Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ದೇಶದ ಮೊದಲ ಶಿಕ್ಷಕಿಯಾಗಿ ಅಕ್ಷರಕ್ರಾಂತಿ ಮಾಡಿದ ಸಾವಿತ್ರಿ ಬಾಯಿಫುಲೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹೂ' ಬೆಳೆಯುವ 'ಮಾಲಿ' ಸಮುದಾಯದ ಸಾವಿತ್ರಿಬಾಯಿ ಅಕ್ಷರಗಳನ್ನೇ ಪೋಣಿಸಿ ಹೂಮಾಲೆ ಮಾಡಿದಾಕೆ ಎಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ.ಪಿ ತಿಪ್ಪೇಸ್ವಾಮಿ ಹೇಳಿದರು

ಚಿತ್ರದುರ್ಗ ನಗರದ ಕೋಟೆನಾಡು ಬುದ್ಧ ವಿಹಾರದಲ್ಲಿ ಭಾನುವಾರ ನಡೆದ ಸಾವಿತ್ರಿ ಬಾಯಿ ಫುಲೆ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಲಿಯಿರಿ ಕಲಿಯಿರಿ ವಿದ್ಯೆ ಕಲಿಯಿರಿ, ಆಂಗ್ಲರ ಕಾಲದಲ್ಲಿ ಎಲ್ಲರೂ ಕಲಿಯಲಿ ಮನುವನ್ನು ಕೇಳದಿರಿ ಯಾರೂ ಹಿಂದುಳಿಯದಿರಿ, ವಿದ್ಯೆ ಕಲಿಯೋಣ ಬನ್ನಿ ಜ್ಞಾನ ಪಡೆಯೋಣ ಬನ್ನಿ, ಎಲ್ಲರೂ ಒಂದಾಗಿ ಬನ್ನಿ ಕೂಡಿ ಬಾಳೋಣ ಬನ್ನಿ,ಕೂಡಿ ಕಲಿಯೋಣ ಬನ್ನಿ ಎಂದು ಸಾವಿತ್ರಿಬಾಯಿ ಅವರಿಂದ ಮರಾಠಿ ಭಾಷೆಯ ಪ್ರಥಮ ಬಂಡಾಯ ಕಾವ್ಯ ಪುಣೆಯ ಓಣಿ ಓಣಿಗಳಲ್ಲಿ ಮೊಳಗಿತು. ಹೀಗೆ ಪುಣೆಯ ಬುಧವಾರವಾಡದ ಬಾಲಿಕಾ ಶಾಲೆಯಲ್ಲಿ ಪಾಠ ಮಾಡುತ್ತಾ ಅಕ್ಷರ ದೀಪವನ್ನು ಬೆಳಗುತ್ತಾ ಭಾರತದ ಮೊದಲಶಿಕ್ಷಕಿಯಾಗಿ ಅಕ್ಷರಕ್ರಾಂತಿಗೆ ಕಾರಣರಾದರು ಎಂದರು.

ಹುಡುಗಿಯರಿಗಾಗಿ, ಶೂದ್ರರಿಗಾಗಿ ತೆರೆದ ಶಾಲೆಗಳನ್ನು ನಿಲ್ಲಿಸುವುದಕ್ಕಾಗಿ ಸಂಪ್ರದಾಯಸ್ಥ ಸನಾತನಿ ಬ್ರಾಹ್ಮಣರು ಪ್ರಬಲ ತಡೆಯೊಡ್ಡುತ್ತಾರೆ. ಮೊದಲ ಹುಡುಗಿಯರ ಶಾಲೆಗೆ ಜಾಗ ಕೊಟ್ಟ ಚಿತ್ಪಾವಣ ಬ್ರಾಹ್ಮಣ ತಾತ್ಯಾಸಾಹೇಬ್ ಭಿಡೆ ಅವರಿಗೆ ಜೀವಬೆದರಿಕೆ ಒಡ್ಡಲಾಗುತ್ತದೆ. ಭಿಡೆಯವರು ಈ ಬೆದರಿಕೆಗೆ ಹೆದರದೆ ದೃಢವಾಗಿ ನಿಲ್ಲುತ್ತಾರೆ. ಸಾವಿತ್ರಿಬಾಯಿ ಶಾಲೆಗೆ ಪಾಠಕ್ಕೆ ತೆರಳುವ ಮಾರ್ಗಮಧ್ಯದಲ್ಲಿ ಸೆಗಣಿ ಎಸೆಯುವುದು, ಕಲ್ಲು ತೂರುವುದು ಮಾಡುತ್ತಾರೆ ಇದನ್ನು ಅರಿತ ಜ್ಯೋತಿಬಾ ಅವರ ಕ್ರಾಂತಿಗುರು ಲಾಹೂಜಿ ಸಾಳ್ವೆ ತಮ್ಮ ಗರಡಿಮನೆಯ ನಾಲ್ಕು ಪೈಲ್ವಾನರನ್ನು ಸಾವಿತ್ರಿಬಾಯಿಗೆ ಅಂಗರಕ್ಷಕರಾಗಿ ನೇಮಿಸುತ್ತಾರೆ.

 

ಹೀಗೆ ಆರಂಭವಾದ ಶಾಲೆಗಳ ಚಳವಳಿಯ ಪರಿಣಾಮ ೧೮೪೮ ರಿಂದ ೧೮೫೨ರ ಅವಧಿಯಲ್ಲಿ ೧೮ಶಾಲೆಗಳನ್ನು ಆರಂಭಿಸುತ್ತಾರೆ. ಕೇವಲ ೧೪ವರ್ಷದಲ್ಲಿ ೧೮ಶಾಲೆಗಳನ್ನು ತೆರೆದು ಒಂದು ಶಿಕ್ಷಣ ಕ್ರಾಂತಿಯನ್ನೆ ಮಾಡುತ್ತಾರೆ. ಸಾವಿತ್ರಿಬಾಯಿ ಶಿಕ್ಷಣದ ಜೊತೆ ಜೊತೆಗೆ ಸಂಘಟನೆಯನ್ನು ಕಟ್ಟುತ್ತಾರೆ. ಜನವರಿ.೧೪ರ ೧೮೫೨ರಲ್ಲಿ ಪುಣೆಯಲ್ಲಿ 'ಮಹಿಳಾ ಸೇವಾ ಸಂಘ'ವನ್ನು ಸ್ಥಾಪಿಸುತ್ತಾರೆ.

ಇದರಲ್ಲಿ ಎಲ್ಲಾ ಜಾತಿ ಧರ್ಮದ ಮಹಿಳೆಯರು ಜಾತಿ ಧರ್ಮದ ಗಡಿದಾಟಿ ಒಂದಾಗಿಸಿ ಮಹಿಳಾ ಶಕ್ತಿಯನ್ನು ಏಕೀಕರಣ ಮಾಡುವ ಕನಸೊತ್ತಿದ್ದರು. ಈ ಸಂದರ್ಭದಲ್ಲಿ 'ಅರಿಶಿನ ಕುಂಕುಮ' ಎನ್ನುವ ಆಚರಣೆಯನ್ನು ಮುನ್ನಲೆಗೆ ತಂದರು. ಸಂಕ್ರಾAತಿಯ ದಿನ 'ಎಳ್ಳುಬೆಲ್ಲ' ಎನ್ನುವ ಮತ್ತೊಂದು ಹೊಸ ಆಚರಣೆಯ ಚಾಲ್ತಿಗೆ ತರಲಾಯಿತು. ಈ ಸಂಘಕ್ಕೆ ಪುಣೆಯ ಜಿಲ್ಲಾಧಿಕಾರಿಯ ಪತ್ನಿ ಈ.ಸಿ.ಜೋನ್ಸ್ ಅಧ್ಯಕ್ಷರಾಗಿದ್ದರು. ಸಾವಿತ್ರಿಬಾಯಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದರು.

ಅಕ್ಷರ ಓದಲು ಬರೆಯಲು ಕಲಿತರಷ್ಟೇ ಸಾಲದು ಆ ಅಕ್ಷರ ಓದಿನ ಮೂಲಕ ಜ್ಞಾನದ ಹುಡುಕಾಟ ಮಾಡಬೇಕೆಂಬುದು ಜ್ಯೋತಿಭಾ ಕನಸಾಗಿತ್ತು. ಇದರ ಪ್ರತಿಫಲವಾಗಿ ೧೮೫೨ರಲ್ಲಿ 'ಪುಣೆ ಲೈಬ್ರರಿ' ಯನ್ನು ಸ್ಥಾಪಿಸುತ್ತಾರೆ. ಇದರ ಫಲವಾಗಿ ೧೮೫೩ರಲ್ಲಿ ಮುಕ್ತಾ ಸಾಳ್ವೆ ಎಂಬ ದಲಿತ ವಿದ್ಯಾರ್ಥಿನಿ ಗ್ರಂಥಾಲಯದ ಓದಿನ ಪರಿಣಾಮ 'ಅಸ್ಪೃಶ್ಯರ ನೋವು' ಎಂಬ ಲೇಖನ ಬರೆಯುತ್ತಾಳೆ. ಈ ಬರಹ ವಿಕ್ಟೋರಿಯಾ ರಾಣಿಯ ಗಮನಸೆಳೆಯುತ್ತದೆ.

ಜ್ಯೋತಿಬಾ ಅವರ ಸಾರ್ವತ್ರಿಕ ಶಿಕ್ಷಣ ಕನಸಿಗೆ ಬೆಂಗಾವಲಾಗಿ ನಿಂತವರನ್ನು ನೆನೆಯಲೇ ಬೇಕಾದವರೆಂದರೆ ಕ್ರಿಸ್ಚಿಯನ್ ಮತಧರ್ಮ ಪ್ರಚಾರಕ ರೆವರೆಂಡ್ ಲಿಂಜಿಟ್ ಸಾಹೇಬ್, ಮುಸ್ಲಿಂ ಮದರಸಾದ ಶಿಕ್ಷಕ ಗಫೂರ್ ಬೇಗ್ ಮುನ್ಷಿ, ಜೋತಿಬಾ ಸಹಪಾಟಿಗಳಾದ ಬ್ರಾಹ್ಮಣರಾದ ಸದಾಶಿವ ಬಲ್ಲಾಳ್ ಗೋವಂಡೆ, ಮೋರೆ ವಿಠ್ಠಲ್ ವಾಳ್ ವಲ್ ಕರ್, ಸಖಾರಾಮ ಯಶವಂತ್ ಪರಾಂಜಪೆ, ತಾತ್ಯಾ ಸಾಹೇಬ್ ಭಿಡೆ ಮೊದಲಾದವರು ಜೋತಿಬಾ ಮತ್ತು ಸಾವಿತ್ರಿಬಾಯಿಗೆ ಹೆಗಲೆಣೆಯಾಗಿ ನಿಂತಿದ್ದರು ಎಂದರು.

ಈ ಸಂದರ್ಭದಲ್ಲಿ ಸಮತಾ ಸೇವಾ ಸಮಿತಿ ಅಧ್ಯಕ್ಷ ಪಿಲ್ಲಳ್ಳಿ ಹರೀಶ್, ಬಿಎಸ್‌ಐ ಜಿಲ್ಲಾ ಕಾರ್ಯದರ್ಶಿ ನನಿವಾಳ ರವಿಕುಮಾರ್, ಉಪನ್ಯಾಸಕ ಈ.ನಾಗೇಂದ್ರಪ್ಪ, ದ್ರಾಕ್ಷಾಯಿಣಿ, ಗಿರಿಜಾ, ತಿಪ್ಪಮ್ಮ, ಬೆಸ್ಕಾಂ ತಿಪ್ಪೇಸ್ವಾಮಿ, ಬನ್ನಿಕೋಡ್ ರಮೇಶ್ ಇತರರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!