Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಅನುಮತಿ ಶೀಘ್ರ ಕಾಮಗಾರಿ ಆರಂಭ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ರೈಲ್ವೇ ನಿಲ್ದಾಣದ ಹತ್ತಿರದ ಚಿತ್ರದುರ್ಗ-ದಾವಣಗೆರೆ ರಸ್ತೆಯಲ್ಲಿ ದ್ವೀಪಥ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ. ರೈಲ್ವೆ ಇಂಜಿನಿಯರಿಂಗ್ ವಿಭಾಗದಿಂದ ಶೀಘ್ರವೇ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಆರಂಭಿಸುವುದಾಗಿ ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.


ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈಲ್ವೆ ಮೇಲ್ಸೇತುವೆ ಹಾಗೂ ಕೇಂದ್ರೀಯ ವಿದ್ಯಾಲಯ ಸ್ಥಾಪನೆ ಕುರಿತು ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ನಡೆಸಿ ಅವರು ಮಾತನಾಡಿದರು.


ಚಿತ್ರದುರ್ಗ ನಗರದಿಂದ ದಾವಣಗೆರೆ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ, ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಗೇಟ್ ನಂ.15 ರಲ್ಲಿ ರೈಲುಗಳ ಓಡಾಟದ ಸಮಯದಲ್ಲಿ ದಿನಕ್ಕೆ 30 ಬಾರಿ ರೈಲ್ವೆ ಗೇಟ್ ಹಾಕಲಾಗುತ್ತಿದೆ. ಇದರಿಂದ ಸಂಚಾರ ದಟ್ಟಣೆ, ಆಂಬುಲೆನ್ಸ್ ವಾಹನಗಳು ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಇದನ್ನು ತಪ್ಪಿಸಲು ದ್ವೀಪಥ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಸೂಚಿಸಿದ್ದೇನೆ. ನಾಲ್ಕು ಪಥದ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಭೂಸ್ವಾಧೀನ ನಡೆಸಬೇಕಾಗುತ್ತದೆ.  ಇದರ ಜೊತೆಗೆ ನಿರ್ಮಾಣದ ವೆಚ್ಚವನ್ನು ಸಹ ಭರಿಸಬೇಕಾಗುತ್ತದೆ.  ಇದಕ್ಕೆ ಸಾಕಷ್ಟು ಸಮಯ ಬೇಕಾಗಲಿದೆ.  ಹೀಗಾಗಿ ಇದರ ಬದಲಿಗೆ, ದ್ವೀಪಥ ಮೇಲ್ಸೇತುವೆ ನಿರ್ಮಾಣ ಮಾಡಿದರೆ ಭಾರತ ಸರ್ಕಾರವೇ ಶೇ.100 ರಷ್ಟು ಕಾಮಗಾರಿ ವೆಚ್ಚವನ್ನು ಭರಿಸಲಿದೆ.  

ಈ ಹಿನ್ನಲೆಯಲ್ಲಿ ನಾಲ್ಕುಪಥ ಮೇಲ್ಸೇತುವೆ ನಿರ್ಮಾಣ ಪ್ರಸ್ತಾವನೆಯನ್ನು ಸದ್ಯಕ್ಕೆ ರದ್ದು ಪಡಿಸಿ, ದ್ವೀಪಥ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಲು ಅನುಮತಿ ನೀಡುವಂತೆ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ, ರೈಲ್ವೆ ಮುಖ್ಯ ಇಂಜನಿಯರ್, ಜಿಲ್ಲಾಧಿಕಾರಿ ಹಾಗೂ ಭೂಸ್ವಾಧೀನಾಧಿಕಾರಿಗಳಿಗೆ  ನಿರ್ದೇಶನ ನೀಡಿದ್ದೇನೆ. ಇದರಿಂದಾಗಿ ಭೂಸ್ವಾಧೀನ ಮಾಡುವ ಪ್ರಮೇಯ ಉದ್ಭವಿಸುವುದಿಲ್ಲ.

ಇದೇ ಮಾದರಿಯಲ್ಲಿ ಜಿಲ್ಲೆಯ ಇತರೆ ಭಾಗದ ಎರಡು ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೂ ಅನುಮತಿ ನೀಡಲಾಗಿದೆ. ತಾಂತ್ರಿಕ ಅನುಮೋದನೆಗಳನ್ನು ಪೂರ್ಣಗೊಳಿಸಿ ನಿರ್ಮಾಣ ಕಾಮಗಾರಿಯ ಟೆಂಡರ್ ಕರೆಯಲಾಗುವುದು. ಒಂದು ವರ್ಷದಲ್ಲಿಯೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು. 


ಜಿಲ್ಲೆಗೆ ಕೇಂದ್ರೀಯ ವಿದ್ಯಾಲಯ ಮಂಜೂರಾಗಿದೆ. ಇದಕ್ಕೆ ಅಗತ್ಯ ಇರುವ ಭೂಮಿಯನ್ನು ರಾಜ್ಯ ಸರ್ಕಾರ ಈಗಾಗಲೇ ನೀಡಿದೆ.  ಚಿಕ್ಕಪುರ ಗ್ರಾಮದ ಸರ್ವೇ ನಂ 101 ರಲ್ಲಿ 9 ಎಕೆರೆ 30 ಗುಂಟೆ ಜಾಗ ಮಂಜೂರಾಗಿದೆ. ಪ್ರಸಕ್ತ ವರ್ಷದಿಂದಲೇ ತಾತ್ಕಾಲಿಕವಾಗಿ ಶಾಲೆ ಆರಂಭಿಸಲು ಪ್ರಯತ್ನ ನಡೆಸಲಾಗುತ್ತಿದೆ.

ವಿದ್ಯಾಲಯ ಸ್ಥಾಪನೆ ಕುರಿತು ಕೇಂದ್ರೀಯ ವಿದ್ಯಾಲಯ ಸಮಿತಿ ವೀಕ್ಷಣಾ ವರದಿ ಸಲ್ಲಿಸಿದೆ. ವರದಿಯಲ್ಲಿ ಉಲ್ಲೇಖಿಸಿದ ಆಕ್ಷೇಪಣೆಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಜುಲೈ 18 ರಂದು ಮತ್ತೊಮ್ಮೆ ಸಮಿತಿ ಆಗಮಿಸಿ ವೀಕ್ಷಣೆ ನಡೆಸಲಿದೆ.  ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಶಾಲೆ ಆರಂಭಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ನಿರ್ಮಿತಿ ಕೇಂದ್ರದಿಂದ ಮಾಡಿಕೊಡಲಾಗುವುದು.

ಜಿಲ್ಲೆಗೆ ಮಂಜೂರಾಗಿರುವ  ಕೇಂದ್ರೀಯ ವಿದ್ಯಾಯಲ ಕೈ ತಪ್ಪಿ ಹೋಗಬಾರದು. ವಿದ್ಯಾಲಯ ಸ್ಥಾಪನೆಯಿಂದ ಜಿಲ್ಲೆಯ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ರಾಷ್ಟ್ರೀಯ ಶಿಕ್ಷಣ ನೀತಿಯಡಿ ದೊರಕಲಿದೆ ಎಂದು ಗೋವಿಂದ ಎಂ ಕಾರಜೋಳ ತಿಳಿಸಿದರು.


ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್, ಸಮಾಜ ಕಲ್ಯಾಣ ಇಲಾಖೆ  ಉಪನಿರ್ದೇಶಕ ಮಲ್ಲಿಕಾರ್ಜುನ್.ಬಿ, ಪೊಲೀಸ್ ಉಪಾಧೀಕ್ಷಕ ಪಿ.ಕೆ. ದಿನಕರ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಪೌರಾಯುಕ್ತೆ ರೇಣುಕಾ.ಎಂ, ಲೋಕೋಪಯೋಗಿ ಇಲಾಖೆ ತಾಂತ್ರಿಕ ಸಹಾಯಕ ಮಂಜುನಾಥ.ಬಿ.ಎನ್. ಪಿ.ಯು. ಉಪನಿರ್ದೇಶಕ ತಿಪ್ಪಮ್ಮ, ಸರ್ಕಾರಿ  ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ರವಿಕಾಂತ.ಎಂ.ಎನ್ ಸಭೆಯಲ್ಲಿ ಭಾಗವಹಿಸಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!