Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ

 ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ
, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. 

ವಿಧಾನ ಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು.
ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು  ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ.

ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದರು.

ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 2 ಎಕ್ರೆ ವರೆಗೆ  ಭೂ ಪರಿವರ್ತನೆಯ ಅವಶ್ಯಕತೆ ಇಲ್ಲದೆ ನೇರವಾಗಿ ಪ್ಲಾನ್ ಅಪ್ರೋವ್ ಮಾಡಿಸಿಕೊಳ್ಳಬಹುದಾಗಿದೆ ಹಾಗೂ  ರಿನೀವಲ್ ಎನರ್ಜಿ  ಯೋಜನೆ ಗಳಿಗೆ ಕನ್ವರ್ಶನ್ ಅಗತ್ಯವಿಲ್ಲ ಮತ್ತು ರೆವಿನ್ಯು  ಕೋರ್ಟ್ ನಡೆಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!