ಗ್ರಾಮಸ್ಥರ ಮುಖದಲ್ಲಿ ಸಂತಸ ಮೂಡಿದೆ ಎಂದು ಹೇಳಿದರು.

ಚುನಾವಣೆಗೆ ಮುನ್ನ ಈ ಭಾಗಕ್ಕೆ ನೀರು ತರುವ ಭರವಸೆ ನೀಡಲಾಗಿತ್ತು. ಅದರಂತೆ ಸರ್ಕಾರ ಎತ್ತಿನಹೊಳೆ ಯೋಜನೆಯ ಮೂಲಕ ನೀರು ತರುವ ಕಾರ್ಯ ಮಾಡಿದೆ. ಬೆಳವಾಡಿ ಮಾತ್ರವಲ್ಲದೆ ಸುತ್ತಮುತ್ತಲಿನ ಎಲ್ಲ ಕೆರೆಗಳಿಗೂ ನೀರು ತುಂಬಿಸುವುದು ಸರ್ಕಾರದ ಆಶಯವಾಗಿದೆ ಎಂದು ಹೇಳಿದರು.

ನೀರಿದ್ದರೆ ಮಾತ್ರ ಕೃಷಿ, ತೋಟಗಾರಿಕೆ ಹಾಗೂ ಗ್ರಾಮೀಣ ಜೀವನ ಸುಗಮವಾಗಲು ಸಾಧ್ಯ. ಆದ್ದರಿಂದ ಕೆರೆಗಳ ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸುವುದು ಹಾಗೂ ನಿರಂತರವಾಗಿ ನೀರು ಲಭ್ಯವಾಗುವಂತೆ ಮಾಡುವ ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬೆಳವಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಿರಾಜ್ ಉನ್ನಿಸಾ, ಕಾಂಗ್ರೆಸ್ ಮುಖಂಡರಾದ ಅಮೀರ್ ಜಾನ್, ಭಾಗ್ಯ ಚಂದ್ರಶೇಖರ್, ಗ್ರಾಮ ಪಂಚಾಯಿತಿ ಸದಸ್ಯರಾದ ಸುಶೀಲ ಕೃಷ್ಣಮೂರ್ತಿ, ರಂಗಸ್ವಾಮಿ, ಪರಮೇಶ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಶಂಕರ ನಾಯಕ್, ಮುಖಂಡರಾದ ಕೆಂಗೆಗೌಡ, ನಾಗೇಗೌಡ, ಆನಂದ, ಕೃಷ್ಣಮೂರ್ತಿ, ಅಚ್ಯುತ್ ಹಾಗೂ ಗ್ರಾಮಸ್ಥರು ಇದ್ದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಯಲು ಸೀಮೆಗೆ ಭದ್ರೆ ಹೋರಾಟಗಾರರ ಕಿತ್ತಾಟ ಏಕೆ: ಎಂ.ಜಿ ರಂಗಸ್ವಾಮಿ ಪ್ರಶ್ನೆಸ್ವಾಭಿಮಾನಿ ಸಶಕ್ತ ಸಮಾಜ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಮಹತ್ವದ್ದಾಗಿದೆ: ಶಾಂತಾ ಸುರೇಂದ್ರಜೀವಸಂಕುಲ ಉಳಿವಿಗೆ ಪ್ರಕೃತಿದೊಡ್ಡ ಶಕ್ತಿ-ಎಸ್.ಬಸವರಾಜುಜನಸಾಮಾನ್ಯರ ಪ್ರಗತಿಗಾಗಿ ಸರ್ಕಾರದ ಮಹತ್ವದ ಯೋಜನೆಗಳುಕೋಟೆನಾಡಿಗೆ ಹರಿದ ಭದ್ರಾ ನೀರು: ಗೊನೂರು ಕೆರೆಗೆ 'ಮೇಲ್ಭದ್ರಾ' ಸ್ಪರ್ಶ—ರೈತರ ಹರ್ಷ!ಕೆಪಿಎಸ್ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ—ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ಭಸ್ಮ!ಸರ್ಕಾರ ‘ಸರಿಯಾದ ದಿಕ್ಕಿನಲ್ಲಿ’ ಸಾಗುತ್ತಿದೆ; ಸಿದ್ದರಾಮಯ್ಯ! ಸಿಎಂ ಡಿ.ಕೆ ಶಿವಕುಮಾರ್‌ಸರ್ಕಾರಕ್ಕೆ 100 ದಿನದ ಸಂಭ್ರಮ: ಹೊಸ ಯೋಜನೆಗಳ ಮಹಾಪೂರ!ಸಚಿವ ಸತೀಶ್ ಜಾರಕಿಹೊಳಿ ಮತ್ತು ಆಪ್ತರ ನಿವಾಸಗಳ ಮೇಲೆ 2ನೇ ದಿನವೂ ಇ.ಡಿ ದಾಳಿ: ಸುದೀರ್ಘ ಪರಿಶೀಲನೆರಾಜ್ಯ ಕಾಂಗ್ರೆಸ್‌ಗೆ ನೂತನ 35 ಜಿಲ್ಲಾಧ್ಯಕ್ಷರ ನೇಮಕ: ಎಐಸಿಸಿ ಅಧಿಕೃತ ಪಟ್ಟಿ ಬಿಡುಗಡೆ