Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ದಲಿತ ಮುಖಂಡನ ಕೊಲೆಗೆ ತೀವ್ರ ಖಂಡನೆ: ತಪ್ಪಿತಸ್ಥರ ಬಂಧನಕ್ಕೆ ಕೆ.ಪಿ.ಶ್ರೀನಿವಾಸ್ ಒತ್ತಾಯ

ಚಂದ್ರವಳ್ಳಿ ನ್ಯೂಸ್, ​ಹಿರಿಯೂರು:
ರಾಯಚೂರು ಜಿಲ್ಲೆಯ ದಲಿತ ಮುಖಂಡ ಭೂಮಾನಂದ ಅವರ ಕಗ್ಗೊಲೆಯನ್ನು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ತೀವ್ರವಾಗಿ ಖಂಡಿಸಿದೆ. ಹಗಲು ಹೊತ್ತಿನಲ್ಲೇ ಇಂತಹ ಭೀಕರ ಕೃತ್ಯ ನಡೆದಿರುವುದು ಆತಂಕಕಾರಿಯಾಗಿದ್ದು, ರಾಜ್ಯ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಳ್ಳಬೇಕೆಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಜಿಲ್ಲಾ ಸಂಯೋಜಕ ಕೆ.ಪಿ.ಶ್ರೀನಿವಾಸ್ ಆಗ್ರಹಿಸಿದ್ದಾರೆ.

​ತಾನು ದಲಿತರ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ದಲಿತರಿಗೆ ಸೂಕ್ತ ರಕ್ಷಣೆ ಮತ್ತು ನ್ಯಾಯ ಒದಗಿಸುವ ಹೊಣೆಗಾರಿಕೆ ಇದೆ. ಈ ಭೀಕರ ಕೃತ್ಯವೆಸಗಿದ ಅಪರಾಧಿಗಳನ್ನು ಹಾಗೂ ಅವರ ಹಿಂದಿರುವ ದಲಿತ ವಿರೋಧಿ ಶಕ್ತಿಗಳನ್ನು ಪತ್ತೆ ಹಚ್ಚಿ ಕೂಡಲೇ ಬಂಧಿಸಬೇಕು ಎಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.

​​ಸುರಕ್ಷತೆ ಮತ್ತು ರಕ್ಷಣೆ: ರಾಜ್ಯದಲ್ಲಿ ದಲಿತ ಮುಖಂಡರಿಗೆ ಇರುವ ಪ್ರಾಣಪಾಯವನ್ನು ಸರಕಾರ ಗುರುತಿಸಿ, ಅವರಿಗೆ ತಕ್ಷಣವೇ ಸೂಕ್ತ ರಕ್ಷಣೆ ಒದಗಿಸಲು ಮುಂದಾಗಬೇಕು.

​ಸಾಕಷ್ಟು ಪರಿಹಾರ: ಮೃತರ ಕುಟುಂಬಕ್ಕೆ ಸರಕಾರ 50 ಲಕ್ಷ ರೂಪಾಯಿ ನಗದು ಪರಿಹಾರ, 10 ಎಕರೆ ಜಮೀನು ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ಸರಕಾರಿ ಉದ್ಯೋಗ ನೀಡಬೇಕು.

​ದಲಿತ ಸಮುದಾಯಕ್ಕೆ ರಕ್ಷಣೆ ನೀಡುವಲ್ಲಿ ಮತ್ತು ಮೃತರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಲ್ಲಿ ಸರಕಾರ ವಿಫಲವಾಗಬಾರದು ಎಂದು ಕೆ.ಪಿ.ಶ್ರೀನಿವಾಸ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!