ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಾಡ ದೊರೆ, ರಾಜವೀರ ಮದಕರಿ ನಾಯಕ ಜಯಂತೋತ್ಸವ ಕಾರ್ಯಕ್ರಮವು ಅತ್ಯಂತ ವಿಜೃಂಭಣೆ ಮತ್ತು ಸಡಗರದಿಂದ ಜರುಗಿತು. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಗಣ್ಯರು ಹಾಗೂ ನಾಡಿನ ವಿವಿಧ ಮಠಾಧೀಶರು ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.
ಕಾರ್ಯಕ್ರಮದಲ್ಲಿ ಚಿತ್ರದುರ್ಗ ಸಂಸದರಾದ ಗೋವಿಂದ ಎಂ. ಕಾರಜೋಳ, ಹಿರಿಯ ಸಚಿವರಾದ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವರಾದ ಟಿ. ರಘುಮೂರ್ತಿ, ಮಾಜಿ ಸಚಿವರಾದ ಹೆಚ್. ಆಂಜನೇಯ, ಬಿ. ಶ್ರೀರಾಮುಲು, ಮಾಜಿ ಸಂಸದರಾದ ವಿ.ಎಸ್. ಉಗ್ರಪ್ಪ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು. ವಿಶೇಷ ಆಹ್ವಾನಿತರಾಗಿ ಪ್ರಸಿದ್ಧ ಚಲನಚಿತ್ರ ನಟ ಕಿಚ್ಚ ಸುದೀಪ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಎಲ್ಲರ ಗಮನ ಸೆಳೆದರು.
ಈ ಮಹತ್ವದ ಸಮಾರಂಭದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಡಾ. ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಯಾದವ ಗುರುಪೀಠದ ಜಗದ್ಗುರು ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಚಿತ್ರದುರ್ಗ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಹೊಸದುರ್ಗ ಬಸವಕೇಂದ್ರ ಶ್ರೀ ಶಿವಯೋಗಾಶ್ರಮದ ಶ್ರೀ ಬಸವಪ್ರಭು ಸ್ವಾಮೀಜಿ, ಮೇದಾರ ಗುರುಪೀಠದ ಶ್ರೀ ಇಮ್ಮಡಿ ಬಸವ ಮೇದಾರಕೇತೇಶ್ವರ ಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಹಿರಿಯ ಪೂಜ್ಯ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ನಾಡಿನ ಸ್ವಾತಂತ್ರ್ಯ, ಶೌರ್ಯ ಮತ್ತು ಸಾಹಸದ ಪ್ರತೀಕವಾದ ಮದಕರಿ ನಾಯಕನ ಇತಿಹಾಸವನ್ನು ಸ್ಮರಿಸುತ್ತಾ, ಅವರ ಆದರ್ಶಗಳನ್ನು ಯುವ ಪೀಳಿಗೆಗೆ ತಲುಪಿಸುವ ಕುರಿತು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ಹಾಗೂ ಸ್ವಾಮೀಜಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.




