ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಆರ್ಯ ವೈಶ್ಯ ಮಹಾಸಭಾ ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಲಾಗಿದ್ದ ‘16ನೇ ಪ್ರತಿಭೋತ್ಸವ – 2026ರ ವಿದ್ಯಾಮಾಣಿಕ್ಯಗಳಿಗೆ ಅಭಿನಂದನೆ’ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಭಾಗವಹಿಸಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಿದರು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಆರ್. ಅಶೋಕ್, "ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಗೌರವಿಸುವ ಇಂತಹ ಕಾರ್ಯಕ್ರಮಗಳು ಯುವ ಪ್ರತಿಭೆಗಳಿಗೆ ಮತ್ತಷ್ಟು ಸಾಧನೆ ಮಾಡಲು ಸ್ಫೂರ್ತಿ ನೀಡುತ್ತವೆ. ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಅವರ ಭವಿಷ್ಯ ಉಜ್ವಲವಾಗಿರಲಿ" ಎಂದು ಶುಭ ಹಾರೈಸಿದರು.
ಈ ಸಮಾರಂಭದಲ್ಲಿ ವಾಸವಿ ಪೀಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಆರ್ವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಪಿ. ಶ್ಯಾಮ್, ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ, ಶಾಸಕ ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ಮಹಾಸಭಾದ ಅಧ್ಯಕ್ಷ ಆರ್.ಪಿ. ರವಿಶಂಕರ್ ಸೇರಿದಂತೆ ಹಲವು ಗಣ್ಯರು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.




