Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯರೆಡ್ಡಿ ದಿಢೀರ್ ರಾಜೀನಾಮೆ?

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಯನಗರದ ಮಾಜಿ ಶಾಸಕಿ ಸೌಮ್ಯರೆಡ್ಡಿ ಅವರು ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಒಂದೂವರೆ ತಿಂಗಳ ಹಿಂದೆಯೇ ರಾಜೀನಾಮೆ ಸಲ್ಲಿಸಿದ್ದರೂ
, ಇದೀಗ ಈ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿದೆ.

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಿರುವ ರಾಜೀನಾಮೆ ಪತ್ರದಲ್ಲಿ ತಮ್ಮ ಅಧಿಕಾರದ ಅವಧಿಯ ಅನುಭವಗಳನ್ನು ಅವರು ಹಂಚಿಕೊಂಡಿದ್ದಾರೆ. ತಾನು ಈ ಜವಾಬ್ದಾರಿಯನ್ನು ವಹಿಸಿಕೊಂಡಾಗ ಕೇವಲ ಎರಡು ವರ್ಷಗಳ ಅವಧಿಗೆ ಮಾತ್ರ ಸ್ವೀಕರಿಸಿದ್ದೆ ಎಂದು ತಿಳಿಸಿರುವ ಅವರು, ರಾಜ್ಯಾದ್ಯಂತ ಪ್ರವಾಸ ಮಾಡಿ ಮಹಿಳೆಯರನ್ನು ಭೇಟಿಯಾದದ್ದು, ಅವರ ಆರೋಗ್ಯ, ಶಿಕ್ಷಣ ಹಾಗೂ ಆರ್ಥಿಕ ಸಬಲೀಕರಣದ ಕುರಿತು ಚರ್ಚಿಸಿ ಪಕ್ಷಕ್ಕೆ ಸೇರ್ಪಡೆಗೊಳಿಸಿದ್ದು ಸೌಭಾಗ್ಯದ ಸಂಗತಿ ಎಂದಿದ್ದಾರೆ. ಅಲ್ಲದೆ, ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಗ್ರಾಮೀಣ ಹಾಗೂ ತಳಮಟ್ಟದಲ್ಲಿ ಮಹಿಳಾ ಕ್ರಾಂತಿಯನ್ನೇ ಸೃಷ್ಟಿಸಿರುವುದನ್ನು ತಾವು ಕಣ್ಣಾರೆ ಕಂಡಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಂಪುಟದಲ್ಲಿ ಮಹಿಳಾ ಸಚಿವರಿಲ್ಲದಿರುವುದಕ್ಕೆ ಅಸಮಾಧಾನ:
ರಾಜೀನಾಮೆ ಪತ್ರದಲ್ಲಿ ಸೌಮ್ಯ ರೆಡ್ಡಿ ರಾಜ್ಯ ಸಚಿವ ಸಂಪುಟದಲ್ಲಿ ಮಹಿಳಾ ಪ್ರತಿನಿಧಿಗಳಿಲ್ಲದಿರುವ ಬಗ್ಗೆ ಬಹಿರಂಗವಾಗಿಯೇ ಬೇಸರ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರದಲ್ಲಿ ಇಲ್ಲಿಯವರೆಗೆ ಒಬ್ಬರೇ ಒಬ್ಬ ಮಹಿಳಾ ಸಚಿವರು ಇಲ್ಲದಿರುವ ಕೊರತೆಯನ್ನು ಮತ್ತೊಮ್ಮೆ ಹೈಕಮಾಂಡ್ ಹಾಗೂ ಪಕ್ಷದ ನಾಯಕರ ಗಮನಕ್ಕೆ ತರುವುದಾಗಿ ಅವರು ತಿಳಿಸಿದ್ದಾರೆ.

ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಮುಂದುವರಿಕೆ: ಕಾಂಗ್ರೆಸ್ ಹೈಕಮಾಂಡ್, ಎಐಸಿಸಿ, ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು, ಸಚಿವರು, ಶಾಸಕರು ಹಾಗೂ ರಾಜ್ಯಾದ್ಯಂತ ಇರುವ ನಿಷ್ಠಾವಂತ ಪಕ್ಷದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ತಾವು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತೆಯಾಗಿ ಮುಂದುವರಿಯುವುದಾಗಿ ಸ್ಪಷ್ಟಪಡಿಸಿರುವ ಸೌಮ್ಯ ರೆಡ್ಡಿ, 2028ರಲ್ಲಿ ರಾಜ್ಯದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ಹಾಗೂ 2029ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಪಕ್ಷದ ಸಂಘಟನೆಗೆ ಸಂಪೂರ್ಣ ಬೆಂಬಲ ನೀಡಲಿದ್ದು, ಹೈಕಮಾಂಡ್ ಹೊಸ ಅಧ್ಯಕ್ಷರನ್ನು ನೇಮಿಸುವವರೆಗೆ ತಾವು ಈ ಜವಾಬ್ದಾರಿಯಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗದ ದಸರಾ: ಶರಣ ಸಂಸ್ಕೃತಿಯ ಜನೋತ್ಸವ:ಮಂಗಳೂರಿನ ದಸರಾ; ಶಾರದಾ ಮಹೋತ್ಸವದಿಂದ ಜನೋತ್ಸವದವರೆಗೆ:… ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ-ರಮೇಶ್ ಬಾಬುನವರಾತ್ರಿ ಪ್ರಯುಕ್ತ ಅಂಭಾ ಭವಾನಿ ದೇವಿಗೆ ವಿಶೇಷ ಅಲಂಕಾರಹಾಡುಹಗಲೆ ವೃದ್ದೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಕಳ್ಳಛಲವಾದಿ ಗುರುಪೀಠದಲ್ಲಿ ಪ್ರತಿ ತಿಂಗಳ ಮೂರನೆ ಶನಿವಾರದಂದು ಆರೋಗ್ಯ ತಪಾಸಣೆ ಶಿಬಿರ ಆಗ್ನೇಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲಕ್ಷ್ಮಿಕಾಂತ್ ಎಸ್.ಯಾದವ್ ಮತ ನೀಡಲು ಮನವಿಸಂವಿಧಾನದ ಮೌಲ್ಯ ಎತ್ತಿಹಿಡಿಯಲು ಸಿಜೆಐ ಸೂರ್ಯಕಾಂತ್ ಹಾಗೂ ಡಿಕೆಶಿ ಕರೆಸಿದ್ದರಾಮಯ್ಯ ವಿರುದ್ಧದ 'ಸ್ಟಿಂಗ್' ಸಂಚಿಗೆ ರಕ್ತ ಕುದಿಯುತ್ತಿಲ್ಲವೇ?: ಹೆಚ್.ಡಿ. ಕುಮಾರಸ್ವಾಮಿ