Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸಂಡೂರು ಕ್ಷೇತ್ರದಲ್ಲಿ ಶಾಂತಿಯುತ ಶೇ.76.24ರಷ್ಟು ಮತದಾನ

ಚಂದ್ರವಳ್ಳಿ ನ್ಯೂಸ್, ಸಂಡೂರು:
ಸಂಡೂರು ವಿಧಾನಸಭೆ ಉಪಚುನಾವಣೆಗೆ ಸಂಬಂಧಿಸಿದಂತೆ
, ಸಂಡೂರು ಕ್ಷೇತ್ರ ವ್ಯಾಪ್ತಿಯ 253 ಮತಗಟ್ಟೆಗಳಲ್ಲಿ ನ.13 ರಂದು ಬುಧವಾರದಂದು ಸುಸೂತ್ರ ಹಾಗೂ ಶಾಂತಿಯುತ ಮತದಾನ ನಡೆದಿದ್ದು, ಒಟ್ಟು ಶೇ.76.24 ರಷ್ಟು ಮತದಾನ ಪ್ರಮಾಣವಾಗಿದೆ.

ಚುನಾವಣಾ ಆಯೋಗದ ನಿಯಮದಂತೆ ಮತದಾನ ಪ್ರಕ್ರಿಯೆಯು ಬೆಳಿಗ್ಗೆ 07 ಗಂಟೆಗೆ ಪ್ರಾರಂಭಗೊಂಡಿತು. ನಿಧಾನಗತಿಯಿಂದ ಆರಂಭಗೊಂಡು ಸಂಜೆ ಹೊತ್ತಿಗೆ ಬಿರುಸು ಪಡೆಯಿತು. ಎಲ್ಲಾ ಮತಗಟ್ಟೆಗಳಲ್ಲಿ ಮತದಾರರು ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದು ಕಂಡುಬಂದಿತು.

ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಶೇ.09.07ರಷ್ಟು, 11 ಗಂಟೆವರೆಗೆ ಶೇ.26.96ರಷ್ಟು, ಮಧ್ಯಾಹ್ನ 1 ಗಂಟೆವರೆಗೆ ಶೇ.43.46ರಷ್ಟು, ಮಧ್ಯಾಹ್ನ 3 ಗಂಟೆವರೆಗೆ ಶೇ.58.10ರಷ್ಟು, ಸಂಜೆ 5 ಗಂಟೆವರೆಗೆ 71.47ರಷ್ಟು ಹಾಗೂ ಮತದಾನ ಅವಧಿ ಮುಕ್ತಾಯನಂತರ ಅಂತಿಮವಾಗಿ ಶೇ.76.24ರಷ್ಟು ಮತದಾನದ ಪ್ರಮಾಣ ದಾಖಲಾಗಿದೆ.

ಮತದಾನ ವಿವರ:
ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2,36,402 ಮತದಾರರಿದ್ದು
, ಅದರಲ್ಲಿ 1,80,189 ಮತದಾರರು ತಮ್ಮ ಮತದ ಹಕ್ಕನ್ನು ಚಲಾಯಿಸಿದ್ದಾರೆ.

1,17,935 ಪುರುಷ ಮತದಾರರಲ್ಲಿ 90,922 ಪುರುಷರು ಮತ ಚಲಾಯಿಸಿದ್ದಾರೆ. 1,18,438 ಮಹಿಳಾ ಮತದಾರರಲ್ಲಿ 89,252 ಮಹಿಳೆಯರು ಮತದಾನ ಮಾಡಿದ್ದಾರೆ ಮತ್ತು 29 ಇತರೆ ಮತದಾರರ ಪೈಕಿ 12 ಮಂದಿ ಮತದಾನ ಮಾಡಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!