Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪೊಲೀಸರಿಂದ ರೌಡಿ ಶೀಟರ್  ಮನೆಗಳ ತಪಾಸಣೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸಾರ್ವಜನಿಕರಿಗೆ ಶಾಂತಿ  ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ಹಾಗೂ ರೌಡಿ ಶೀಟರ್‌ಗಳ ಮೇಲೆ ನಿಗಾ ಬಿಗಿಗೊಳಿಸುವ ಉದ್ದೇಶದಿಂದ ದೊಡ್ಡಬಳ್ಳಾಪುರ ಡಿವೈಎಸ್‌ಪಿ ಉಪವಿಭಾಗ ವ್ಯಾಪ್ತಿಯಲ್ಲಿ ಪೊಲೀಸರು ಭಾನುವಾರ ವಿಶೇಷ ಕಾರ್ಯಾಚರಣೆ ನಡೆಸಿ 45ಕ್ಕೂ ಹೆಚ್ಚು ರೌಡಿ ಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದರು.

ಬೆಳಗ್ಗಿನ ಜಾವ ಆರಂಭವಾದ ಅನಿರೀಕ್ಷಿತ ಕಾರ್ಯಾಚರಣೆ ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅಪರಾಧ ಚಟುವಟಿಕೆಗಳ ಮೇಲಿನ ಪೊಲೀಸ್ ನಿಗಾ ಮತ್ತಷ್ಟು ಬಿಗಿಯಾಗಿರುವ ಸಂದೇಶವನ್ನು ರವಾನಿಸಿದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಅಪರಾಧಿಗಳಿಗೆ ಎಚ್ಚರಿಕೆ ನೀಡಲಾಯಿತು.

ಡಿವೈಎಸ್‌ಪಿ ಪಾಂಡುರಂಗ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ,  ಹೊಸಹಳ್ಳಿ, ದೊಡ್ಡಬೆಳವಂಗಲ, ವಿಶ್ವನಾಥಪುರ, ಚೆನ್ನರಾಯಪಟ್ಟಣ ಹಾಗೂ ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಆಸಾಮಿಗಳ ಮನೆಗಳನ್ನು ಶೋಧಿಸಲಾಗಿದೆ. ಕಾರ್ಯಾಚರಣೆಯನ್ನು ಯೋಜಿತವಾಗಿ ನಡೆಸಲು ಪ್ರತಿ ಠಾಣೆಯಿಂದ 3 ರಿಂದ 4 ವಿಶೇಷ ತಂಡಗಳನ್ನು ರಚಿಸಿ ಒಂದೇ ಸಮಯದಲ್ಲಿ ವಿವಿಧ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಲಾಗಿದೆ.  ದೈನಂದಿನ ದಿನಚರಿಯಲ್ಲಿ  ರೌಡಿ ಶೀಟರ್‌ಗಳು ಎಲ್ಲೆಲ್ಲಿ ಓಡಾಡುತ್ತಾರೆ, ಯಾರ ಭೇಟಿಯಾಗುತ್ತಾರೆ ಮತ್ತು ಅವರ ದೈನಂದಿನ ಚಟುವಟಿಕೆಗಳೇನು ಎಂಬ ಬಗ್ಗೆ ಪೋಲಿಸರು ನಿರಂತರ ಮಾಹಿತಿ ಸಂಗ್ರಹಿಸುವ ಹೊಣೆ ಹೊರಿಸಲಾಗಿದೆ.

ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವ ಕಾನೂನುಬಾಹಿರ ಚಟುವಟಿಕೆಗಳಿಗೆ, ಗೂಂಡಾಗಿರಿಗೆ ಅಥವಾ ರೌಡಿಸಂಗೆ ಯಾವುದೇ ರೀತಿಯ ಅವಕಾಶ ನೀಡಬಾರದು. ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಪೊಲೀಸರು ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುಲಾಗುವುದು ಎಂದು ರೌಡಿ ಶೀಟರ್ ಗೆ ಖಡಕ್ ಎಚ್ಚರಿಕೆ ನೀಡಲಾಯಿತು.

 ಕಾರ್ಯಾಚರಣೆಯಲ್ಲಿ ಇನ್ಸ್‌ಪೆಕ್ಟರ್‌ಗಳಾದ ಡಾ. ನವೀನ್ ಕುಮಾರ್ ಎಂ.ಬಿ., ಅಮರೇಶ್ ಗೌಡ, ಕಲ್ಲಪ್ಪ ಖರಾತ, ಮುತ್ತು ರಾಜ್ ಸೇರಿದಂತೆ ವಿವಿಧ ಠಾಣೆಗಳ ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!