Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Sports News

ಹಾಸನದಲ್ಲಿ ಏ.12, 13ಕ್ಕೆ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ವು ಈ ಬಾರಿ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಿಂದ ಇದೇ ಏ.12 ಮತ್ತು 13ರಂದು ಕ್ರಿಕೆಟ್ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದರು. ಪ್ರೆಸ್ ಕ್ಲಬ್ ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಮಾಹಿತಿ ನೀಡಿದರು. 

ಟೂರ್ನಮೆಂಟಿನಲ್ಲಿ ಪ್ರತಿ ಜಿಲ್ಲೆಯ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಎರಡು ದಿನ ಪತ್ರಕರ್ತರ ಕ್ರಿಕೆಟ್ ಕ್ರೀಡಾ ಹಬ್ಬನಡೆಯಲಿದೆ ಎಂದರು.

 ಈ ಪಂದ್ಯಾವಳಿ ಉದ್ಘಾಟನೆಯನ್ನು ಸಹಕಾರ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎನ್ ರಾಜಣ್ಣ ನಡೆಸಿಕೊಡಲಿದ್ದಾರೆ. ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಘನ ಉಪಸ್ಥಿತಲಿರಲಿದ್ದು, ಮುಖ್ಯಮಂತ್ರಿ ಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್ ಪಂದ್ಯಾವಳಿ ಕುರಿತು ಆಶಯ ನುಡಿಗಳನ್ನು ಆಡಲಿದ್ದಾರೆ. ಪ್ರಸ್ತಾವಿಕವಾಗಿ ಎಚ್.ಬಿ.ಮದನಗೌಡರು ಮಾತನಾಡಲಿದ್ದಾರೆ.

 ಸಂಸದರಾದ ಶ್ರೇಯಸ್ ಪಟೇಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಹಿಸಿಲಿದ್ದು, ಹಾಸನ ಪತ್ರಕರ್ತರ ಸಂಘದ ಅಧ್ಯಕ್ಷ ರಾದ ವೇಣುಕುಮಾರ್ ಪ್ರೇರಣಾ ನುಡಿ ಹೇಳಲಿದ್ದಾರೆ.

 ಕ್ರೀಡಾಕೂಟಕ್ಕೆ ಹಾಸನ ಜಿಲ್ಲೆಯ ಎಲ್ಲ ಶಾಸಕರು, ಜಿಲ್ಲೆಯ ಎಲ್ಲ ವರ್ಗದ  ಸರ್ಕಾರಿ ಅಧಿಕಾರಿಗಳು ಹಾಗೂ ಹಾಸನ ಕಾರ್ಯನಿರತ ಪತ್ರಕರ್ತರ ಸಂಘದ ಎಲ್ಲ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಆದ್ದರಿಂದ ರಾಜ್ಯದ ಎಲ್ಲ ಕಾರ್ಯನಿರತ ಪತ್ರಕರ್ತರ ಬಂಧುಗಳಿಗೆ ಈ ಎರಡು ದಿನಗಳ ಕ್ರೀಡಾಕೂಟದಲ್ಲಿ ತಾವೆಲ್ಲರೂ ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಕ್ರಿಕೆಟ್ ಪಂದ್ಯಾವಳಿಯ ಆಮಂತ್ರಣ ಪತ್ರಿಕೆ ಯನ್ನು ಬಿಡುಗಡೆ ಮಾಡಲಾಯಿತು. ಹಿರಿಯ ಪತ್ರಕರ್ತರಾದ ಧ್ಯಾನ್ ಪೂಣಚ್ಚ, ಗಿರೀಶ್ ಗರಗ, ಭಾರತಿ ರಾಜನ್, ವಿಶ್ವನಾಥ್ ಸುವರ್ಣ ಅವರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!