Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಸಿಂಗಾಪುರ-ಕರ್ನಾಟಕ ಸಹಭಾಗಿತ್ವ: ಸಚಿವ ಎಂ.ಬಿ. ಪಾಟೀಲ್

 ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ಜಾಗತಿಕ ಸೆಮಿಕಂಡಕ್ಟರ್ ಭೂಪಟದಲ್ಲಿ ಕರ್ನಾಟಕದ ಸ್ಥಾನವನ್ನು ಮತ್ತಷ್ಟು ಎತ್ತರಕ್ಕೇರಿಸುವ ನಿಟ್ಟಿನಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಸಿಂಗಾಪುರ ಸೆಮಿಕಂಡಕ್ಟರ್ ಇಂಡಸ್ಟ್ರಿ ಅಸೋಸಿಯೇಷನ್ ಕಾರ್ಯನಿರ್ವಾಹಕ ನಿರ್ದೇಶಕ ಆಂಗ್ ವೀ ಸೆಂಗ್ ಅವರೊಂದಿಗೆ ಮಹತ್ವದ ಸಭೆ ನಡೆಸಿದರು. 

​ಸಭೆಯಲ್ಲಿ ವೇಗವಾಗಿ ಬೆಳೆಯುತ್ತಿರುವ ಕರ್ನಾಟಕದ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆ ಹಾಗೂ ಉಭಯ ಪ್ರದೇಶಗಳ ನಡುವೆ ದೀರ್ಘಕಾಲಿಕ ಸಾಂಸ್ಥಿಕ ಸಹಭಾಗಿತ್ವ ಏರ್ಪಡಿಸುವ ಕುರಿತು ವಿಸ್ತೃತ ಸಂವಾದ ನಡೆಯಿತು.

Advertisement

​​ಕರ್ನಾಟಕದ ಸಾಮರ್ಥ್ಯ ಪ್ರದರ್ಶನ: ಸೆಮಿಕಂಡಕ್ಟರ್ ವಿನ್ಯಾಸ, ಉಪಕರಣಗಳು, ಕಚ್ಚಾವಸ್ತುಗಳು, ಉತ್ಪಾದನೆ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ರಾಜ್ಯ ಹೊಂದಿರುವ ಅಪ್ರತಿಮ ಸಾಮರ್ಥ್ಯವನ್ನು ಸಚಿವರು ವಿವರವಾಗಿ ಮಂಡಿಸಿದರು. 

​ಮಾನವ ಸಂಪನ್ಮೂಲ ಹಾಗೂ ಶೈಕ್ಷಣಿಕ ವಿನಿಮಯ: ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮ-ಶೈಕ್ಷಣಿಕ ಸಹಭಾಗಿತ್ವವನ್ನು ಬಲಪಡಿಸಲು ವಿಶೇಷ ಒತ್ತು ನೀಡಲಾಯಿತು. ಮುಖ್ಯವಾಗಿ ಬೆಂಗಳೂರಿನ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ 'ಸ್ಟೂಡೆಂಟ್ ಎಕ್ಸ್‌ಚೇಂಜ್' ಕಾರ್ಯಕ್ರಮಗಳನ್ನು ವಿಸ್ತರಿಸುವ ಬಗ್ಗೆ ವಿಚಾರ ವಿನಿಮಯ ನಡೆಯಿತು. 

​ಜಾಗತಿಕ ಹೂಡಿಕೆಗಳ ಬಲ: ಬೆಂಗಳೂರಿನಲ್ಲಿ ಲ್ಯಾಮ್ ರಿಸರ್ಚ್ ಮತ್ತು ಅಪ್ಲೈಡ್ ಮೆಟೀರಿಯಲ್ಸ್ ನಂತಹ ಜಾಗತಿಕ ಸೆಮಿಕಂಡಕ್ಟರ್ ದೈತ್ಯ ಸಂಸ್ಥೆಗಳು ಕೈಗೊಳ್ಳಲಿರುವ ಮುಂಬರುವ ಬೃಹತ್ ಹೂಡಿಕೆಗಳು ರಾಜ್ಯದ ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಸಚಿವರು ಉಲ್ಲೇಖಿಸಿದರು.

​GIM 2027ಗೆ ಆಹ್ವಾನ: ಕರ್ನಾಟಕದಲ್ಲಿ ಹೂಡಿಕೆ ಅವಕಾಶಗಳನ್ನು ಪರಿಶೀಲಿಸಲು ಮತ್ತು ಸಹಭಾಗಿತ್ವ ಬೆಳೆಸಲು SSIA ಸಂಸ್ಥೆಯ ಎಲ್ಲಾ ಸದಸ್ಯರಿಗೆ ಮುಂಬರುವ 'ಜಾಗತಿಕ ಹೂಡಿಕೆದಾರರ ಸಮಾವೇಶ-2027' ಕ್ಕೆ (GIM 2027) ಸಚಿವರು ಅಧಿಕೃತ ಆಹ್ವಾನ ನೀಡಿದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಭಟನೆ ಹತ್ತಿಕ್ಕುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವಿಜಯನಗರದ ಮಹಾನವಮಿ; ಸಾಮ್ರಾಜ್ಯದ ವೈಭವದಿಂದ ಶ್ರೀರಂಗಪಟ್ಟಣ ದಸರಾವರೆಗೆ:ಮೂರ್ಖನಾದ ಮಹಾರಾಜನ್ : ವೆಂಕಟೇಶ್, ಚಿತ್ರದುರ್ಗಚಳ್ಳಕೆರೆಯಲ್ಲಿ ಇಂದು 'ಮಾತೃಶ್ರೀ ಪ್ರಸಾದ ನಿಲಯ' ಉದ್ಘಾಟನೆಕಾಶಿಯಲ್ಲಿ ವಿಶ್ವ ಕನ್ನಡ ಕಲಾ ಸಂಸ್ಥೆಯ ಸಾಂಸ್ಕೃತಿಕ ಸಂಭ್ರಮ: 30 ಪ್ರವಾಸಿಗರಿಗೆ ‘ಕನ್ನಡ ಸೇವಾ ರತ್ನ’ ಪ್ರಶಸ್ತಿ ಪ್ರದಾನವಿಜೃಂಭಣೆಯ 'ರೈತ ಸ್ವಾಭಿಮಾನ ಯಾತ್ರೆ': ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪಾದಯಾತ್ರೆ ನಡೆಸಿದ ನಿಖಿಲ್ಕವಿತೆ ಬರೆಯುವುದು, ಸಾಹಿತಿಯಾಗುವುದು ಲೋಕದ ಜವಾಬ್ದಾರಿ: ಸಾಹಿತಿ ಬಂಜಗೆರೆ ಜಯಪ್ರಕಾಶ್ತುಮಕೂರು ದಸರಾ ಮಹೋತ್ಸವಕ್ಕೆ ಸಿದ್ಧಗಂಗಾ ಶ್ರೀ ಚಾಲನೆ: 5 ಸಾವಿರಕ್ಕೂ ಅಧಿಕ ಕಲಾವಿದರಿಂದ ಕಲಾ ಪ್ರದರ್ಶನಬಿಜೆಪಿ ಕೋರ್ ಕಮಿಟಿ ಸಭೆ: ಹಿರಿಯೂರು ಉಪಚುನಾವಣೆಗೆ ಕಮಲ ಪಕ್ಷದ ಕಸರತ್ತುಐಐಟಿ ಮದ್ರಾಸ್‌ನ ಶ್ರೀ ಜಲಕಂಠೇಶ್ವರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: ವಿಶೇಷ ಪೂಜೆ ಸಲ್ಲಿಕೆ