Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸ್ಟಿಂಗ್ ಆಪರೇಷನ್ ಸದ್ದು: ಕಾಂಗ್ರೆಸ್‌ಪಾಳಯದಲ್ಲಿ ತಲ್ಲಣ, ತನಿಖೆಗೆ ಒತ್ತಾಯ

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ರಾಜ್ಯ ರಾಜಕೀಯದಲ್ಲಿ
‘ಸ್ಟಿಂಗ್ ಆಪರೇಷನ್’ ಪ್ರಕರಣವು ಸದ್ಯ ಭಾರೀ ಸಂಚಲನ ಹಾಗೂ ಚರ್ಚೆಗೆ ಗ್ರಾಸವಾಗಿದೆ.

ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ ಸ್ಟಿಂಗ್ ಸುಳಿವು ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ತಂದಿದ್ದಾರೆ. ಈ ವಿವಾದವು ಆಡಳಿತರೂಢ ಕಾಂಗ್ರೆಸ್‌ಗೆ ತೀವ್ರ ಮುಜುಗರ ತಂದಿದ್ದು, ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದಿವೆ.   2023ರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್, ಮುಂಬರುವ 2028ರ ಚುನಾವಣೆಯ ಲೆಕ್ಕಾಚಾರದಲ್ಲಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಸರ್ಕಾರದ ವರ್ಚಸ್ಸು ಹೆಚ್ಚಿಸಲು ಯತ್ನಿಸುತ್ತಿದ್ದರೂ, ಈ ಅನಿರೀಕ್ಷಿತ ಸ್ಟಿಂಗ್ ಚರ್ಚೆಯು ಪಕ್ಷಕ್ಕೆ ದೊಡ್ಡ ಹಿನ್ನಡೆಯನ್ನುಂಟು ಮಾಡಿದೆ. ಅಷ್ಟೇ ಅಲ್ಲದೆ, ಇದು ಪಕ್ಷದೊಳಗೆ ತೀವ್ರ ಅಪನಂಬಿಕೆ ಮತ್ತು ಆತಂಕದ ವಾತಾವರಣಕ್ಕೆ ಕಾರಣವಾಗಿದೆ. 

 ಸ್ಟಿಂಗ್ ಸೃಷ್ಟಿಸಿದ ಆಂತರಿಕ ಆತಂಕ- ಕಾಂಗ್ರೆಸ್‌ನಲ್ಲಿ ಪ್ರಮುಖ ನಾಯಕರನ್ನೇ ಗುರಿಯಾಗಿಸಿಕೊಂಡು ನಡೆದಿರುವ ಸ್ಟಿಂಗ್ ಆಪರೇಷನ್‌ನ ಅಲೆ ಪಕ್ಷದಲ್ಲಿ ಆತಂಕ ಮೂಡಿಸಿದೆ. ಕೆಲ ಸಚಿವರು ಹಾಗೂ ಹಿರಿಯ ನಾಯಕರ ವಿರುದ್ಧವೂ ಸ್ಟಿಂಗ್ ನಡೆದಿರುವ ಆರೋಪಗಳು ಕೇಳಿಬಂದಿವೆ. ಯಾರನ್ನೆಲ್ಲಾ ಈ ಬಲೆಗೆ ಕೆಡವಲಾಗಿದೆ ಎಂಬ ಗುಸುಗುಸು ಪಕ್ಷದೊಳಗೆ ಜೋರಾಗಿದೆ.

ಬಹಿರಂಗವಾಗಿ ಹೇಳಿಕೆ ನೀಡಲು ಹಲವರು ಹಿಂಜರಿಯುತ್ತಿದ್ದರೂ, ಪಕ್ಷದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳ ಬಗ್ಗೆ ಅನೇಕ ಮುಖಂಡರು ತೀವ್ರ ಅಸಮಾಧಾನಗೊಂಡಿದ್ದಾರೆ. ಇದರ ಹಿಂದೆ ಯಾರ ಕೃತ್ಯ? ತನಿಖೆಗೆ ಆಗ್ರಹ   ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿ ಇಂತಹ ಕೃತ್ಯ ಎಸಗುತ್ತಿರುವುದು ಯಾರ ಕೈವಾಡ ಎಂಬ ಬಗ್ಗೆ ತೀವ್ರ ಚರ್ಚೆ ನಡೆದಿದೆ.

ಹಿರಿಯ ಶಾಸಕ ಕೆ.ಎನ್. ರಾಜಣ್ಣ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಬಹಿರಂಗವಾಗಿ ಆಗ್ರಹಿಸಿದ್ದಾರೆ.

ಇದರ ಹಿಂದೆ ಸಕ್ರಿಯವಾಗಿರುವ ಕಾಣದ ಕೈಗಳು ಮತ್ತು ತಂಡದ ಕುರಿತು ಆಡಳಿತ ಪಕ್ಷದ ಪಾಳಯದಲ್ಲೇ ಅನುಮಾನಗಳು ವ್ಯಕ್ತವಾಗಿವೆ. ವಿರೋಧ ಪಕ್ಷಗಳಿಂದ ತೀವ್ರ ವಾಗ್ದಾಳಿ ಹಾಗೂ ಮುಜುಗರ ಈ ಬೆಳವಣಿಗೆಯಿಂದ ಕಾಂಗ್ರೆಸ್‌ಗೆ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದಲ್ಲಿ ಮುಜುಗರ ಉಂಟಾಗಿದ್ದು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿ.ವೈ. ವಿಜಯೇಂದ್ರ ಸೇರಿದಂತೆ ಅನೇಕ ನಾಯಕರು ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ ಅವರು ನೇರವಾಗಿ ಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ, ಈ ಎಲ್ಲಾ ಬೆಳವಣಿಗೆಗಳು ಸರ್ಕಾರಕ್ಕೆ ದೊಡ್ಡ ಹಿನ್ನಡೆ ತಂದಿದೆ ಎಂದು ಟೀಕಿಸಿದ್ದಾರೆ.

ಹೈಕಮಾಂಡ್ ಎಂಟ್ರಿ ಕೊಡುತ್ತಾ?-
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸ್ಫೋಟಗೊಳ್ಳುತ್ತಿರುವ ಈ ಸ್ಟಿಂಗ್ ಪ್ರಹಸನವು ಕಾಂಗ್ರೆಸ್ ಸಂಘಟನೆಗೆ ಗಂಭೀರ ಹೊಡೆತ ನೀಡುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಾವಾಗ ಮಧ್ಯಪ್ರವೇಶ ಮಾಡಲಿದೆ ಮತ್ತು ಮುಂದಿನ ದಿನಗಳಲ್ಲಿ ಈ ವಿವಾದ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.  

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಆಯುಧ ಪೂಜೆಕೆಪಿಸಿಸಿ ನಿಧಿಗೆ ಶಾಲೂ-ಹಾರದ ಬದಲು ದೇಣಿಗೆ ನೀಡಿ: ಬಿ.ಕೆ. ಹರಿಪ್ರಸಾದ್ ಕರೆ ಹಿರಿಯೂರು ತಾಲೂಕಿನಲ್ಲಿ ಮಳೆ ಅಬ್ಬರ: ಬಬ್ಬೂರು ಸಮೀಪದ ಜಮೀನಿನಲ್ಲಿ ನಿಂತ ಮಳೆ ನೀರುಸಮಾನತೆಗಾಗಿ ಸಹಭೋಜನ: ಅರಿವು ಭಾರತದಿಂದ ವಿಶಿಷ್ಟ ಚಿಂತನೆ–ರಾಹುಲ್ ಗಾಂಧಿ ವಿರುದ್ಧ ಗರ್ಭಿಣಿ ಪತ್ರಕರ್ತೆಯ ಗಂಭೀರ ಆರೋಪ: ಪೊಲೀಸ್ ಆಯುಕ್ತರಿಗೆ ಕ್ರಿಮಿನಲ್ ದೂರುಸರ್ಕಾರಿ ನೌಕರರು ಹಾಗೂ ಗುತ್ತಿಗೆ ಸಿಬ್ಬಂದಿಗೆ ರಾತ್ರಿ ಹಾಜರಾತಿ ಕಡ್ಡಾಯ: ರಾಜ್ಯ ಸರ್ಕಾರದ ಮಹತ್ವದ ಆದೇಶಮಹತ್ವದ ಆಡಳಿತಾತ್ಮಕ ಸುಧಾರಣೆ: ಸಕಾಲ ವ್ಯಾಪ್ತಿಗೆ ಎಲ್ಲಾ ಸರ್ಕಾರಿ ಸೇವೆಗಳು ಹಾಗೂ ಆರ್‌ಟಿಐ ಆನ್‌ಲೈನ್ ಕಡ್ಡಾಯನೈಸ್ ರಸ್ತೆಯಲ್ಲಿ ಕೆಮಿಕಲ್ ಟ್ಯಾಂಕರ್ ಸ್ಫೋಟ: ಮುಗಿಲು ಮುಟ್ಟಿದ ದಟ್ಟ ಕಪ್ಪು ಹೊಗೆ, ಟ್ರಾಫಿಕ್ ಜಾಮ್!1,000 ಗ್ರಾಮೀಣ ಬಸ್ ತಂಗುದಾಣಗಳ ನಿರ್ಮಾಣಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ