Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಸೀದಿ ಮುಂದೆ ಗಣೇಶ ಮೆರವಣಿಗೆ ನಿಷೇಧ: ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ರೋಶ

ಚಂದ್ರವಳ್ಳಿ ನ್ಯೂಸ್, ಮೈಸೂರು:
ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ನಡೆದ ಶಾಂತಿ ಸಭೆಯಲ್ಲಿ ಇನ್‌ಸ್ಪೆಕ್ಟರ್ ಧನಂಜಯ್ ಅವರು ಆಡಿರುವ ವಿವಾದಾತ್ಮಕ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಚರ್ಚೆ ಹಾಗೂ ಆಕ್ರೋಶಕ್ಕೆ ಗ್ರಾಸವಾಗಿದೆ.

ಶಾಂತಿ ಸಭೆಯಲ್ಲಿ ಮಾತನಾಡಿದ್ದ ಇನ್‌ಸ್ಪೆಕ್ಟರ್ ಧನಂಜಯ್, "ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ. ಅಕಸ್ಮಾತ್ ಹೋದರೆ ಏನು ಮಾಡುತ್ತೇವೆ ಎಂಬುದನ್ನು ಮಾಡಿ ತೋರಿಸ್ತೀನಿ.

Advertisement

ಈ ಬಾರಿ ಮಸೀದಿ ಮುಂದೆ ಪಟಾಕಿ ಹೊಡೆದರೆ ಗ್ರಹಚಾರ ಬಿಡಿಸ್ತೇನೆ" ಎಂದು ಎಚ್ಚರಿಕೆ ನೀಡಿದ್ದರು. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಅಲ್ಲಿ ಭದ್ರತೆ ಕಲ್ಪಿಸಲಾಗುವುದು ಎಂದ ಅವರು, ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮುನ್ನವೇ ಮೆರವಣಿಗೆಯ ನಿಗದಿತ ರೂಟ್ ಅನ್ನು ಕಡ್ಡಾಯವಾಗಿ ನೀಡಬೇಕು ಮತ್ತು ಯಾವುದೇ ಕಾರಣಕ್ಕೂ ಡಿಜೆ ಮಾದರಿಯ ಸ್ಪೀಕರ್ ಬಳಸಲು ಅವಕಾಶವಿಲ್ಲ ಎಂದು ಎಚ್ಚರಿಸಿದ್ದರು.

ಇನ್‌ಸ್ಪೆಕ್ಟರ್ ಅವರ ಈ ಒರಟು ಧ್ವನಿಯ ಮಾತುಗಳು ಹಿಂದೂ ಯುವಕರನ್ನು ಕೆರಳಿಸಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.

ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿ: ಇನ್‌ಸ್ಪೆಕ್ಟರ್ ಧನಂಜಯ್ ಅವರ ಹೇಳಿಕೆ ತೀವ್ರ ವಿವಾದ ಸೃಷ್ಟಿಸುತ್ತಿದ್ದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಮತ್ತೊಮ್ಮೆ ಆ ರೀತಿಯಾಗಿ ಮಾತನಾಡಿದರೆ ಠಾಣೆಗೆ ನುಗ್ಗುವುದಾಗಿ ಸವಾಲು ಹಾಕಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, "ಇನ್‌ಸ್ಪೆಕ್ಟರ್ ಆದವರು ರೋಡ್ ಸೈಡ್ ತರ್ಲೆ ರೌಡಿಗಳಂತೆ ಮಾತನಾಡಿದ್ದಾರೆ. ಇದು ತೀರಾ ಖಂಡನೀಯ" ಎಂದು ಕಿಡಿಕಾರಿದರು. "ಆ ಮನುಷ್ಯ ವೀರಾವೇಶದಿಂದ ಮಾತನಾಡಿದ್ದಾರೆ, ಅಂತಹ ಬಹಳಷ್ಟು ಮಂದಿಯನ್ನು ನಾವು ನೋಡಿದ್ದೇವೆ. ಇನ್‌ಸ್ಪೆಕ್ಟರ್ ಸ್ಥಾನದಲ್ಲಿರುವವರು ಗೌರವಯುತವಾಗಿ ಮಾತನಾಡಬೇಕು. ಆ ಹುದ್ದೆಗೆ ತಕ್ಕಂತೆ ಸಂಯಮದಿಂದ ನಡೆದುಕೊಳ್ಳಬೇಕು" ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೋಮಶೆಟ್ಟಿ ಹಳ್ಳಿ ಕೋಳಿ ಫಾರಂ ಗೆ ಚಿರತೆ ದಾಳಿ.. ಆತಂಕ ಗೊಂಡ ಗ್ರಾಮಸ್ಥರುಭದ್ರಾ ನೀರು ಕೆರೆಗಳಿಗೆ ಹರಿಯದೆ ಅಯೋಮಯ: ತಾವಂದಿ ಕೆರೆಗಳ ಭರ್ತಿ ಕೇವಲ ಕನಸಿನ ಮಾತು!75 ವರ್ಷ ಮೇಲ್ಪಟ್ಟ ಬಿಪಿಎಲ್‌ಹಿರಿಯ ನಾಗರಿಕರಿಗೆ ಬೆರಳಚ್ಚು ವಿನಾಯಿತಿದಾವಣಗೆರೆ ಪೂರ್ವ ವಲಯದ ನೂತನ ಐಜಿಪಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಎನ್. ಸತೀಶ್ ಕುಮಾರ್ ನೇಮಕಶಾಲಾ-ಕಾಲೇಜುಗಳ ಸಮಯ ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ ಪ್ರತಾಪ್‌ಸಿಂಹ ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರ ಗ್ಯಾರಂಟಿ ಎಚ್ಚರಿಕೆಸಚಿವ ಸತೀಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹ: ಆರ್. ಅಶೋಕ್ಕಾಂಗ್ರೆಸ್‌ಸರ್ಕಾರದಿಂದ ಗಣೇಶ ಹಬ್ಬಕ್ಕೆ ಕಿರುಕುಳ: ಇನ್ಸ್‌ಪೆಕ್ಟರ್‌ ರನ್ನು ಸಸ್ಪೆಂಡ್ ಮಾಡಲಿ- ಆರ್.ಅಶೋಕ್ಗಣೇಶ ಬಿಜೆಪಿಯವರ ಆಸ್ತಿಯಲ್ಲ, ಎಲ್ಲರ ಆಸ್ತಿ: ಮುಖ್ಯಮಂತ್ರಿ ಡಿಕೆಶಿಇಡಿ ಹಿರಿಯ ಅಧಿಕಾರಿಗಳ ತಾಂತ್ರಿಕ ಸಮಿತಿಯಿಂದ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಪ್ರಮುಖ ಹಗರಣಗಳ ತನಿಖೆ ಚುರುಕು