Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆತ್ಮೀಯವಾಗಿ ಬೀಳ್ಕೊಟ್ಟ ರಾಜ್ಯಪಾಲ ಗೆಹ್ಲೋಟ್ ಹಾಗೂ ಡಿ.ಕೆ. ಶಿವಕುಮಾರ್

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ರಾತ್ರಿ ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದರು.

ಜುಲೈ-1ರ ಬುಧವಾರ ಪುನಃ ಬೆಂಗಳೂರು ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಆಂಧ್ರಪ್ರದೇಶಕ್ಕೆ ತೆರಳಿ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಲ್ಲಿ ಭಾಗವಹಿಸಿ ಮರಳಿ ಬೆಂಗಳೂರಿಗೆ ಆಗಮಿಸಿ ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ನವದೆಹಲಿಗೆ  ಪ್ರಯಾಣಿಸಿದರು.

ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಸಾರಿಗೆ ಸಚಿವರಾದ ಭೈರತಿ ಸುರೇಶ್, ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಏರ್ ವೈಸ್ ಮಾರ್ಷಲ್ ಡಿ.ಎಸ್. ಡಂಗಿ, ಮೇಜರ್ ಜನರಲ್ ಮೋಹಿತ್ ಮಹೇಂದ್ರೂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ಸೇರಿದಂತೆ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.