ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು, ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಪವರ್ ಸ್ಟಾರ್ ಡಾ. ಪುನೀತ್ ರಾಜ್ಕುಮಾರ್ ಅವರ 5ನೇ ವರ್ಷದ ಪುಣ್ಯಸ್ಮರಣೆಯನ್ನು ಅಭಿಮಾನಿಗಳು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಿದರು.
ಗ್ರಾಮದ ಶ್ರೀ ದುರ್ಗಾಂಬಿಕ ದೇವಸ್ಥಾನದ ಬಳಿ ಪುನೀತ್ ಅವರ ಭಾವಚಿತ್ರಕ್ಕೆ ಮೇಣದಬತ್ತಿ ಬೆಳಗಿ, ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪ್ಪು ಅವರ ಸಾಮಾಜಿಕ ಕಳಕಳಿ ಹಾಗೂ ಸಾಧನೆಗಳನ್ನು ಸ್ಮರಿಸಿ ಯುವಕರು ಮತ್ತು ಮುಖಂಡರು ಭಾವುಕರಾದರು.
ಅಪ್ಪು ಅವರ ಹಾದಿಯಲ್ಲಿ ಸಾಗುವ ಸಂದೇಶದೊಂದಿಗೆ, ಅಭಿಮಾನಿ ಬಳಗದ ವತಿಯಿಂದ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಗ್ರಾಮದ ಯುವಕರು, ಮಹಿಳೆಯರು, ಮಕ್ಕಳು ಹಾಗೂ ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.




