ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಏಕೀಕೃತ ಕರ್ನಾಟಕದ ಪ್ರಥಮ ಮುಖ್ಯಮಂತ್ರಿಗಳು ಹಾಗೂ ನಾಡಿನ ಹಿರಿಯ ಧುರೀಣರಾದ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆಯ ಅಂಗವಾಗಿ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಇರುವ ಅವರ ಪ್ರತಿಮೆಗೆ ಹಾಗೂ ಭಾವಚಿತ್ರಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಕರ್ನಾಟಕದ ಏಕೀಕರಣ ಚಳವಳಿ, ಆಡಳಿತ ಸುಧಾರಣೆ, ಶಿಕ್ಷಣ ಕ್ಷೇತ್ರ ಹಾಗೂ ರಾಜ್ಯದ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ ನಿಜಲಿಂಗಪ್ಪನವರು ನೀಡಿದ ಕೊಡುಗೆಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.
ಜನಪರ ಹಾಗೂ ದೂರದೃಷ್ಟಿಯ ಆಡಳಿತಕ್ಕೆ ಮಾದರಿಯಾಗಿದ್ದ ನಿಜಲಿಂಗಪ್ಪ ಅವರ ಸರಳ ಜೀವನ, ತತ್ತ್ವ ಮತ್ತು ಆದರ್ಶಗಳು ಇಂದಿನ ಜನಪ್ರತಿನಿಧಿಗಳಿಗೆ ಹಾಗೂ ಪ್ರತಿಯೊಬ್ಬರಿಗೂ ನಿರಂತರ ಸ್ಪೂರ್ತಿದಾಯಕವಾಗಿವೆ ಎಂದು ಗೌರವ ಸಲ್ಲಿಸಲಾಯಿತು.



