Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮತದಾರರ ಪರಿಷ್ಕರಣ ಪಟ್ಟಿ ಮಾಹಿತಿಯ ಕರಡು ಪ್ರತಿ ಬಿಡುಗಡೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕರ್ನಾಟಕ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ ಐ ಆರ್) ಕರಡು ಪ್ರತಿಯನ್ನು ಮತದಾರರ ನೋಂದಣಿ ಅಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಟಿ.ಆರ್. ಮಂಜುನಾಥ್‌ಬಿಡುಗಡೆ ಮಾಡಿದರು.

  ಉಪವಿಭಾಗಾಧಿಕಾರಿ  ಕಛೇರಿಯಲ್ಲಿ ಅವರು ಮಾಹಿತಿ ನೀಡಿ ಮಾತನಾಡಿ ಮತದಾರರ ಕರಡು ಪ್ರತಿಯಲ್ಲಿನ ಅಂಕಿ ಅಂಶಗಳಂತೆ ಪರಿಷ್ಕರಣೆಯಲ್ಲಿ ಯುವ ಮತದಾರರ ಸಂಖ್ಯೆಯಲ್ಲಿ ಹೆಚ್ಚಿನದಾಗಿ  ಕುಸಿತವಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಗೂ ಮುನ್ನ 7,062 ಇದ್ದ ಯುವ ಮತದಾರರ ಸಂಖ್ಯೆ, ಪರಿಷ್ಕರಣೆ ನಂತರ 4,667ಕ್ಕೆ ಕುಸಿದಿದೆ. ಹಾಗೆಯೇ ಪುರುಷ ಮತದಾರರ ಸಂಖ್ಯೆ ಗಿಂತಲೂ ಮಹಿಳಾ ಮತದಾರರ ಸಂಖ್ಯೆಯೇ ಕಡಿಮೆಯಾಗಿದೆ ಎಂದರು.

ಪರಿಷ್ಕರಣೆಗೂ ಮುನ್ನ 1,13,822 ಇದ್ದ ಮತದಾರರ ಸಂಖ್ಯೆ ಪರಿಷ್ಕರಣೆಯ ನಂತರ 97,661 ಆಗಿದೆ. ಅಂದರೆ 16,161 ಮತದಾರರ ಸಂಖ್ಯೆ ಕಡಿಮೆಯಾಗಿದೆ. 1,09,576 ಪುರುಷ ಮತದಾರರ ಸಂಖ್ಯೆಯಲ್ಲಿ 15,010 ಮತದಾರರು ಮಾತ್ರ ಕಡಿಮೆಯಾಗಿದ್ದಾರೆ. ಶಾಶ್ವತವಾಗಿ 19,298 ಜನ ಮತದಾರರು ಸ್ಥಳಾಂತರ ವಾಗಿದ್ದಾರೆ. 6,497 ಜನ ಮತದಾರರು ಮೃತಪಟ್ಟಿದ್ದಾರೆ ಎಂದು ಹೇಳಿದರು.

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕರಡು ಪತ್ರಿಗಳನ್ನು ರಾಷ್ಟ್ರೀಯ ಪಕ್ಷಗಳ ಪ್ರತಿನಿಧಿಗಳಿಗೆ ಉಪವಿಭಾಗಾಧಿಕಾರಿ ಟಿ.ಆರ್‌ಮಂಜುನಾಥ್ ವಿತರಿಸಿದರು. ತಹಶೀಲ್ದಾ‌ರ್ ಮಲ್ಲಪ್ಪ ಕೆ.ಯರಗೋಳ, ಚುನಾವಣ ಶಿರಸ್ತೆದಾ‌ರ್ ಡಿ.ಪ್ರಕಾಶ್‌ಹಾಜರಿದ್ದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!