ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ತನಿಖೆಯಲ್ಲಿ ಮಹತ್ವದ ಸುಳಿವು ದೊರೆತಿದೆ. ಪ್ರಕರಣದ ಪ್ರಮುಖ ಆರೋಪಿ ರಿತೇಶ್ ಪಾಂಡೆ ನೀಡಿದ ಹೇಳಿಕೆಯಿಂದಾಗಿ ಹೊಸ ಟ್ವಿಸ್ಟ್ ಸಿಕ್ಕಿದೆ.
ದೆಹಲಿಯಲ್ಲೇ ಹಸ್ತಾಂತರ: ಆರೋಪಿಗಳಾದ ವಿನೋದ್ ಶರ್ಮಾ ಮತ್ತು ರಿತೇಶ್ ಪಾಂಡೆ ದೆಹಲಿಯ ಕರೋಲ್ ಬಾಗ್ನಲ್ಲಿ ಖರೀದಿಸಿದ್ದ ಮೊಬೈಲ್ ಫೋನ್ಗಳನ್ನು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ದೆಹಲಿಯ ಅಧಿಕೃತ ನಿವಾಸದಲ್ಲೇ ಪ್ರಜ್ವಲ್ ಪ್ರಸಾದ್ಗೆ ಹಸ್ತಾಂತರಿಸಲಾಗಿತ್ತು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಆರೋಪಿಗಳ ಬಂಧನ ಹಾಗೂ ತಲೆಮರೆಸುವಿಕೆ: ಅಕ್ಟೋಬರ್ 24ರಂದು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ರಿತೇಶ್ ಪಾಂಡೆಯನ್ನು ಬಂಧಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳಾದ ವಿನೋದ್ ಶರ್ಮಾ ಮತ್ತು ಪ್ರಜ್ವಲ್ ಪ್ರಸಾದ್ ಪ್ರಸ್ತುತ ತಲೆಮರೆಸಿಕೊಂಡಿದ್ದಾರೆ. ಅವರಿಬ್ಬರೂ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಸಂದೇಹಾಸ್ಪದ ಹಣಕಾಸು ವಹಿವಾಟು: ಸಾಮಾಜಿಕ ಜಾಲತಾಣಗಳಲ್ಲಿ ಕಂಟೆಂಟ್ ಕ್ರಿಯೇಟರ್ಸ್ಗಳಾಗಿರುವ ಈ ಆರೋಪಿಗಳ ನಡುವೆ ಹಲವು ಅನುಮಾನಾಸ್ಪದ ಹಣಕಾಸು ವಹಿವಾಟುಗಳು ನಡೆದಿರುವುದು ಪತ್ತೆಯಾಗಿದೆ.
ಈ ಕೃತ್ಯದ ಹಿಂದೆ ಯಾರ ಕೈವಾಡವಿದೆ ಮತ್ತು ಯಾರ ಸೂಚನೆಯ ಮೇರೆಗೆ ಈ ಸಂಚು ರೂಪಿಸಲಾಗಿದೆ ಎಂಬುದರ ಕುರಿತು ಸಿಸಿಬಿ ಪೊಲೀಸರು ಸಮಗ್ರ ತನಿಖೆ ಮುಂದುವರಿಸಿದ್ದಾರೆ.




