LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳವರ ಶಿಕ್ಷಣ ಮತ್ತು ಸಮಾಜಸೇವೆ ಆದರ್ಶನೀಯ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಚಿತ್ರದುರ್ಗ:
ಬರದ ನಾಡಿನಲ್ಲಿ ಅಕ್ಷರ ಜ್ಞಾನದ ಬೆಳಕನ್ನು ಬೆಳಗಿಸಿದ ಮಹಾ ದಾಸೋಹಿ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳವರ 32 ನೇ ಪುಣ್ಯಸ್ಮರಣೆಯನ್ನು ನಗರದ ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ವಿದ್ಯಾರ್ಥಿನಿಯರು ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

​ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ರಮೇಶ ಕೆ. ಮಾತನಾಡಿ, "ಶ್ರೀ ಮುರುಘ ರಾಜೇಂದ್ರ ಬೃಹನ್ಮಠದ 19ನೇ ಪೀಠಾಧ್ಯಕ್ಷರಾಗಿದ್ದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಅನ್ನ ಮತ್ತು ಅಕ್ಷರ ದಾಸೋಹದ ಮೂಲಕ ಸಮಾಜದಲ್ಲಿ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದಾರೆ. ಕಾಶಿಯಲ್ಲಿ ಸಕಲ ವಿದ್ಯೆಗಳನ್ನು ಕಲಿತ್ತ ಇವರು, ಬಸವಾದಿ ಶರಣರ ವಚನ ಸಾಹಿತ್ಯವನ್ನು ಹೊರಜಗತ್ತಿಗೆ ಹಾಗೂ ಇತರ ಭಾಷೆಗಳಿಗೆ ತಲುಪಿಸಲು ಶ್ರಮಿಸಿದರು. ವಚನಗಳನ್ನು ಹಿಂದಿ ಭಾಷೆಗೆ ತರ್ಜುಮೆ ಮಾಡಲು ಮೈಸೂರು ವಿಶ್ವವಿದ್ಯಾನಿಲಯಕ್ಕೆ ಅಂದಿನ ಕಾಲದಲ್ಲೇ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದು ಅವರ ಸಾಹಿತ್ಯ ಪ್ರೇಮಕ್ಕೆ ಸಾಕ್ಷಿ" ಎಂದು ಬಣ್ಣಿಸಿದರು.

​ಅಲ್ಲದೆ, "ಯಾವುದೇ ಸೌಲಭ್ಯಗಳಿಲ್ಲದ, ಅಜ್ಞಾನ ಆವರಿಸಿದ್ದ ಬರದ ನಾಡಿನಲ್ಲಿ ಶ್ರೀಗಳು ಬಿತ್ತಿದ ಅಕ್ಷರ ಜ್ಞಾನದ ಬೀಜವು ಇಂದು 'ಎಸ್.ಜೆ.ಎಂ. ವಿದ್ಯಾಪೀಠ'ವಾಗಿ ಹೆಮ್ಮರವಾಗಿ ಬೆಳೆದಿದ್ದು, ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಾ ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸಿದೆ" ಎಂದು ಸ್ಮರಿಸಿದರು.

​ಕಾಲೇಜಿನ ಪ್ರಾಂಶುಪಾಲರಾದ ಡಾ. ಎಲ್. ಈಶ್ವರಪ್ಪ ಮಾತನಾಡಿ, "ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಸ್ಥಾಪಿಸಿದ ಪ್ರಾಥಮಿಕ, ಪ್ರೌಢಶಾಲೆಗಳು, ಕಾಲೇಜುಗಳು ಮತ್ತು ವಿದ್ಯಾರ್ಥಿ ನಿಲಯಗಳು ಇಂದು ನಾಡಿನಾದ್ಯಂತ ಲಕ್ಷಾಂತರ ಜನರ ಬದುಕಿಗೆ ಬೆಳಕಾಗಿವೆ. ಅವರ ಕೊಡುಗೆ ಹಾಗೂ ಸಮಾಜಸೇವೆ ಸರ್ವರಿಗೂ ಮಾರ್ಗದರ್ಶಿಯಾಗಿದೆ" ಎಂದರು.

​ಈ ಭಾವಪೂರ್ಣ ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕ ಎಂ.ಎಸ್. ಪರಮೇಶ್ವರಪ್ಪ, ಬೋಧಕ ಸಿಬ್ಬಂದಿಗಳಾದ ಜಿ.ಎಸ್. ನಾಗರಾಜ, ಡಾ. ಗೋವಿಂದಪ್ಪ ಎನ್.ಎಲ್., ಕುಮಾರ್ ಜಿ, ಡಾ. ರವಿ ಮಟ್ಟಿಹಾಳ, ಗಿರೀಶ್ ಟಿ., ನಿರ್ಮಲ್ ಜೆ. ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ಹಿರಿಯೂರಿನಲ್ಲಿ ರಾಜಕೀಯ ಪಕ್ಷಗಳ ಸಭೆಶ್ರೀ ಮಲ್ಲಿಕಾರ್ಜುನ ಸ್ವಾಮಿಗಳವರ ಶಿಕ್ಷಣ ಮತ್ತು ಸಮಾಜಸೇವೆ ಆದರ್ಶನೀಯ ಬೇತೂರುಪಾಳ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಪುನರ್ಮಿಲನ ಹಾಗೂ ಗುರುವಂದನೆಶತಮಾನದ ಜ್ಞಾನ ದೇಗುಲ: ಹೀರದ ಸೂಗಮ್ಮ ಶಾಲೆಯ ಶತಮಾನೋತ್ಸವ ಉದ್ಘಾಟಿಸಿದ ಸಚಿವ ಎಂ. ಬಿ. ಪಾಟೀಲ್ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ: ಪುಷ್ಪಾರ್ಚನೆ ಮಾಡಿ ಗೌರವ ನಮನ​ 'ನಶೆ ಮುಕ್ತ ಭಾರತ' ನಿರ್ಮಾಣಕ್ಕೆ ಪ್ರತಿಜ್ಞಾವಿಧಿ: ಬಿ. ವೈ. ವಿಜಯೇಂದ್ರ'ಅಗ್ನಿ-4' ಕ್ಷಿಪಣಿ ಉಡಾವಣೆ ಯಶಸ್ವಿ: ಭಾರತದ ರಕ್ಷಣಾ ವಲಯಕ್ಕೆ ಮತ್ತಷ್ಟು ಬಲ, 'ಆತ್ಮನಿರ್ಭರ ಭಾರತ'ಕ್ಕೆ ದಿಕ್ಸೂಚಿE20 ಎಥನಾಲ್ ಇಂಧನ ನೀತಿ ವಿರುದ್ಧ ಕೇಂದ್ರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳ ಸುರಿಮಳೆ‘ಕಸದಿಂದ ಮುಕ್ತಿ’ ಅಭಿಯಾನಕ್ಕೆ ಬೆಸ್ಕಾಂ ಬೆಂಬಲ:ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿ, ಶಾಸಕರಿಗೆ ಅಧಿಕಾರ ದಾಹ: ಸಚಿವ ಹೆಚ್.ಡಿ. ಕುಮಾರಸ್ವಾಮಿ