Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಎಸ್ಐಆರ್ ಪ್ರಕ್ರಿಯೆಯಲ್ಲಿ ಬಿಎಲ್ಓಗಳು ತಪ್ಪು ಮಾಡಿದರೆ ಕಠಿಣ ಕ್ರಮ: ಕೆ. ಎನ್. ಅನುರಾಧ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (
SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ  ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳುವುದರ ಜೊತೆಗೆ, ಅಗತ್ಯವಿದ್ದಲ್ಲಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ ಎನ್ ಅನುರಾಧ ಅವರು ಎಚ್ಚರಿಕೆ ನೀಡಿದ್ದಾರೆ.

SIR ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಸಿದ್ಧತೆ ಕುರಿತು ಜಿಲ್ಲಾ ಚುನಾವಣಾಧಿಕಾರಿ ರವರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಾಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳು  ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸೆಪ್ಟೆಂಬರ್ 28 ರಂದು ನಡೆದ ಸಭೆಯಲ್ಲಿ ಮಾತನಾಡಿ,

Advertisement

ಸಾರ್ವಜನಿಕರಿಗೆ SIR ಕುರಿತು ಅಧಿಕೃತ ಹಾಗೂ ಪರಿಶೀಲಿತ ಮಾಹಿತಿಯನ್ನಷ್ಟೇ ನೀಡಬೇಕು. 18 ವರ್ಷ ಮೇಲ್ಪಟ್ಟ ಭಾರತೀಯ ನಾಗರಿಕರು ಹಾಗೂ ನಿಗದಿತ ಅರ್ಹತೆ ಹೊಂದಿರುವವರು ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅಗತ್ಯ ಮಾರ್ಗದರ್ಶನ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಕ್ರಿಯೆ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಲಾಯಿತು. ಸೆಪ್ಟೆಂಬರ್‌ 29 ರಂದು ಅಧಿಸೂಚನೆ ಪ್ರಕಟವಾಗಿದ್ದು, ಅಕ್ಟೋಬರ್‌ 06 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್‌ 7ರಂದು ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್‌.9ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಅಕ್ಟೋಬರ್‌.23ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅ.27ರಂದು ಮತ ಎಣಿಕೆ ನಡೆಯಲಿದೆ. ಅ.31ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಅರ್ಜಿ ಸ್ವೀಕೃತಿ, ದಾಖಲೆಗಳು ಹಾಗೂ ರಿಜಿಸ್ಟರ್‌ಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಚುನಾವಣಾ ಆಯೋಗದ ಮಾರ್ಗಸೂಚನೆಯಂತೆ ಅರ್ಜಿಗಳನ್ನು ನಿಗಧಿತ ಅವಧಿಯಲ್ಲಿ ವಿಲೇವಾರಿ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯಾದ ಡಾ. ಕೆ. ಎನ್ ಅನುರಾಧ ಅವರು ನಿರ್ದೇಶನ ನೀಡಿದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಎಲ್‌ಸಿ ಚುನಾವಣೆಯಲ್ಲಿ ಎ. ಪಿ. ರಂಗನಾಥ್ ಗೆಲುವಿಗೆ ಮೈತ್ರಿ ಪಕ್ಷಗಳು ಶ್ರಮಿಸಬೇಕಿದೆ:ನಿಖಿಲ್ ಕುಮಾರಸ್ವಾಮಿಎಸ್ಐಆರ್ ಪ್ರಕ್ರಿಯೆಯಲ್ಲಿ ಬಿಎಲ್ಓಗಳು ತಪ್ಪು ಮಾಡಿದರೆ ಕಠಿಣ ಕ್ರಮ: ಕೆ. ಎನ್. ಅನುರಾಧಸಾಹಿತಿ ಮಾ. ಚಿ. ಕೃಷ್ಣರವರಿಗೆ ನುಡಿನಮನ​ಅಕ್ಟೋಬರ್ 3 ರಂದು ಹಿರಿಯೂರಿನಲ್ಲಿ ಜೆಡಿಎಸ್‌ನಿಂದ 'ರೈತ ಸ್ವಾಭಿಮಾನ ಯಾತ್ರೆ' ನಿಖಿಲ್ ಭಾಗಿಖೋಟಾನೋಟು ಜಾಲ ಭೇದಿಸಿದ ಪೊಲೀಸರು: 21 ಲಕ್ಷ ರೂ. ನಕಲಿ ನೋಟುಗಳು ಜಪ್ತಿ, 7 ಜನರ ಬಂಧನಮತದಾರರ ಪಟ್ಟಿಯಿಂದ 50-60 ಲಕ್ಷ ಹೆಸರು ಕೈಬಿಡಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ: ಸಿಎಂ ಶಿವಕುಮಾರ್ಸಾಲು ಸಾಲು ರಜೆ: ಬಿಎಂಟಿಸಿಯಿಂದ 150 ವಿಶೇಷ ಬಸ್‌ಗಳ ಸಂಚಾರ ಎಸ್‌ಐಆರ್ ವಿರೋಧಿ ಒಕ್ಕೂಟದಿಂದ ವರದಿ ಬಿಡುಗಡೆ: ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ-ವೇಣುಗೋಪಾಲ್ ಮಹತ್ವದ ಸಭೆಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ದೊಡ್ಡ ವಂಚನೆ: ಸಮಗ್ರ ತನಿಖೆಗೆ ಆಗ್ರಹ