Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಫೆ.21 ಮತ್ತು 22 ರಂದು ಸರಿಗಮ ಸಂಗೀತ ನೃತ್ಯೋತ್ಸವ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಗಾನಯೋಗಿ ಪಂಡಿತ ಪಂಚಾಕ್ಷರ ಗವಾಯಿಗಳವರ ಜಯಂತೋತ್ಸವದ ಅಂಗವಾಗಿ ಫೆ.21 ಮತ್ತು 22 ರಂದು ಸರಿಗಮ ಸಂಗೀತ ನೃತ್ಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಸರಿಗಮ ಸಂಗೀತ ನೃತ್ಯೋತ್ಸವ ಸಮಿತಿ ಅಧ್ಯಕ್ಷ ಸತ್ಯನಾರಾಯಣರೆಡ್ಡಿ ತಿಳಿಸಿದರು.


ಅವರು ಇಲ್ಲಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪರಮರತ್ನ ಸಂಗೀತ ಸಂಸ್ಥೆ ವತಿಯಿಂದ ಗಾನಯೋಗಿ ಪಂಡಿತ ಪಂಚಾಕ್ಷರ ಚಿತ್ರದುರ್ಗ ನಗರದ ಮದಕರಿ ವೃತ್ತದ ವಾಲ್ಮೀಕಿ ಭವನದಲ್ಲಿ
“ಸರಿಗಮ ಸಂಗೀತ ನೃತ್ಯೋತ್ಸವ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಫೆ.21ರಂದು ಸಂಜೆ 5ಕ್ಕೆ ಉದ್ಘಾಟನಾ ಸಮಾರಂಭ ನೆರವೇರಲಿದೆ. ಶಿರಹಟ್ಟಿ ಬಾಳೇಹೊಸೂರು  ಸಂಸ್ಥಾನ ಮಠದ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ  ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಗೋವಿಂದ ಎಂ.ಕಾರಜೋಳ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ನಗರಸಭಾ ಸದಸ್ಯ ಕೆ.ಟಿ.ಸುರೇಶ್ ಭಾಗವಹಿಸುವರು. ಉದ್ಯಮಿ ಸೈಟ್ ಬಾಬಣ್ಣ, ಚನ್ನಕೇಶವ ಜ್ಯುವಲರ್ಸ್ ಮಾಲೀಕ ಸಿ.ಮಂಜುನಾಥ್, ಜ್ಞಾನ ಜ್ಯೋತಿ ವಿದ್ಯಾಮಂದಿರ ಅಧ್ಯಕ್ಷ ಜಿ.ಟಿ.ಕಿರಣ್ ಕುಮಾರ್ ಗೌರವ ಉಪಸ್ಥಿತಿ ವಹಿಸುವರು.

ಹೂವಿನಹಡಗಲಿಯ ನಿವೃತ್ತ ಪ್ರಾಂಶುಪಾಲ ಟಿ.ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸುವರು. ಅಂಜನಾ ನೃತ್ಯ ಕಲಾ ಕೇಂದ್ರದ ಡಾ.ನಂದಿನಿ ಶ್ರೀ ಶಿವಪ್ರಕಾಶ್, ಲಾಸಿಕಾ ಫೌಂಡೇಶನ್ ಶ್ವೇತಾ ಮಂಜುನಾಥ್, ನಾಟ್ಯ ರಂಜಿನಿ ನೃತ್ಯ ಕಲಾ ಕೇಂದ್ರದ ಜಿ.ಕಿರಣ್ ಅವರಿಗೆ ಗೌರವ ಸನ್ಮಾನ ಮಾಡಲಾಗುವುದು. ಧಾರವಾಡದ ಲೇಖಕ ಡಾ.ಎ.ಎಲ್.ದೇಸಾಯಿ ಅವರ ಶ್ರೀ ಗುರು ವಚನಪ್ರಭ-ವಚನ ವಿಶ್ಲೇಷಣೆ ಸಂಪುಟ-1 ಹಾಗೂ ಗೋಕರ್ಣದ ಡಾ.ಹರೀಶ್ ಹೆಗಡೆ ಸಂಪಾದನೆಯ ಗಾನಸುಧಾ-ಭಾಗ-1, 2 ಪುಸ್ತಕ ಬಿಡುಗಡೆ ಮಾಡುವರು. ಧಾರವಾಡದ ವಿದೂಷಿ ವಿಜೇತಾ ವೆರ್ಣೇಕರ್ ಮತ್ತು ತಂಡದವರಿಂದ ಕಥಕ್ ನೃತ್ಯ ವೈಭವ ನಡೆಯಲಿದೆ.

ಫೆ.22ರಂದು ಸಂಜೆ 5ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಕಬೀರಾನಂದ ಆಶ್ರಮದ ಶಿವಲಿಂಗಾನಂದ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸುವರು. ಮುಖ್ಯ ಅತಿಥಿಗಳಾಗಿ ಮುಖ್ಯ ಅತಿಥಿಗಳಾಗಿ ಶಾಸಕ ಟಿ.ರಘುಮೂರ್ತಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ ಚಲವಾದಿ, ಹೊಸಪೇಟೆ ಉಪ ನೊಂದಣಾಧಿಕಾರಿ ಡಿ.ಜಿ.ಪ್ರೇಮಾನಂದ ಭಾಗವಹಿಸುವರು. ದುರ್ಗದ ಸಿರಿ ಕಲಾ ಸಂಘದ ಅಧ್ಯಕ್ಷ ಎನ್.ಆರ್.ಮಹಾಂತರೆಡ್ಡಿ,

ಅಹೋಬಲ ಟಿ.ವಿ.ಎಸ್. ಮಾಲೀಕ ಪಿ.ವಿ.ಅರುಣ್ ಕುಮಾರ್, ಸಮಾಜ ಸೇವಕ ಬಿ.ಆರ್.ಪುಷ್ಪಲತಾ ಗೌರವ ಉಪಸ್ಥಿತಿ ವಹಿಸುವರು. ಸರಿಗಮ ಸಂಗೀತ ನೃತ್ಯೋತ್ಸವ ಸಮಿತಿ ಅಧ್ಯಕ್ಷ ಸತ್ಯನಾರಾಯಣ ರೆಡ್ಡಿ ಅಧ್ಯಕ್ಷತೆ ವಹಿಸುವರು. ಹಿರಿಯ ಸಂಗೀತ ಕಲಾವಿದರಾದ ತೋಟಪ್ಪ ಉತ್ತಂಗಿ, ಗಿರಿಜಾ ಹಿರೇಮಠ, ಮೀನಾಕ್ಷಿ ಭಟ್,  ಶಾರದಾ ಬ್ರಾಸ್ ಬ್ಯಾಂಡ್‍ನ ಎಸ್.ವಿ.ಗುರುಮೂರ್ತಿ ಅವರಿಗೆ ಗೌರವ ಸನ್ಮಾನ ಮಾಡುವರು. ವಿದೂಷಿ ಸಂಗೀತಾ ಕಟ್ಟಿ ಅವರಿಗೆ ಪರಮರತ್ನ ಸಂಗೀತ ಪುರಸ್ಕಾರ ನೀಡಿ ಗೌರವಿಸಲಾಗುವುದು. ನಂತರ ವಿದೂಷಿ ಸಂಗೀತಾ ಕಟ್ಟಿ ಅವರಿಗೆ ವಿಶೇಷ ಸಂಗೀತ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಪ್ರಾಮಾಣಿಕತೆಗೆ ಸ್ಟಿಂಗ್ ಆಪರೇಶನ್ ಭಯವೇಕೆ?:ಮನಸ್ಸಿನ ಆರೋಗ್ಯಕ್ಕೆ ಅರಿವೇ ಮೊದಲ ಚಿಕಿತ್ಸೆ:ಮೈಸೂರು ದಸರಾ ಸಂಸ್ಕೃತಿ, ಪರಂಪರೆ, ವೈಭವ  ದೃಷ್ಟಿಕೋನ ಚಿಂತನೆ ಕಾರ್ಯಕ್ರಮ ಆಯೋಜನೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನಚಿತ್ರದುರ್ಗ ಜಿಲ್ಲೆಯ ರೈತರಿಗೆ ವಿಮಾ ಮೊತ್ತ ಶೀಘ್ರ ಬಿಡುಗಡೆಗೆ ಕೃಷಿ ಆಯುಕ್ತರಿಗೆ ಮನವಿ ಸಲ್ಲಿಸಿದ ಶಿವಲಿಂಗಪ್ಪಎನ್ ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಆಗುವುದು ನಿಶ್ಚಿತ-ಸಂಸದ ಕಾರಜೋಳದೇಶದ ಯುವಕರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ ಪ್ರಧಾನಿಯಾಗಲು ಹುಚ್ಚರಂತೆ ಓಡಾಡುತ್ತಿದ್ದಾರೆ: ಸಂಸದ ಗೋವಿಂದ್ ಕಾರಜೋಳ ವಾಗ್ದಾಳಿಅನುಭವ ಮತ್ತು ಜ್ಞಾನ ಎರಡೂ ನನ್ನಲ್ಲಿಲ್ಲ- ಸಂಸದ ಗೋವಿಂದ್ ಕಾರಜೋಳ