LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಧುಮೇಹ ತಡೆಗೆ ಸಾಮಾಜಿಕ ಜಾಗೃತಿ ಅಗತ್ಯ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಇಲ್ಲಿನ ಲಯನ್ಸ್‌ಕ್ಲಬ್‌ಆಫ್‌ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌
, ಶ್ರೀ ದೇವರ ದಾಸಿಮಯ್ಯ ಮಿತ್ರ ಮಂಡಲಿ ನೇಕಾರರ ಸಂಘ, ವಸಂತ ಡಯಾಗ್ನೋಸ್ಟಿಕ್ಸ್‌ಸಹಯೋಗದಲ್ಲಿ 61ನೇ ಮಾಸಿಕ ಉಚಿತ ಮಧುಮೇಹ ತಪಾಸಣಾ ಶಿಬಿರ ದರ್ಗಾಜೋಗಿಹಳ್ಳಿ ಮುಖ್ಯರಸ್ತೆಯ ಗಣೇಶ ದೇವಸ್ಥಾನದ ಬಳಿ ನಡೆಯಿತು.

ದೇವರ ದಾಸಿಮಯ್ಯ ಮಿತ್ರ ಮಂಡಲಿ ನೇಕಾರರ ಸಂಘದ ಅಧ್ಯಕ್ಷ ರಾಮಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ, ಸಂಘದ ನೇತೃತ್ವದಲ್ಲಿ ಆರೋಗ್ಯ ಜಾಗೃತಿ ಮತ್ತು ತಪಾಸಣಾ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಸೋಮವಾರದಂದು ಮಧುಮೇಹ ತಪಾಸಣೆ ಮತ್ತು ರಕ್ತದೊತ್ತಡ ತಪಾಸಣೆಯ ಉಚಿತ ಶಿಬಿರಗಳನ್ನು ಲಯನ್ಸ್‌ಕ್ಲಬ್‌ಸಹಯೋಗದಲ್ಲಿ ನಡೆಸಿಕೊಂಡು ಬರಲಾಗುತ್ತಿದೆ ಎಂದು ವಿವರಿಸಿದರು.

ಲಯನ್ಸ್ ಕ್ಲಬ್‌ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಸಂಯೋಜಕ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಮಧುಮೇಹ ತಡೆಗೆ ಸಾಮಾಜಿಕ ಜಾಗೃತಿ ಅಗತ್ಯವಾಗಿದೆ. ಲಯನ್ಸ್‌ಸಂಸ್ಥೆಯ ವತಿಯಿಂದ ಪ್ರತಿ ಶನಿವಾರ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಪ್ರತಿ ತಿಂಗಳ ಮೊದಲ ಸೋಮವಾರ ಐಒಎಲ್‌ಶಸ್ತ್ರ ಚಿಕಿತ್ಸಾ ಶಿಬಿರಗಳನ್ನು ನಡೆಸಲಾಗುತ್ತಿದೆ. ಅದೇ ರೀತಿ ಪ್ರತಿ ತಿಂಗಳ ಮೊದಲ ದಿನಾಂಕದಂದು ಉಚಿತ ಸಂಪೂರ್ಣ ಆರೋಗ್ಯ ತಪಾಸಣಾ ಶಿಬಿರವನ್ನು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಫಲಾನುಭವಿಗಳು ಸದುಪಯೋಗ ಪಡೆಯಬಹುದಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಲಯನ್ಸ್‌ಕ್ಲಬ್‌ಅಧ್ಯಕ್ಷ ಕೆ.ಸಿ.ನಾಗರಾಜ್ ಮಾತನಾಡಿ, ನೇತ್ರದಾನದ ಮಹತ್ವದ ಕೆಲಸವನ್ನು ದೊಡ್ಡಬಳ್ಳಾಪುರದಲ್ಲಿ ವ್ಯವಸ್ಥಿತವಾಗಿ ನಡೆಸಿಕೊಂಡು ಬರಲಾಗುತ್ತಿದ್ದು, ವ್ಯಕ್ತಿ ಸತ್ತ ನಂತರ ಕಣ್ಣುಗಳನ್ನು ಸುಡದೆ ಅಥವಾ ಮಣ್ಣು ಮಾಡದೆ ದಾನ ಮಾಡುವುದರಿಂದ ನಾಲ್ಕೈದು ಜನ ಅಂಧರಿಗೆ ದೃಷ್ಟಿ ನೀಡಬಹುದಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ದೊಡ್ಡಬಳ್ಳಾಪುರದಲ್ಲಿ ಸುಮಾರು 3 ಸಾವಿರ ಕಣ್ಣು ಗುಡ್ಡೆಗಳ ಸಂಗ್ರಹ ನಡೆದಿದೆ. ಇದು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದು, ಈ ಬಗ್ಗೆ ಎಲ್ಲರೂ ಅರಿವು ಮೂಡಿಸಬೇಕು. ನೇತ್ರದಾನಕ್ಕೆ ಉತ್ತೇಜನ ನೀಡಬೇಕು ಎಂದರು.

ಲಯನ್ಸ್‌ಜಿಲ್ಲಾ ಆಡಳಿತಾಧಿಕಾರಿ ಎಂ.ಆರ್.ಶ್ರೀನಿವಾಸ್‌, ಪ್ರಾಂತೀಯ ಅಧ್ಯಕ್ಷ ಜೆ.ಆರ್.ರಾಕೇಶ್, ವಲಯ ಅಧ್ಯಕ್ಷ ಡಾ.ಎಂ.ಶ್ರೀನಿವಾಸರೆಡ್ಡಿ, ಲಯನ್ಸ್‌ಕ್ಲಬ್ ಕಾರ್ಯದರ್ಶಿ ಎ.ಎಸ್.ಸುಮ, ಖಜಾಂಚಿ ವೈ.ಎಂ.ಹರ್ಷ, ಹಸಿವು ನಿವಾರಣೆ ವಿಭಾಗದ ಮಂಜುನಾಥ್, ದೇವರ ದಾಸಿಮಯ್ಯ ಮಿತ್ರ ಮಂಡಲಿ ಉಪಾಧ್ಯಕ್ಷ ರಾಮಣ್ಣ, ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಎನ್.ರಾಮಚಂದ್ರ, ಕಾರ್ಯಾಧ್ಯಕ್ಷ ಇ.ಬಾಬು, ಸಹಕಾರ್ಯದರ್ಶಿ ವಿಜಯಕುಮಾರ್, ಆರ್.ಶೋಭಾ, ಖಜಾಂಚಿ ಮುನಿನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST