ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಡಿ’ ವೃಂದದ 775 ಅರಣ್ಯ ವೀಕ್ಷಕ (Forest Watcher) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇಲಾಖೆಯು ಪರಿಷ್ಕೃತ ಅಧಿಸೂಚನೆ ಹೊರಡಿಸಿದೆ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 7ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿಶೇಷವೆಂದರೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ.
ವೃತ್ತವಾರು ಹುದ್ದೆಗಳ ವಿವರ:ರಾಜ್ಯದ ವಿವಿಧ ವೃತ್ತಗಳಲ್ಲಿ ಲಭ್ಯವಿರುವ ಖಾಲಿ ಹುದ್ದೆಗಳ ವಿವರ ಕೆಳಗಿನಂತಿದೆ (ವಿಭಾಗವಾರು ವರ್ಗೀಕರಣದ ಮಾಹಿತಿಗಾಗಿ ಇಲಾಖೆಯ ಅಧಿಕೃತ ಅಧಿಸೂಚನೆ ಪರಿಶೀಲಿಸಬಹುದು).
ವೃತ್ತ ಖಾಲಿ ಹುದ್ದೆಗಳ ಸಂಖ್ಯೆ ಚಾಮರಾಜನಗರ 169, ಮೈಸೂರು 120, ಬೆಂಗಳೂರು 70, ಬಳ್ಳಾರಿ 62, ಕೆನರಾ 60, ಚಿಕ್ಕಬಳ್ಳಾಪುರ 56, ಮಂಗಳೂರು 54, ಬೆಳಗಾವಿ 42, ಶಿವಮೊಗ್ಗ 38, ಕೊಡಗು 32, ಹಾಸನ 30, ಧಾರವಾಡ 12, ಕಲಬುರಗಿ 04.
ಅರ್ಹತೆಗಳು ಮತ್ತು ವೇತನ ಶ್ರೇಣಿ: ವಿದ್ಯಾರ್ಹತೆ: ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ (SSLC/10th) ಉತ್ತೀರ್ಣರಾಗಿರಬೇಕು. ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹29,600 ರಿಂದ ₹52,800/- ವರೆಗೆ ವೇತನ ಸಿಗಲಿದೆ.
ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವಯೋಮಿತಿ ಸಡಿಲಿಕೆ: ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 2 ವರ್ಷ ಹಾಗೂ ಪ.ಜಾ, ಪ.ಪಂ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:ಸಾಮಾನ್ಯ, 2A, 2B, 3A, 3B ಅಭ್ಯರ್ಥಿಗಳು: ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ₹100/- SC, ST ಹಾಗೂ ಪ್ರವರ್ಗ-1 ಅಭ್ಯರ್ಥಿಗಳು: ಪುರುಷ ಅಭ್ಯರ್ಥಿಗಳಿಗೆ ₹100/- ಮತ್ತು ಮಹಿಳಾ ಅಭ್ಯರ್ಥಿಗಳಿಗೆ ₹50/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?ಅಭ್ಯರ್ಥಿಗಳನ್ನು ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು, ಶಾರೀರಿಕ ಮಾನದಂಡ ಪರೀಕ್ಷೆ, ದೈಹಿಕ ತಾಳ್ವಿಕೆ ಪರೀಕ್ಷೆ ಮತ್ತು ದೈಹಿಕ ಕಾರ್ಯಸಮರ್ಥತೆ ಆಧಾರದ ಮೇಲೆ ನೇರವಾಗಿ ಆಯ್ಕೆ ಮಾಡಲಾಗುವುದು. ಹೆಚ್ಚಿನ ವಿವರಗಳಿಗೆ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್‌ಸೈಟ್ aranya.gov.in ಗೆ ಭೇಟಿ ನೀಡಬಹುದು.




