Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರೇಣುಕಾಸ್ವಾಮಿ ಕೊಲೆ ಕೇಸ್: ಸಾಕ್ಷಿಗೆ ಬೆದರಿಕೆ ಹಾಕಿದ್ದ ನಟ ದರ್ಶನ್ ಅಭಿಮಾನಿಗಳ ಬಂಧನ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಧಾನಿಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯದಲ್ಲಿ ಸಾಕ್ಷಿ ನುಡಿಯದಂತೆ ಪ್ರಮುಖ ಸಾಕ್ಷಿದಾರನಿಗೆ ಬೆದರಿಕೆ ಒಡ್ಡಿದ್ದ ನಟ ದರ್ಶನ್ ಅವರ ಮೂವರು ಅಭಿಮಾನಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ವೇಣು, ಸುಹಾಸ್ ಮತ್ತು ಪುನೀತ್ ಎಂದು ಗುರುತಿಸಲಾಗಿದ್ದು, ಸದ್ಯ ಪೊಲೀಸರು ಪ್ರಕರಣದ ತನಿಖೆಗಾಗಿ ಐವರನ್ನು ಪೊಲೀಸ್ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ದುಷ್ಕೃತ್ಯದ ಹಿನ್ನೆಲೆ: ಕಾರಿನಲ್ಲಿ ಕೂಡಿಹಾಕಿ ಬೆದರಿಕೆ!
ಸಾಕ್ಷಿ ತಿರುಚಲು ಯತ್ನ: ರೇಣುಕಾಸ್ವಾಮಿ ಕೊಲೆ ಪ್ರಕರಣದ 49ನೇ ಸಾಕ್ಷಿದಾರರಾಗಿರುವ ಸಂದೀಪ್ ಎಂಬುವವರನ್ನು ಗುರಿಯಾಗಿಸಿಕೊಂಡು ಈ ಬೆದರಿಕೆ ಹಾಕಲಾಗಿತ್ತು.

ಮಾತುಕತೆ ನೆಪದಲ್ಲಿ ಕಿಡ್ನಾಪ್ ಮಾದರಿ ಕೃತ್ಯ: ಆರೋಪಿ ಸುಹಾಸ್, ಸಾಕ್ಷಿದಾರ ಸಂದೀಪ್‌ನನ್ನು ಮಾತುಕತೆ ನಡೆಸುವ ನೆಪದಲ್ಲಿ ಕರೆಸಿಕೊಂಡಿದ್ದಾನೆ. ಬಳಿಕ ಕಾರಿನಲ್ಲಿ ಕೂರಿಸಿಕೊಂಡು ನಗರದಾದ್ಯಂತ ಸುತ್ತಾಡಿಸುತ್ತಾ, ನ್ಯಾಯಾಲಯದಲ್ಲಿ ದರ್ಶನ್ ವಿರುದ್ಧ ಸಾಕ್ಷಿ ಹೇಳದಂತೆ ತೀವ್ರ ಒತ್ತಡ ಹೇರಿದ್ದಾನೆ.

ಪ್ರಾಣ ಬೆದರಿಕೆ: ಆರೋಪಿಗಳ ತಾಕೀತಿಗೆ ಸಂದೀಪ್ ಒಪ್ಪದಿದ್ದಾಗ, ಅವರಿಗೆ ಪ್ರಾಣ ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಕೋರಂ ಮೆಟ್ಟಿಲೇರಿದ ಸಾಕ್ಷಿ; ಪೊಲೀಸರ ಆ್ಯಕ್ಷನ್
ತಮಗೆ ಎದುರಾದ ಜೀವಭಯದ ಹಿನ್ನೆಲೆಯಲ್ಲಿ ಸಾಕ್ಷಿದಾರ ಸಂದೀಪ್ ಅವರು ತಕ್ಷಣವೇ ನ್ಯಾಯಾಲಯಕ್ಕೆ ಈ ಕುರಿತು ಲಿಖಿತ ಮಾಹಿತಿ ನೀಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯದ ಸೂಚನೆಯ ಮೇರೆಗೆ ಪೊಲೀಸರು ಸಂದೀಪ್‌ಗೆ ಬಿಗಿ ರಕ್ಷಣೆ ಕಲ್ಪಿಸಿದ್ದರು.

ಬಳಿಕ ಬೆದರಿಕೆ ಹಾಕಿದ ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದ ಕಾಮಾಕ್ಷಿಪಾಳ್ಯ ಪೊಲೀಸರು, ತನಿಖೆ ನಡೆಸಿ ಮೂವರು ಪ್ರಮುಖ ಆರೋಪಿಗಳನ್ನು ಎಫ್‌ಐಆರ್ ದಾಖಲಿಸಿ ಜೈಲಿಗಟ್ಟಿದ್ದಾರೆ.

ಬಂಧಿತರೆಲ್ಲರೂ 'ಡಿ ಕಂಪನಿ' ಫ್ಯಾನ್ಸ್!:
ಪೊಲೀಸ್ ತನಿಖೆಯ ವೇಳೆ ಬಂಧಿತರ ಹಿನ್ನೆಲೆ ಬಯಲಾಗಿದ್ದು, ಇವರೆಲ್ಲರೂ ನಟ ದರ್ಶನ್ ಅವರ ಕಟ್ಟಾ ಅಭಿಮಾನಿಗಳಾಗಿದ್ದಾರೆ.

ಪುನೀತ್: ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್ ಪರವಾಗಿರುವ ಪ್ರಮುಖ 'ಡಿ ಕಂಪನಿ' (D Company) ಫ್ಯಾನ್ ಪೇಜ್ ಅನ್ನು ನಿರ್ವಹಿಸುತ್ತಿದ್ದ.

ಸುಹಾಸ್ ಮತ್ತು ವೇಣು: ಇವರಿಬ್ಬರು ತುಮಕೂರಿನ ದರ್ಶನ್ ಅಭಿಮಾನಿ ಸಂಘದ ಸಕ್ರಿಯ ಸದಸ್ಯರಾಗಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿರುವಾಗಲೇ ಸಾಕ್ಷಿಗಳನ್ನು ಹತ್ತಿಕ್ಕಲು ದರ್ಶನ್ ಅಭಿಮಾನಿಗಳು ಮುಂದಾಗಿರುವುದು ಕಾನೂನು ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸದ್ಯ ಕಸ್ಟಡಿಯಲ್ಲಿರುವ ಆರೋಪಿಗಳಿಂದ ಪೊಲೀಸರು ಮತ್ತಷ್ಟು ಮಾಹಿತಿ ಕಕ್ಕಿಸುತ್ತಿದ್ದಾರೆ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!