Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬರ ಪರಿಹಾರಕ್ಕೆ ಎನ್‌ಡಿಆರ್‌ಎಫ್ ನಿಯಮ ಸಡಿಲಿಸಿ: ಕೇಂದ್ರಕ್ಕೆ ಡಾ. ಪರಮೇಶ್ವರ್‌ಆಗ್ರಹ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ, ಸಂಕಷ್ಟದಲ್ಲಿರುವ ರೈತರು ಹಾಗೂ ಜನಸಾಮಾನ್ಯರಿಗೆ ಅಗತ್ಯ ನೆರವು ಒದಗಿಸಲು ರಾಜ್ಯ ಸರ್ಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ. ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಕೇಂದ್ರ ಸರ್ಕಾರವು ಎನ್‌ಡಿಆರ್‌ಎಫ್‌ ನಿಯಮಗಳನ್ನು ಸಡಿಲಿಸಿ, ಕೂಡಲೇ ಅಗತ್ಯ ಆರ್ಥಿಕ ನೆರವು ಬಿಡುಗಡೆ ಮಾಡಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ವಿಧಾನಸಭೆಯಲ್ಲಿ ಆಗ್ರಹಿಸಿದರು.

ಕೇಂದ್ರ ಸರ್ಕಾರದ ಪ್ರಸ್ತುತ ಮಾನದಂಡಗಳು ರಾಜ್ಯದ ವಾಸ್ತವಿಕ ಬರ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಪ್ರತಿಬಿಂಬಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ನಿಯಮಗಳನ್ನು ಸಡಿಲಿಸುವಂತೆ ಕೋರಿ ರಾಜ್ಯ ಸರ್ಕಾರದಿಂದ ಈಗಾಗಲೇ ಕೇಂದ್ರಕ್ಕೆ ಹಲವು ಪತ್ರಗಳನ್ನು ಬರೆಯಲಾಗಿದೆ. ಬರ ಪರಿಸ್ಥಿತಿಯ ವಾಸ್ತವಾಂಶಗಳನ್ನು ಕೇಂದ್ರದ ಗಮನಕ್ಕೆ ತರಲಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಹೆಚ್ಚಿನ ಪರಿಹಾರ ದೊರೆಯುವಂತೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

Advertisement

2023ರಲ್ಲಿ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾದ ಸಂದರ್ಭದಲ್ಲಿ ಅಂದಿನಿಂದಲೂ ಸಿದ್ದರಾಮಯ್ಯ ಹಾಗೂ ಪ್ರಸ್ತುತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಸರ್ಕಾರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರಕ್ಕೆ ನಿರಂತರವಾಗಿ ಪತ್ರಗಳನ್ನು ಬರೆಯಲಾಗಿದೆ. ಕಂದಾಯ ಸಚಿವನಾಗಿ ತಾವು ಸ್ವತಃ ಕೇಂದ್ರಕ್ಕೆ ಮನವಿ ಮಾಡಿದ್ದಲ್ಲದೆ, ಮುಖ್ಯ ಕಾರ್ಯದರ್ಶಿಗಳೂ ಸಹ ಪತ್ರ ಬರೆದು ಪರಿಸ್ಥಿತಿಯನ್ನು ವಿವರಿಸಿದ್ದಾರೆ ಎಂದು ಸದನಕ್ಕೆ ಮಾಹಿತಿ ನೀಡಿದರು.

 

ರಾಜ್ಯದ ಪ್ರಮುಖ ಬೇಡಿಕೆಗಳು: ಕೇವಲ ಸಾಮಾನ್ಯ ಮಳೆಯ ಕೊರತೆಯ ಆಧಾರದ ಮೇಲೆ ಮಾತ್ರ ಬರವನ್ನು ಅಳೆಯಬಾರದು.
ಮಳೆಯ ಪ್ರಮಾಣ, ಮಳೆ ಬಿದ್ದ ಸಮಯ, ಬೆಳೆಗಳ ಮೇಲಾದ ದುಷ್ಪರಿಣಾಮ ಮತ್ತು ಮಣ್ಣಿನ ತೇವಾಂಶದಂತಹ ಸ್ಥಳೀಯ ವಾಸ್ತವಾಂಶಗಳನ್ನು ಪರಿಗಣಿಸಬೇಕು.

ಮುಂದುವರಿದು, 2026ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರದ ಮಾನದಂಡಗಳನ್ನು ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರ ಈಗಾಗಲೇ ಮನವಿ ಸಲ್ಲಿಸಿದೆ.

ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ರೈತರು ಹಾಗೂ ಜನರ ಸಂಕಷ್ಟಕ್ಕೆ ಸ್ಪಂದಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರವೂ ಕೂಡ ರಾಜಕೀಯ ಬದಿಗಿಟ್ಟು, ರಾಜ್ಯದ ವಾಸ್ತವಿಕ ಪರಿಸ್ಥಿತಿಯನ್ನು ವಿಶೇಷವಾಗಿ ಪರಿಗಣಿಸಿ ಅಗತ್ಯವಿರುವ ಸಂಪೂರ್ಣ ಆರ್ಥಿಕ ನೆರವು ನೀಡಬೇಕು ಎಂದು ಡಾ. ಜಿ. ಪರಮೇಶ್ವರ್ ಕಳಕಳಿಯ ಮನವಿ ಮಾಡಿದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಸ್ಪೀಟ್ ಅಡ್ಡೆ ಮೇಲೆ ಪೋಲೀಸರ ದಾಳಿ ಐದು ಜನರ ಬಂಧನಕೆವಿಕೆ ವತಿಯಿಂದ ರಾಸುಗಳ ಉಚಿತ ಆರೋಗ್ಯ ಶಿಬಿರರಸ್ತೆ ಒತ್ತುವರಿ ಯತ್ನ: ಗ್ರಾಮಸ್ಥರ ಆಕ್ರೋಶದ ಬಳಿಕ ಕಾಮಗಾರಿ ಸ್ಥಗಿತ40 ಲಕ್ಷ ರೈತರ ಖಾತೆಗೆ ತಲಾ 2,500 ರೂಪಾಯಿ ಪರಿಹಾರ ಜಮಾ ಮಾಡಲು ಸರ್ಕಾರದ ತೀರ್ಮಾನ!ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ PIL ಸಲ್ಲಿಕೆಎಸ್‌ಐಆರ್ ಹೆಸರಿನಲ್ಲಿ ಮತದಾರರ ಹಕ್ಕು ಕಸಿಯುವ ಹುನ್ನಾರ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಪ್ರಕಾಶ್ ರೈ ಆಗ್ರಹರೈತರಿಗೆ ತಕ್ಷಣವೇ ₹2,500 ಇನ್‌ಪುಟ್ ಸಬ್ಸಿಡಿ - ಡಿಸಿಎಂ ಜಿ.ಪರಮೇಶ್ವರ್ಅನುಕಂಪದ ನೇಮಕಾತಿ ನಿರಂತರ ಸೌಲಭ್ಯ ಪಡೆಯುವ ಹಕ್ಕಲ್ಲ: ಹೈಕೋರ್ಟ್ ಮಹತ್ವದ ತೀರ್ಪುಕೂಡಲೇ ರೈತರ ಸಾಲ ಮನ್ನಾ ಮಾಡಲಿ: ವಿಪಕ್ಷ ನಾಯಕ ಅಶೋಕ್ ಆಗ್ರಹನಂದಿನಿ ಹಾಲಿನ ದರ ಶೀಘ್ರದಲ್ಲೇ ಏರಿಕೆ ಸಾಧ್ಯತೆ: ಪ್ರಸ್ತಾವನೆ ಸಲ್ಲಿಸುವಂತೆ ಕೆಎಂಎಫ್‌ಗೆ ಡಿಕೆ ಶಿವಕುಮಾರ್ ಸೂಚನೆ!