Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಮೇದಾರ ಕೇತೇಶ್ವರ ಸ್ವಾಮೀಜಿಯಿಂದ ಆಶೀರ್ವಾದ ಪಡೆದ ಕಾರ್ಯದರ್ಶಿ ಕೆ.ಜಿ.ಜಗದೀಶ್  

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಶಿಕ್ಷಣವೆಂದರೆ ದೊಡ್ಡ ದೊಡ್ಡ ಕಟ್ಟಗಳನ್ನು ನೋಡಿ ನಿರ್ಧರಿಸುವುದು ಸರಿಯಲ್ಲ. ಸರ್ಕಾರಿ ಶಾಲೆಗಳಲ್ಲಿ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಹೆಚ್ಚಿನ ಅಂಕಗಳನ್ನು ಗಳಿಸುವಂತೆ ಸಿದ್ದಪಡಿಸುವುದು ಶಿಕ್ಷಕರುಗಳ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕಿದೆ ಎಂದು ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಕೆ.ಜಿ.ಜಗದೀಶ್ ತಿಳಿಸಿದರು.


ಹೊಸಪೇಟೆಯಿಂದ ಬೆಂಗಳೂರಿಗೆ ಹೊರಟಿದ್ದ ಅವರು ಚಿತ್ರದುರ್ಗ ಹೊರವಲಯ ದಾವಣಗೆರೆ ರಸ್ತೆಯಲ್ಲಿರುವ ಮೇದಾರ ಕೇತೇಶ್ವರ ಮಹಾ ಮಠಕ್ಕೆ ಭೇಟಿ ನೀಡಿ ಸ್ವಾಮಿಗಳಿಂದ ಆಶೀರ್ವಾದ ಪಡೆದು ನಂತರ ಮಾತನಾಡಿದರು.

ಮಠದ ಆವರಣದಲ್ಲೆಲ್ಲಾ ಸುತ್ತಾಡಿ ಶಾಲೆ ಹಾಗೂ ಕಟ್ಟಡಗಳನ್ನು ವೀಕ್ಷಿಸಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಬಡವರ ಮಕ್ಕಳೆ ಹೆಚ್ಚಾಗಿ ದಾಖಲಾಗುತ್ತಾರೆ. ಖಾಸಗಿ ಶಾಲೆಗಳವರು ಬೃಹಧಾಕಾರವಾದ ಕಟ್ಟಡಗಳನ್ನು ಕಟ್ಟಿ ಪೋಷಕರು ಮತ್ತು ಮಕ್ಕಳನ್ನು ಆಕರ್ಷಿಸುವುದು ಸಹಜ. ಆದರೆ ಬಡ ಮಕ್ಕಳು ಖಾಸಗಿ ಶಾಲೆಗಳಿಗೆ ಸೇರುವಂತ ಸ್ಥಿತಿಯಲ್ಲಿರುವುದಿಲ್ಲ. ನಿರ್ವಂಚನೆಯಿಂದ ಮಕ್ಕಳಿಗೆ ಪಾಠ ಹೇಳಿಕೊಟ್ಟು ಸರ್ಕಾರಿ ಶಾಲೆಗಳಿಗೆ ಒಳ್ಳೆಯ ಕೀರ್ತಿ ತರಬೇಕೆಂದು ಶಿಕ್ಷಕರುಗಳಿಗೆ ಸೂಚಿಸಿದರು.

ಮೇದಾರ ಕೇತೇಶ್ವರ ಮಹಾ ಮಠದ ಇಮ್ಮಡಿ ಬಸವ ಮೇದಾರ ಕೇತೇಶ್ವರ ಸ್ವಾಮೀಜಿ, ಮಠದ ಅಧ್ಯಕ್ಷ ಸಿ.ಪಿ.ಪಾಟೀಲ್, ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರುಗಳಾದ ಮಹೇಶ್ ಅಂಗಡಿ, ದುರ್ಗಾನಾಯ್ಕ, ತಹಶೀಲ್ದಾರ್ ಗೋವಿಂದರಾಜ್, ಪರಿಶಿಷ್ಟ ಪಂಗಡ ಇಲಾಖೆಯ ಅಧಿಕಾರಿ ದಿವಾಕರ್, ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶರಣಪ್ಪ ಹಾಗೂ ಶಿಕ್ಷಕ ವೃಂದದವರು ಈ ಸಂದರ್ಭದಲ್ಲಿ ಹಾಜರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ನಲ್ಲಿ ಅಶಾಂತಿ: ಮೂರನೇ, ನಾಲ್ಕನೇ ಸಿಎಂ ಕೂಡ ಬರಬಹುದು: ಛಲವಾದಿ ನಾರಾಯಣಸ್ವಾಮಿಸುಪ್ರೀಂ ತೀರ್ಪಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವುದು ದ್ವೇಷ ಪ್ರಚೋದನೆಯಾಗುವುದಿಲ್ಲ: ಹೈಕೋರ್ಟ್2028ಕ್ಕೆ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ? ರಾಜಕೀಯ ಲೆಕ್ಕಾಚಾರ!ಖಾಲಿಸ್ತಾನ್ ಉಗ್ರ ಪನ್ನುನ್ ಕುಕೃತ್ಯ: ಮೋದಿ ಸರ್ಕಾರ ಬೀಳಿಸಲು ವಿದೇಶದಿಂದ ಸಂಚು!ನಟಿ ರಚಿತಾ ರಾಮ್‌ಗೆ ಮುಜುಗರ; ಸೆಲ್ಫಿ ನೆಪದಲ್ಲಿ ಅಭಿಮಾನಿಯ ಅತಿರೇಕದ ವರ್ತನೆ!ಸಮಾಜವಾದಿ ಪಕ್ಷದೊಂದಿಗೆ ಮೈತ್ರಿಗೆ ಕಾಂಗ್ರೆಸ್ ಸಿದ್ಧತೆ:125ಕ್ಕೂ ಹೆಚ್ಚು ಸ್ಥಾನಗಳ ಮೇಲೆ ಕಣ್ಣು!ಖರ್ಗೆ-ಮೋದಿ ಮುಖಾಮುಖಿ: ಕ್ಷೇತ್ರ ಮರುವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಕುರಿತು ಇಂದು ಪ್ರಧಾನಿ ಭೇಟಿಕಾಂಗ್ರೆಸ್‌ನಲ್ಲಿ ಸ್ಟಿಂಗ್ ಆಪರೇಷನ್ ವಿವಾದದ ನಡುಕ: ಸಿದ್ದರಾಮಯ್ಯ ಮೌನ, ಮುಖಂಡರ ಸರಣಿ ಸಭೆಗಳಿಂದ ಹೆಚ್ಚಿದ ಕುತೂಹಲಶ್ರೇಷ್ಠ ತೋಟಗಾರಿಕಾ ರೈತ/ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭ್ರಮೆಯಿಂದ ಹೊರಬರಬೇಕು