Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ (
PLD Bank)ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಚುನಾವಣೆ ಇಂದು ನಡೆದಿದ್ದು, ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಮೂರು ಪಕ್ಷಗಳು ಮೈತ್ರಿ ಸಾಧಿಸಿ, ತಲಾ 20 ತಿಂಗಳ ಅಧಿಕಾರ ಹಂಚಿಕೆ ಮಾಡಿಕೊಂಡಿವೆ.

ಈ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಜೆಡಿಎಸ್‌ಬೆಂಬಲಿತ ರಾಜಘಟ್ಟ ಶಿವಣ್ಣ, ಉಪಾಧ್ಯಕ್ಷರಾಗಿ ಜೆಡಿಎಸ್‌ನ ಎಲ್.ಕೆ.ರಾಮಚಂದ್ರ ಬಾಬು (ಮಿಲ್ಕ್ ಬಾಬು)ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿ ನಾಗಮಣಿ ತಿಳಿಸಿದ್ದಾರೆ.

ಮೊದಲ ಅವಧಿಗೆ ಜೆಡಿಎಸ್, ಎರಡನೇ ಅವಧಿಗೆ ಬಿಜೆಪಿ ಹಾಗೂ ಮೂರನೇ ಅವಧಿಗೆ ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ತಾಲೂಕು ಅಧ್ಯಕ್ಷ ಜಿ ಲಕ್ಷ್ಮೀಪತಯ್ಯ, ಹಿರಿಯು ಮುಖಂಡರಾದ ಎ.ನರಸಿಂಹಯ್ಯ ಹರೀಶ್ ಗೌಡ, ಹುಸ್ಕೂರು ಆನಂದ್‌, ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್, ತೆಂಗು ನಾರು ಮಂಡಳಿಯ ರಾಜ್ಯಾಧ್ಯಕ್ಷ ಗಂಟಿಗಾನಹಳ್ಳಿ ಬಾಬು, ಜೆಡಿಎಸ್ ಮುಖಂಡ BS ಹರೀಶ್ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST