ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಉಪವಿಭಾಗೀಯ ಪೊಲೀಸ್ ಇಲಾಖೆಯ ವತಿಯಿಂದ ನಗರದ ನೆಹರು ಮೈದಾನದಲ್ಲಿರುವ ರೋಟರಿ ಸಭಾ ಭವನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ (SC/ST) ಸಾರ್ವಜನಿಕರ ಕುಂದುಕೊರತೆಗಳ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯ ಅಧ್ಯಕ್ಷತೆಯನ್ನು DySP ಗೋಪಾಲಕೃಷ್ಣ ಬಿ.ಎನ್ ವಹಿಸಿದ್ದರು.
ಸಭೆಯನ್ನುದ್ದೇಶಿಸಿ ಮಾತನಾಡಿದ DySP ಬಿ.ಎನ್. ಗೋಪಾಲಕೃಷ್ಣ ಅವರು, "ಶಾಲಾ-ಕಾಲೇಜುಗಳ ಆವರಣದ ಸುತ್ತಮುತ್ತ ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ತಡೆಯಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ವಹಿಸಿದೆ. ಸಂಕಷ್ಟದಲ್ಲಿರುವ ಮತ್ತು ನೊಂದ ಸಾರ್ವಜನಿಕರ ಕುಂದುಕೊರತೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಇಲಾಖೆಯು ಸದಾ ಸಿದ್ಧವಿದೆ. ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಸಹಕಾರ ದೊರೆತರೆ ಇಲಾಖೆಗೆ ಇನ್ನು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಲು ಅನುಕೂಲವಾಗುತ್ತದೆ," ಎಂದು ತಿಳಿಸಿದರು.
ಈ ಸಭೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಚಂದ್ರಶೇಖರ್, ನಗರ ಪೊಲೀಸ್ ಠಾಣೆಯ ಸಿಪಿಐ ಮೊಹಮ್ಮದ್ ಸಿರಾಜ್ ಹಾಗೂ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಶಶಿಕಲಾ ಭಾಗವಹಿಸಿದ್ದರು.
ಅಲ್ಲದೆ, ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಕೆ. ರಾಮಚಂದ್ರ, ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮಣರಾವ್, ಕೆಂಚಪ್ಪ ಆಟೋ, ಹಿರಿಯೂರು ತಾಲೂಕು ಕಾರ್ಯಾಧ್ಯಕ್ಷ ರಂಗಸ್ವಾಮಿ, ನಗರ ಅಧ್ಯಕ್ಷ ದಿಲೀಪ್ ಕುಮಾರ್, ಓಂಕಾರಪ್ಪ, ಕೇಶವಮೂರ್ತಿ, ಕೆ.ಪಿ. ಶ್ರೀನಿವಾಸ್, ಜಿ.ಎಲ್. ಮೂರ್ತಿ, ಬೋರನಕುಂಟೆ ಜೀವೇಶ್, ಮಹೇಶ್, ತಿಮ್ಮರಾಜು, ನಂದಕುಮಾರ್, ಮೋಹನ್, ಗಾಂಧಿನಗರ ಮಹಂತೇಶ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.



