Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಬಿಜೆಪಿ ಪಕ್ಷದ ಕೇಂದ್ರ ಕಚೇರಿಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಸಿ, ಪಕ್ಷದ ಮುಂದಿನ ಕಾರ್ಯತಂತ್ರಗಳು ಹಾಗೂ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಗಂಭೀರ ಚರ್ಚೆ ನಡೆಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.


ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟದಲ್ಲಿ ಇನ್ನೂ ಹೆಚ್ಚಿನ  ಹುಮ್ಮಸ್ಸಿನಿಂದ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರು ಒಂದಾಗಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಮುಂದಿನ ರೂಪುರೇಷೆಗಳ ಜೊತೆಗೆ ಜನರ ನಡುವೆ ಸಕ್ರಿಯರಾಗಿದ್ದು, ಜನರ ಆಶೋತ್ತರಗಳಿಗೆ ಧ್ವನಿಯಾಗಲು, ಪ್ರತಿಯೊಂದು ಮನೆ-ಮನಗಳನ್ನು ತಲುಪುವ ಕಾರ್ಯಯೋಜನೆಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಾಯಿತು ಎಂದು ವಿಜಯೇಂದ್ರ ತಿಳಿಸಿದರು.

ಸಭೆಯಲ್ಲಿ ಹಿರಿಯ ನಾಯಕರು, ಪಕ್ಷದ ಸಂಸದೀಯ ಮಂಡಳಿ ಸದಸ್ಯರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ್, ನಂದೀಶ್ ರೆಡ್ಡಿ, ಪ್ರೀತಂಗೌಡ, ಪಕ್ಷದ ಕೋಶಾಧ್ಯಕ್ಷ ಸುಬ್ಬು ನರಸಿಂಹ, ಕೆ.ಎಸ್ ನವೀನ್ ಸಭೆಯಲ್ಲಿ ಪಾಲ್ಗೊಂಡಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST