Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಪರೀಕ್ಷಾ ಸಮಯದಲ್ಲಿ ಏಕಾಗ್ರತೆ ವೃದ್ಧಿಗೆ “ವಿದ್ಯಾರ್ಥಿ ಚೇತನ” ಸಹಕಾರಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ವೃದ್ಧಿಸಲು ಆಯುಷ್ ಇಲಾಖೆಯ
“ವಿದ್ಯಾರ್ಥಿ ಚೇತನ” ಕಾರ್ಯಕ್ರಮವು ಅತ್ಯಂತ ಸಹಕಾರಿಯಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಚಂದ್ರಕಾಂತ್ ಎಸ್. ನಾಗಸಮುದ್ರ ಅವರು ತಿಳಿಸಿದರು.

ಚಿತ್ರದುರ್ಗ ತಾಲ್ಲೂಕಿನ ಬಹದ್ದೂರ್ ಘಟ್ಟದ ಮೊರಾರ್ಜಿ ವಸತಿ ಶಾಲೆಯಲ್ಲಿ ಸೋಮವಾರ ಎಸ್‍ಸಿಎಸ್‍ಪಿ ಯೋಜನೆಯಡಿ ಜಿಲ್ಲಾ ಆಯುಷ್ ಇಲಾಖೆ ಹಾಗೂ ಕೋಗುಂಡೆ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ವಿದ್ಯಾರ್ಥಿ ಚೇತನ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ಚೇತನವು ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ವಿದ್ಯಾರ್ಥಿಗಳ ಮಾನಸಿಕ ಮತ್ತು ಶಾರೀರಿಕ ಸದೃಢತೆಗಾಗಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಪರೀಕ್ಷಾ ಸಂದರ್ಭದಲ್ಲಿ ಬೇಕಾದ ಏಕಾಗ್ರತೆಗಾಗಿ ಧ್ಯಾನ ಮತ್ತು ಪ್ರಾಣಾಯಾಮ ಇಲ್ಲಿ ಹೇಳಿಕೊಡಲಾಗುವುದು. ಅಲ್ಲದೆ ರೋಗನಿರೋಧಕ ಶಕ್ತಿ ಹೆಚ್ಚಿಸಲು ಚ್ಯವನಪ್ರಾಶದಂತಹ ಔಷಧಿ ವಿತರಿಸಲಾಗುವುದು. ಈ ಕಾರ್ಯಕ್ರಮವು ಸತತ ಮೂರು ತಿಂಗಳ ಕಾಲ ಈ ವಸತಿ ಶಾಲೆಯಲ್ಲಿ ನಡೆಯಲಿದ್ದು, ವೈದ್ಯಾಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಆರೋಗ್ಯ ತಪಾಸಣೆ ಹಾಗೂ ಸಲಹೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ವಸತಿ ಶಾಲೆ ಪ್ರಾಂಶುಪಾಲ ಅಜ್ಜಯ್ಯ ಮಾತನಾಡಿ, ಭಾರತೀಯ ಮೂಲ ವೈದ್ಯ ಪದ್ಧತಿಯಾದ ಆಯುರ್ವೇದವನ್ನು ಉಳಿಸಿ ಬೆಳೆಸಬೇಕಾದ್ದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.

ಕೋಗುಂಡೆ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ಜಿ.ಸೋಮಶೇಖರ್ ರಾಥೋಡ್ ಅವರು ಪ್ರಾಸ್ತಾವಿಕ ನುಡಿಗಳ ಮೂಲಕ ಯೋಜನೆಯ ಧ್ಯೇಯೋದ್ದೇಶಗಳನ್ನು ವಿವರಿಸಿದರು. ಕೊಳಾಳ್ ವೈದ್ಯಾಧಿಕಾರಿ ಡಾ. ಯಶವಂತ್ ಅವರು ವಿದ್ಯಾರ್ಥಿಗಳಿಗೆ ಆಯುರ್ವೇದದ ಮಹತ್ವದ ಬಗ್ಗೆ ತಿಳಿಹೇಳಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ನಾಲ್ಕನೇ ಸರಣಿಯ ಅಂಗವಾಗಿ ವಿದ್ಯಾರ್ಥಿಗಳಿಗೆ ವ್ಯಾಧಿಕ್ಷಮತ್ವ ಹೆಚ್ಚಿಸುವ ಚ್ಯವನಪ್ರಾಶ ಹಾಗೂ ವೈಯಕ್ತಿಕ ಸ್ವಚ್ಛತೆಗಾಗಿ ಕೇಶ ತೈಲವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಅಂಜಿನಪ್ಪ ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಪ್ರಾಮಾಣಿಕತೆಗೆ ಸ್ಟಿಂಗ್ ಆಪರೇಶನ್ ಭಯವೇಕೆ?:ಮನಸ್ಸಿನ ಆರೋಗ್ಯಕ್ಕೆ ಅರಿವೇ ಮೊದಲ ಚಿಕಿತ್ಸೆ:ಮೈಸೂರು ದಸರಾ ಸಂಸ್ಕೃತಿ, ಪರಂಪರೆ, ವೈಭವ  ದೃಷ್ಟಿಕೋನ ಚಿಂತನೆ ಕಾರ್ಯಕ್ರಮ ಆಯೋಜನೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನಚಿತ್ರದುರ್ಗ ಜಿಲ್ಲೆಯ ರೈತರಿಗೆ ವಿಮಾ ಮೊತ್ತ ಶೀಘ್ರ ಬಿಡುಗಡೆಗೆ ಕೃಷಿ ಆಯುಕ್ತರಿಗೆ ಮನವಿ ಸಲ್ಲಿಸಿದ ಶಿವಲಿಂಗಪ್ಪಎನ್ ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಆಗುವುದು ನಿಶ್ಚಿತ-ಸಂಸದ ಕಾರಜೋಳದೇಶದ ಯುವಕರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ ಪ್ರಧಾನಿಯಾಗಲು ಹುಚ್ಚರಂತೆ ಓಡಾಡುತ್ತಿದ್ದಾರೆ: ಸಂಸದ ಗೋವಿಂದ್ ಕಾರಜೋಳ ವಾಗ್ದಾಳಿಅನುಭವ ಮತ್ತು ಜ್ಞಾನ ಎರಡೂ ನನ್ನಲ್ಲಿಲ್ಲ- ಸಂಸದ ಗೋವಿಂದ್ ಕಾರಜೋಳ