Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಸೆಪ್ಟೆಂಬರ್ ತಿಂಗಳಿಗೆ ಸರ್ಕಾರಕ್ಕೆ ವರದಿ, ಪ್ರೊ.ಗೋವಿಂದ ರಾವ್:

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಆರ್ಥಿಕ ತಜ್ಞರೂ ಆಗಿರುವ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಅಧ್ಯಕ್ಷ ಪ್ರೊ. ಎಂ. ಗೋವಿಂದರಾವ್ ಅವರು ಮಾತನಾಡಿ, 23 ವರ್ಷಗಳ ಹಿಂದೆ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ರಾಜ್ಯದ 175 ತಾಲ್ಲೂಕುಗಳನ್ನು ಅಧ್ಯಯನ ಮಾಡಿ ಡಾ. ಡಿ.ಎಂ. ನಂಜುಂಡಪ್ಪ ಅವರು 39 ಅತ್ಯಂತ ಹಿಂದುಳಿದ ತಾಲ್ಲೂಕುಗಳು, 0 ಅತಿ ಹಿಂದುಳಿದ ತಾಲ್ಲೂಕುಗಳು ಹಾಗೂ 35 ಹಿಂದುಳಿದ ತಾಲ್ಲೂಕುಗಳು ಎಂದು ಹಿಂದುಳಿದಿರುವಿಕೆಯನ್ನು ಗುರುತಿಸಿದ್ದರು.

 ಇದರಲ್ಲಿ ಉತ್ತರ ಕರ್ನಾಟಕ ಭಾಗದ 26 ಅತ್ಯಂತ ಹಿಂದುಳಿದ ತಾಲ್ಲೂಕುಗಳಾಗಿದ್ದರೆ, ದಕ್ಷಿಣ ಕರ್ನಾಟಕದ 13 ತಾಲ್ಲೂಕುಗಳು ಇದ್ದವು.  ಇದರ ನಿವಾರಣೆಗಾಗಿ ಮಾಡಿದ ಶಿಫಾರಸ್ಸಿನ ಅನ್ವಯ, ಸರ್ಕಾರ 2007-08 ರಿಂದ 2023-24 ರವರೆಗೆ 45,789 ಕೋಟಿ ರೂ. ಗಳ ಹಂಚಿಕೆಯಾಗಿ, 37,661 ಕೋಟಿ ರೂ. ಬಿಡುಗಡೆಯಾಗಿದ್ದು, ಪೈಕಿ 34,381 ಕೋಟಿ ರೂ. ಖರ್ಚಾಗಿದೆ.   ಪ್ರಸ್ತುತ ತಾಲ್ಲೂಕುಗಳ ಸಂಖ್ಯೆ 240 ಆಗಿದೆ.  ಇಷ್ಟೊಂದು ಹಣ ಖರ್ಚು ಮಾಡಿದ ಬಳಿಕ, ತಾಲ್ಲೂಕುಗಳ ಹಿಂದುಳಿದಿರುವಿಕೆ ಕಡಿಮೆ ಆಗಿದೆಯೇ, ಯಾವೆಲ್ಲಾ ಕ್ಷೇತ್ರದಲ್ಲಿ ಏನೇನು ಅಭಿವೃದ್ಧಿಯಾಗಿದೆ.

 ಹಣ ನೀಡಿದರೂ ಅಭಿವೃದ್ಧಿ ಆಗಲಿಲ್ಲವೆಂದರೆ ಅದಕ್ಕೆ ಕಾರಣಗಳೇನು, ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸಿ, ರಾಜ್ಯದಲ್ಲಿನ ಅಸಮತೋಲನ ಸರಿಪಡಿಸಿ, ಸಮಗ್ರ ಕರ್ನಾಟಕ ಅಭಿವೃದ್ಧಿಗೊಳ್ಳಲು ಏನೆಲ್ಲ ಕ್ರಮ ವಹಿಸಬೇಕು ಎನ್ನುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯನ್ನು ರಚಿಸಿದ್ದಾರೆ.  ಸಮಿತಿಯನ್ನು ಮಾರ್ಚ್-2024ರಲ್ಲಿ ರಚಿಸಲಾಗಿದ್ದರೂ, ಸೆಪ್ಟೆಂಬರ್-2024 ವೇಳೆಗೆ ಪೂರ್ಣ ಪ್ರಮಾಣದಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಕಾರ್ಯನಿರ್ವಹಿಸಲು ಪ್ರಾರಂಭಿಸಿತು.

 ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಮತ್ತು ಬೆಂಗಳೂರು ನಗರ ಜಿಲ್ಲೆಗಳು ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ದಿಯ ವೇಗ ಹೊಂದಿದ್ದು, ಉಳಿದ ಜಿಲ್ಲೆಗಳಲ್ಲಿ ಅಭಿವೃದ್ಧಿ ವೇಗ ಪಡೆದಿಲ್ಲ.  ಮೂಲಭೂತ ಸೌಕರ್ಯ, ವಿದ್ಯುತ್, ರಸ್ತೆ, ಹಣಕಾಸು, ಶಿಕ್ಷಕರು ಮತ್ತು ವಿದ್ಯಾರ್ಥಿ ಅನುಪಾತ, ಸಾಕ್ಷರತೆ, ವೈದ್ಯಕೀಯ ವ್ಯವಸ್ಥೆ, ಕೈಗಾರಿಕೆ, ನೀರಾವರಿ, ಕೃಷಿ, ಸೇವಾ ವಲಯ ಮುಂತಾದ 32 ಸೂಚ್ಯಂಕಗಳನ್ನು ಆಧರಿಸಿ ಸಮಿತಿಯು ವರದಿ ಸಂಗ್ರಹಿಸಲಿದೆ.

 ಸಮಿತಿಯು ಪ್ರತಿ ಜಿಲ್ಲೆಗೆ ಭೇಟಿ ನೀಡಿ, ಅಲ್ಲಿನ ಜನರ ಅನುಭವ, ಅಭಿಪ್ರಾಯಗಳನ್ನು ಪಡೆದು, ಸಂಗ್ರಹಿಸಿದ ಮಾಹಿತಿ, ಅಧ್ಯಯನದ ವರದಿಗಳ ಆಧಾರದಲ್ಲಿ ಅಸಮತೋಲನ ನಿವಾರಣೆ ಹಾಗೂ ಸಮಗ್ರ ಕರ್ನಾಟಕದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಶಿಫಾರಸ್ಸುಗಳ ವರದಿಯನ್ನು ಮುಂಬರುವ ಸೆಪ್ಟೆಂಬರ್ ವೇಳೆಗೆ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದೆ ಎಂದರು.



Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!