Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ಧರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವದ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಗುರುವಾರ ಮಹಾತ್ಮಾ ಗಾಂಧೀಜಿಯವರ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ‌ಅನಾವರಣಗೊಳಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.


ತದನಂತರ ವೀರಸೌಧದ ಆವರಣದಲ್ಲಿನ ಗಾಂಧಿ ಸ್ಮಾರಕ ಭವನದಲ್ಲಿನ ನವೀಕೃತ ಪೋಟೋ ಗ್ಯಾಲರಿಯನ್ನು‌ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.

ಇದೇ ವೇಳೆ ವೀರಸೌಧ(ಕಾಂಗ್ರೆಸ್ ಬಾವಿ) ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಸಿ ನೆಟ್ಟು ನೀರೆರೆದರು.

ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ್, ಶರಣಬಸಪ್ಪ ದರ್ಶನಾಪುರಕೆ.ಎಚ್.ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ‌ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಆರ್.ವಿ.ದೇಶಪಾಂಡೆ,

ಸರಕಾರದ ಮುಖ್ಯ ಸಚೇತಕ ಅಶೋಕ‌‌ಪಟ್ಟಣ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ ಬಿ.ಬಿ., ಆಯುಕ್ತ ಹೇಮಂತ್ ನಿಂಬಾಳ್ಕರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಒಂ ಸಿಇಓ ರಾಹುಲ್ ಶಿಂಧೆ, ವಾರ್ತಾ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಡೊಳ್ಳಿನ, ಉಪ ನಿರ್ದೆಶಕ ಗುರುನಾಥ ಕಡಬೂರ ಮತ್ತಿತರರು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST