Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ರಾಮಕೃಷ್ಣರ ಮಾನಸಪುತ್ರ ಸ್ವಾಮಿ ಬ್ರಹ್ಮಾನಂದರು:ಲಕ್ಷ್ಮೀದೇವಮ್ಮ

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಶ್ರೀರಾಮಕೃಷ್ಣ ಪರಮಹಂಸರ ಆಧ್ಯಾತ್ಮಿಕ-ಮಾನಸ ಪುತ್ರ ಸ್ವಾಮಿ ಬ್ರಹ್ಮಾನಂದರು ಎಂದು ಚಳ್ಳಕೆರೆಯ ತ್ಯಾಗರಾಜನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥೆ ಎಚ್ ಲಕ್ಷ್ಮೀದೇವಮ್ಮ ಅಭಿಪ್ರಾಯಪಟ್ಟರು.
ತ್ಯಾಗರಾಜನಗರದ ಸದ್ಭಕ್ತರಾದ ನಂಜಮ್ಮ ಕೆಂಚಪ್ಪ ಶಿಕ್ಷಕರ ಸವಿತಾ ನಿವಾಸದಲ್ಲಿ "ಸ್ವಾಮಿ ಬ್ರಹ್ಮಾನಂದ"ರ ಜಯಂತ್ಯುತ್ಸವದ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಸ್ವಾಮಿ ಬ್ರಹ್ಮಾನಂದರ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.  

                                     ರಾಖಾಲ ಮತ್ತು ರಾಜ್  ಮಹಾರಾಜ್ ಎಂದೇ ಪ್ರಸಿದ್ಧರಾದ ಸ್ವಾಮಿ ಬ್ರಹ್ಮಾನಂದರು ಶ್ರೀರಾಮಕೃಷ್ಣರ ಹದಿನಾರು ಮಂದಿ ನೇರ ಸಂನ್ಯಾಸಿ ಶಿಷ್ಯರಲ್ಲಿ ಮೊದಲಿಗರಾಗಿ ಶ್ರೀರಾಮಕೃಷ್ಣ ಮಹಾಸಂಘದ ಮೊದಲ ಸಂಘ ಗುರುಗಳಾಗಿ ಸದಾ ಬ್ರಹ್ಮಭಾವದಲ್ಲಿ ಇರುತ್ತಿದ್ದವರು ಇವರು ಎಂದು ಬಣ್ಣಿಸಿದರು.

 ಈ ಸಂದರ್ಭದಲ್ಲಿ ಅವರು ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳ ಬಗ್ಗೆ ಮಾತನಾಡುತ್ತಾ ಸಂಕ್ರಾಂತಿ ಹಬ್ಬವು ಕೇವಲ ಎಳ್ಳು ಬೆಲ್ಲ ಹಂಚುವ ಹಬ್ಬವಲ್ಲ,ಇದು ಭಾರತೀಯ ಸನಾತನ ವಿಜ್ಞಾನ, ಖಗೋಳಶಾಸ್ತ್ರದ ಅದ್ಭುತ ಸಂಗಮ ಮತ್ತು ಬ್ರಹ್ಮಾಂಡದ ವಿಸ್ಮಯ, ಸೂರ್ಯನು 'ದಕ್ಷಿಣಾಯನದಿಂದ ಉತ್ತರಾಯಣ'ಕ್ಕೆ ಪಥ ಬದಲಿಸುವ ಕಾಲವಾಗಿದೆ ಎಂದರು.                  

                     ಈ ಜಯಂತ್ಯುತ್ಸವದ ಪ್ರಯುಕ್ತ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ, ಶ್ರೀರಾಮಕೃಷ್ಣರ ನಾಮಸ್ಮರಣೆ, ವಿಶೇಷ ಭಜನೆ ಮತ್ತು ಯತೀಶ್ ಎಂ ಸಿದ್ದಾಪುರ ಅವರು "ಶ್ರೀಶಾರದಾದೇವಿ ಜೀವನಗಂಗಾ" ಗ್ರಂಥ ಪಾರಾಯಣ ಮಾಡುತ್ತ "ಲೋಕದಾಚೆಯ ಬೆಳಕು" ಎಂಬ ಅಧ್ಯಾಯವನ್ನು ವಾಚಿಸಿ ಅರ್ಥ ವಿವರಣೆ ನೀಡಿದರು.


ಜಯಂತ್ಯುತ್ಸವದಲ್ಲಿ ಎಂ ಲಕ್ಷ್ಮೀದೇವಮ್ಮ, ಸುವರ್ಣಮ್ಮ, ಸುನೀತಾ, ಅನುಸೂಯ ರಾಘವೇಂದ್ರ, ಸರಸ್ವತಿ ರಾಜು, ಸರಸ್ವತಿ, ಗೀತಾ ಸುಂದರೇಶ್ ದೀಕ್ಷಿತ್ ಪಾಲ್ಗೊಂಡಿದ್ದರು.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!