Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಜಿಲ್ಲಾಧಿಕಾರಿ

ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
ಭಯೋತ್ಪಾದಕರು/ದೇಶ ವಿರೋಧಿಗಳು ಡ್ರೋನ್ ಗಳು
, ರಿಮೋಟ್ ಕಂಟ್ರೋಲ್ಡ್  ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಧ್ಯತೆಯಿರುವುದರಿಂದ ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

   ಭಾರತ ಮತ್ತು ಪಾಕಿಸ್ಥಾನ ದೇಶಗಳ ನಡುವಿನ ಬಿಗುವಿನ ವಾತಾವರಣ ಈಗ ಶಮನಗೊಂಡಿದೆ.  ಅದಾಗ್ಯೂ ತುರ್ತು ಸಂದರ್ಭಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವಂತಹ ಸೂಕ್ಷ್ಮವಲಯಗಳನ್ನು ಗುರುತಿಸಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭದ್ರತಾ ಕಾಳಜಿಗಳ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ.

   ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭದ್ರತೆಯನ್ನು ಒದಗಿಸುವ ಎಲ್ಲಾ ಖಾಸಗಿ ಭದ್ರತಾ ಏಜೆನ್ಸಿಗಳಿಗೆ ಮಾಹಿತಿ ನೀಡಲಾಗಿದ್ದು ಕಣ್ಗಾವಲು ಅಥವಾ ಇತರ ಉದ್ದೇಶಗಳಿಗಾಗಿ ಡ್ರೋನ್ ಗಳನ್ನು ನಿಯೋಜಿಸುವುದನ್ನು ತಪ್ಪಿಸಲು ಸಲಹೆಗಳನ್ನು ಸೂಚಿಸಲಾಗಿದೆ. 

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವಂತಹ ಸೂಕ್ಷ್ಮವಲಯಗಳು
ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಇಂಡಿಯನ್ ಆಯಿಲ್ ಸ್ಕೈಟ್ಯಾಂಕಿಂಗ್ಲಿ, ದೊಡ್ಡಬಳ್ಳಾಪುರ: ಮುಶಾಶಿ ಆಟೋ ಪಾರ್ಟ್ಸ್ ಪ್ರೈ. ಲಿಮಿಟೆಡ್.

ಹೊಸಕೋಟೆ: IOCL - ಇಂಡೇನ್ ಬಾಟ್ಲಿಂಗ್ ಪ್ಲಾಂಟ್, BPCL, IOCL, HPCL, MRPL, ನೆಲಮಂಗಲ:ಜ್ಯೋತಿಗ್ಯಾಸ್ ಪ್ರೈ ಲಿಮಿಟೆಡ್, ಇಂಡೋಗ್ಯಾಸ್, ಟೋಟಲ್ ಆಯಿಲ್ ಇಂಡಿಯಾ ಪ್ರೈ. ಲಿಮಿಟೆಡ್, ಏಜಿಸ್ ಗ್ಯಾಸ್ LPG ಪ್ರೈವೇಟ್ ಲಿಮಿಟೆಡ್, ಸ್ನೇಹಾ ಪೆಟ್ರೋಲಿಯಂ ಪ್ರೈ. ಲಿಮಿಟೆಡ್, ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್ (ರೋಲಿಂಗ್ ಮಿಲ್ ವಿಭಾಗ), ಜ್ಯೋತಿಗ್ಯಾಸ್  ಪ್ರೈ. ಲಿಮಿಟೆಡ್.

ಸಂಭವನೀಯ ವಿಧ್ವಂಸಕ ಕೃತ್ಯಗಳನ್ನು ತಡೆಗಟ್ಟಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಇಲಾಖೆಗೆ ಭದ್ರತೆಯನ್ನು ಒದಗಿಸಲು ತಿಳಿಸಿದೆ. ಜೊತೆಗೆ ಅಂತಹ ಚಟುವಟಿಕೆಗಳ ಮೇಲೆ ಕೆಲವು ನಿರ್ಬಂಧಗಳನ್ನು ಹಾಕುವುದು ಅಗತ್ಯವಾಗಿದೆ. ಜಿಲ್ಲಾ ಅಗ್ನಿಶಾಮಕದಳ ತುರ್ತು ಸಂದರ್ಭಗಳಲ್ಲಿ ಸಿದ್ಧರಿರಬೇಕು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ವಿಶೇಷವಾಗಿ ನಾಗರಿಕರಿಗೆ ಯಾವುದೇ ತೊಂದರೆ ಮತ್ತು ಅಪಘಾತಗಳನ್ನು ನಿರ್ವಹಿಸಲು ಸನ್ನದ್ಧವಾಗಿರಲು ಜಾಗೃತಿ ಮೂಡಿಸಲಾಗುವುದು.

 ನಕಲಿ ಸುದ್ದಿಗೆ ಕಡಿವಾಣ-
ಯಾವುದೇ ನಕಲಿ ಅಥವಾ ಸುಳ್ಳು ಸುದ್ದಿ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸರಣ
, ಬಿತ್ತರವಾಗುವ ಸಂಗತಿಗಳನ್ನು ತಕ್ಷಣವೇ ನೈಜ ಸಂಗತಿಯೊಂದಿಗೆ ಪರಿಶೀಲಿಸಿ ಕ್ರಮಕೈಗೊಂಡು, ಇವುಗಳ ಮೂಲವನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

ಸಮುದಾಯಗಳ ಮುಖಂಡರು ಮತ್ತು ಇತರ ಪ್ರಮುಖ ನಾಗರಿಕರೊಂದಿಗೆ ವಾಟ್ಸಾಪ್ ಗುಂಪುಗಳು ಸಕ್ರಿಯವಾಗಿರಬೇಕು, ಯಾವುದೇ ಸುಳ್ಳು ವದಂತಿಗಳು ಕಂಡು ಬಂದಾಗ ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಂಟ್ರೋಲ್ ರೂಂ. ಸಂಖ್ಯೆ: 080-28388005 ಗೆ ಸಂಪರ್ಕಿಸಿ ಮಾಹಿತಿಯನ್ನು ತಿಳಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!