Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸ್ಟಿಂಗ್ ಆಪರೇಷನ್ 'ಕಿಂಗ್‌ಪಿನ್' ತಕ್ಷಣ ಬಂಧನಕ್ಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ
‘ಸ್ಟಿಂಗ್ ಆಪರೇಷನ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿ(ಎಸ್) ಕಾರ್ಯಕರ್ತರನ್ನು ಅನಗತ್ಯವಾಗಿ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಪ್ರಕರಣದ ಮುಖ್ಯ ರೂವಾರಿ (ಕಿಂಗ್‌ಪಿನ್)ಯನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಈ ಕುರಿತು ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಎದುರು ಧರಣಿ ನಡೆಸಿದ್ದ ಕುಮಾರಸ್ವಾಮಿ, ಶನಿವಾರ ರಾಜ್ಯ ಪೊಲೀಸ್ ಮಹಾ ನಿರ್ದೇಶಕರನ್ನು (ಡಿಜಿ-ಐಜಿಪಿ) ಭೇಟಿ ಮಾಡಿ ಮನವಿ ಸಲ್ಲಿಸಿದರು.

ಡಿಜಿ ಕಚೇರಿ ಮುತ್ತಿಗೆ ಯತ್ನ: ಹೈಡ್ರಾಮಾ
ಮುಖ್ಯ ಆರೋಪಿಯನ್ನು ಬಂಧಿಸಲು ಕುಮಾರಸ್ವಾಮಿ ನೀಡಿದ್ದ ಎರಡು ದಿನಗಳ ಡೆಡ್‌ಲೈನ್ ಶನಿವಾರಕ್ಕೆ ಅಂತ್ಯಗೊಂಡ ಹಿನ್ನೆಲೆಯಲ್ಲಿ
, ಅವರು ಮತ್ತೊಂದು ಸುತ್ತಿನ ಹೋರಾಟಕ್ಕೆ ಧುಮುಕಿದರು. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಡಿಜಿ ಕಚೇರಿಗೆ ಪಾದಯಾತ್ರೆ ಮೂಲಕ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದರು.

ಈ ವೇಳೆ ಫ್ರೀಡಂ ಪಾರ್ಕ್ ಬಳಿಯೇ ಪೊಲೀಸರು ಕುಮಾರಸ್ವಾಮಿ ಹಾಗೂ ಬೆಂಬಲಿತ ಕಾರ್ಯಕರ್ತರನ್ನು ತಡೆದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಜೆಡಿಎಸ್ ನಾಯಕರ ನಡುವೆ ತಳ್ಳಾಟ-ನೂಕಾಟ ನಡೆದು, ಸ್ಥಳದಲ್ಲಿ ಭಾರೀ ಹೈಡ್ರಾಮಾವೇ ಸೃಷ್ಟಿಯಾಯಿತು.

ಎಸ್‌ಐಟಿ ತನಿಖೆಗೆ ಒತ್ತಾಯ: ಬಳಿಕ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ ಅವರನ್ನು ಭೇಟಿಯಾದ ಕುಮಾರಸ್ವಾಮಿ, "ಸ್ಟಿಂಗ್ ಷಡ್ಯಂತ್ರ ನಡೆಸಿದ ಸೂತ್ರಧಾರಿಯನ್ನು ತಕ್ಷಣವೇ ಬಂಧಿಸಬೇಕು. ಅದನ್ನು ಬಿಟ್ಟು ಅನಾವಶ್ಯಕವಾಗಿ ಜೆಡಿಎಸ್ ಕಾರ್ಯಕರ್ತರನ್ನು ಬಂಧಿಸಲಾಗುತ್ತಿದೆ. ನೈಜ ಆರೋಪಿಯನ್ನು ಬಂಧಿಸದೆ ಸರ್ಕಾರ ಕಳ್ಳಾಟ ಆಡುತ್ತಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ, ಇಡೀ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ತಕ್ಷಣವೇ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಒತ್ತಾಯಿಸಿದರು.

'ಸಿದ್ದರಾಮಯ್ಯ ರಕ್ತ ಕುದಿಯುತ್ತಿಲ್ಲವೇ?': ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನೇ ವಿಡಿಯೋ ಮಾಡಿದ್ದೇನೆಂದು ಪ್ರಕರಣದ ಕಿಂಗ್‌ಪಿನ್ ಸ್ವತಃ ಹೇಳಿಕೊಂಡಿದ್ದಾನೆ. ಇದನ್ನೆಲ್ಲಾ ನೋಡಿದ ಮೇಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಕ್ತ ಕುದಿಯುತ್ತಿಲ್ಲವೇ? ಅವರು ಯಾಕೆ ಮೌನವಾಗಿದ್ದಾರೆ?" ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿದ ಕುಮಾರಸ್ವಾಮಿ, ಸ್ವತಃ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರಲು ಹುನ್ನಾರ ನಡೆಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಆಯುಧ ಪೂಜೆಕೆಪಿಸಿಸಿ ನಿಧಿಗೆ ಶಾಲೂ-ಹಾರದ ಬದಲು ದೇಣಿಗೆ ನೀಡಿ: ಬಿ.ಕೆ. ಹರಿಪ್ರಸಾದ್ ಕರೆ ಹಿರಿಯೂರು ತಾಲೂಕಿನಲ್ಲಿ ಮಳೆ ಅಬ್ಬರ: ಬಬ್ಬೂರು ಸಮೀಪದ ಜಮೀನಿನಲ್ಲಿ ನಿಂತ ಮಳೆ ನೀರುಸಮಾನತೆಗಾಗಿ ಸಹಭೋಜನ: ಅರಿವು ಭಾರತದಿಂದ ವಿಶಿಷ್ಟ ಚಿಂತನೆ–ರಾಹುಲ್ ಗಾಂಧಿ ವಿರುದ್ಧ ಗರ್ಭಿಣಿ ಪತ್ರಕರ್ತೆಯ ಗಂಭೀರ ಆರೋಪ: ಪೊಲೀಸ್ ಆಯುಕ್ತರಿಗೆ ಕ್ರಿಮಿನಲ್ ದೂರುಸರ್ಕಾರಿ ನೌಕರರು ಹಾಗೂ ಗುತ್ತಿಗೆ ಸಿಬ್ಬಂದಿಗೆ ರಾತ್ರಿ ಹಾಜರಾತಿ ಕಡ್ಡಾಯ: ರಾಜ್ಯ ಸರ್ಕಾರದ ಮಹತ್ವದ ಆದೇಶಮಹತ್ವದ ಆಡಳಿತಾತ್ಮಕ ಸುಧಾರಣೆ: ಸಕಾಲ ವ್ಯಾಪ್ತಿಗೆ ಎಲ್ಲಾ ಸರ್ಕಾರಿ ಸೇವೆಗಳು ಹಾಗೂ ಆರ್‌ಟಿಐ ಆನ್‌ಲೈನ್ ಕಡ್ಡಾಯನೈಸ್ ರಸ್ತೆಯಲ್ಲಿ ಕೆಮಿಕಲ್ ಟ್ಯಾಂಕರ್ ಸ್ಫೋಟ: ಮುಗಿಲು ಮುಟ್ಟಿದ ದಟ್ಟ ಕಪ್ಪು ಹೊಗೆ, ಟ್ರಾಫಿಕ್ ಜಾಮ್!1,000 ಗ್ರಾಮೀಣ ಬಸ್ ತಂಗುದಾಣಗಳ ನಿರ್ಮಾಣಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆಬಿ.ಎಸ್. ಯಡಿಯೂರಪ್ಪ ಸ್ಫೋಟಕ ಹೇಳಿಕೆ: ಸಿದ್ದರಾಮಯ್ಯ ವಿರುದ್ಧ ಪಿತೂರಿ ನಡೆಸಿ ಕೆಳಗಿಳಿಸಲಾಗಿದೆ