Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಬಿ.ಬಸವಲಿಂಗಪ್ಪನವರು ಸಾಮಾಜಿಕ ವ್ಯವಸ್ಥೆಗೆ ಕನ್ನಡಿ ಹಿಡಿದವರು: ಪ್ರೊ. ಮುರುಳೀಧರ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿ. ಬಸವಲಿಂಗಪ್ಪನವರು ದಮನಿತರು
, ಶೋಷಿತ ಸಮುದಾಯಗಳ ಬದುಕಿನ‌ ದಿಕ್ಕನ್ನು ಬದಲಿಸಿದವರು. ಅವರ ಕುರಿತು ಶೈಕ್ಷಣಿಕ ನೆಲೆಗಟ್ಟಿನಲ್ಲಿ ಅಧ್ಯಯನ ನಡೆಸುವುದು ಅಗತ್ಯವಾಗಿದೆ ಎಂದು ಬಿ.ಬಸವಲಿಂಗಪ್ಪನವರ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಸಂಯೋಜಕ ಪ್ರೊ.ಬಿ.ಎಲ್.ಮುರುಳೀಧರ್ ಅಭಿಮತ ವ್ಯಕ್ತಪಡಿಸಿದರು.

ಬೆಂಗಳೂರು ವಿಶ್ವವಿದ್ಯಾಲಯ ಬಿ.ಬಸವಲಿಂಗಪ್ಪನವರ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಕ್ರಾಂತಿಕಾರಿ ಬಿ.ಬಸವಲಿಂಗಪ್ಪನವರ 33ನೇ ಮಹಾಪರಿನಿಬ್ಬಾಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿ. ಬಸವಲಿಂಗಪ್ಪನವರು ಕರ್ನಾಟಕ ಅಂಬೇಡ್ಕರ್ ಎನಿಸಿದ್ದವರು,

ಬಾಬಾ ಸಾಹೇಬರ ದಾರಿಯಲ್ಲಿ ಸಾಗಿ ರಾಜ್ಯ ದಮನಿತರ, ಶೋಷಿತರ, ದಲಿತರ ದನಿಯಾಗಿದ್ದರು‌. ಮಲ ಹೊರುವ ಅನಿಷ್ಟ ಪದ್ದತಿಯನ್ನು ನಿಷೇಧಿಸಿ, ಪೌರ ಕಾರ್ಮಿಕ ಎಂದು ಘೋಷಿಸಿ ಸಾಮಾಜಿಕ ವ್ಯವಸ್ಥೆಗೆ ಕನ್ನಡಿ ಹಿಡಿದರು‌. ರಾಜ್ಯದಲ್ಲಿ ಭೂ ಸುಧಾರಣೆ ನೀತಗಳನ್ನು ಅನುಷ್ಠಾನಗೊಳಿಸಿ, ಅವಕಾಶ ವಂಚಿತರಾದ ದಲಿತರಿಗೆ ವಸತಿ ಸೌಲಭ್ಯ ಕಲ್ಪಿಸಿದರು‌. ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ತಂದರು.

ಆರ್ಥಿಕವಾಗಿ ಹಿಂದುಳಿದ ಪೋಷಕರಿಗೆ ಆರ್ಥಿಕ ಸಹಾಯ ಮಾಡಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡಿದ್ದರು‌. ಬೂಸಾ ಚಳುವಳಿ ಮೂಲಕ ರಾಜ್ಯದ ದಲಿತ ಚಳುವಳಿಗೆ ಹೊಸ ಸ್ವರೂಪ ಮತ್ತು ದಿಕ್ಕನ್ನು ನೀಡಿದರು‌. ತಮ್ಮ ಜೀವಿತಾವಧಿ ಯುದ್ದಕ್ಕೂ ಶೋಷಿತರ ಪರ ದನಿಯಾಗಿದ್ದ ಬಸವಲಿಂಗಪ್ಪ ನವರ ಸಾಮಾಜಿಕ ಚಿಂತನೆ, ದೂರ ದೃಷ್ಟಿ ಕುರಿತು ವಿದ್ಯಾರ್ಥಿಗಳ ಅಧ್ಯಯನ ನಡೆಸಬೇಕು. ಶೈಕ್ಷಣಿಕ ಸಂಶೋಧನಾ ನೆಲೆಗಟ್ಟಿನಲ್ಲಿ ಬಸವಲಿಂಗಪ್ಪನವರ ಅಧ್ಯಯನ ನಡೆಯಬೇಕು ಎಂದರು.

ನಿಕಟಪೂರ್ವ ಸಂಯೋಜಕ ಪ್ರೊ.ಟಿ.ಹೆಚ್ ಮೂರ್ತಿ‌ರವರು ಮಾತನಾಡಿ ಬಾಬಾಸಾಹೇಬರನ್ನು ಸಾಕ್ಷಿ ಪ್ರಜ್ಞೆಯನ್ನಾಗಿಸಿಕೊಂಡು ಬಿ.ಬಸವಲಿಂಗಪ್ಪನವರು ಆಡಳಿತ ನಡೆಸಿದ್ದಾರೆ. ಬಸವಲಿಂಗಪ್ಪನವರ ಆಶಯ ಪ್ರಸ್ತುತತೆಗೆ ಅವಶ್ಯಕವಾಗಿದೆ. ಸಮಸಮಾಜದ ನಿರ್ಮಾಣಕ್ಕೆ ಮಾದರಿಯಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ ಬಸವಲಿಂಗಪ್ಪನವ ಅಧ್ಯಯನ ಕೇಂದ್ರ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಬೆಳಕು ತೋರಿದೆ. ಆದರೂ ಶಾಸನಬದ್ದ ನಿಬಂಧನೆಗಳ ಕೊರತೆಯಿಂದ ಅಧ್ಯಯನ ಮತ್ತು ಸಂಶೋಧನಾ ಕೇಂದ್ರಗಳ ಬೆಳವಣಿಗೆ ಕುಂಠಿತವಾಗಿದೆ. ವಿಶ್ವವಿದ್ಯಾಲಯ ಆಡಳಿತ ಮಂಡಳಿ ಈ ಕುರಿತು ಸೂಕ್ತ ಕ್ರಮ ವಹಿಸಬೇಕು" ಎಂದು‌ಮನವಿ ಮಾಡಿದರು.

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ‌.ಜಯಕರ ಎಸ್.ಎಂ ಅಧ್ಯಕ್ಷತೆ ವಹಿಸಿ ಮಾತನಾಡಿ ಬಸವಲಿಂಗಪ್ಪನವರು ಬೂಸಾ ಚಳುವಳಿ ಹಾಗೂ ಸಾಮಾಜಿಕ ಕ್ರಾಂತಿ ಮೂಲಕ ಸಮಾಜದ ಮೇಲೆ ‌ಪ್ರಭಾವ ಬೀರಿದರು‌. ಅವರ ಆದರ್ಶ, ಸಾಧನೆ, ಚಿಂತನೆ ಮುಂದಿನ ತಲೆಮಾರಿಗೆ ಕೊಂಡಯ್ಯುವ ಕೆಲಸವಾಗಬೇಕು.


ಅಧ್ಯಯನ ಕೇಂದ್ರಗಳು ಜಯಂತಿಗಳಿಗೆ ಸೀಮಿತವಾಗಿರದೆ ಸಂಶೋಧನೆ ಮತ್ತು ಅಧ್ಯಯನಕ್ಕೆ ಪೂರಕವಾಗಿರಬೇಕು. ಆ ನಿಟ್ಟಿನಲ್ಲಿ ಬಸವಲಿಂಗಪ್ಪನವರ ಅಧ್ಯಯನ ಕೇಂದ್ರದ ಪುನಶ್ಚೇತನ, ಪುತ್ಥಳಿ ನಿರ್ಮಾಣ ಮತ್ತು ಗ್ರಂಥಾಲಯ ಸೇರಿದಂತೆ ಅಧ್ಯಯನ ಕೇಂದ್ರದ ಸಂಪೂರ್ಣ ಅಭಿವೃದ್ಧಿ ಎಲ್ಲರ ಜವಾಬ್ದಾರಿಯಾಗಿದೆ. ಶೀಘ್ರವಾಗಿ ಎಲ್ಲಾ ಕಾರ್ಯಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಕುಲಸಚಿವೆ ಕೆ.ಟಿ.ಶಾಂತಲಾ, ಹಿರಿಯ ಅಂಬೇಡ್ಕರ್‌ ವಾದಿಗಳು ಬಿ.ಗೋಪಾಲ್, ಸಿಂಡಿಕೇಟ್ ಸದಸ್ಯ ಬಿ. ಡಿ. ಗಂಗರಾಜ್, ಕ್ಷೇಮಾಭಿವೃದ್ಧಿ ನಿರ್ದೇಶಕ ಪಿ.ಸಿ.ನಾಗೇಶ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿಶೇಷಾಧಿಕಾರಿ ಪ್ರೊ.ಜಿ.ಕೃಷ್ಣಮೂರ್ತಿ, ವಿವಿಯ ಭೋಧಕ - ಭೋಧಕೇತರ ವರ್ಗದವರು, ವಿದ್ಯಾರ್ಥಿ ಮುಖಂಡ ಚಂದ್ರು ಪೆರಿಯಾರ್, ಸಂಶೋಧನಾ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು, ಅಭಿಮಾನಿಗಳು ಮತ್ತಿತರರು ಉಪಸ್ಥಿತರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!