Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಪತ್ತು ಎದುರಿಸಲು ವಿದ್ಯಾರ್ಥಿಗಳು ಸಿದ್ದರಾಗಿರಬೇಕು

Advertisement
Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಪಡೆದು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದು ಬೆಸೆಂಟ್ ಪಾರ್ಕ್ ಇನ್‌ಚಾರ್ಜ್ ಎಂ. ಎ. ಚಲ್ಲಯ್ಯ ಶ್ಲಾಘಿಸಿದರು.


ಭೂಕಂಪನ, ಭೂಕುಸಿತ, ಪ್ರವಾಹ, ಸುನಾಮಿ, ಬರಗಾಲ, ಅಗ್ನಿ ಆಕಸ್ಮಿಕ ಸಂದರ್ಭದಲ್ಲಿ ಪ್ರಾಥಮಿಕ ಮಟ್ಟದ ಶೋಧನೆ ಮತ್ತು ರಕ್ಷಣೆ, ಕಾಡ್ಗಿಚ್ಚು ನಂದಿಸುವಿಕೆ, ಸಮುದಾಯ ಆಧಾರಿತ ಆರೋಗ್ಯ ಪ್ರಥಮ ಚಿಕಿತ್ಸೆ ಮತ್ತು ಹೃದಯಾಘಾತ ಸಂಭವಿಸಿದಾಗ ಸಿಪಿಆರ್ ಹೇಗೆ ಮಾಡಬೇಕು ಎನ್ನುವುದರ ಬಗ್ಗೆ ತಿಳಿಸಿದರು.

ವಿಪತ್ತು ಯಾವ ಸಂದರ್ಭದಲ್ಲಿ ಹೇಗೆ ಸಂಭವಿಸುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಅಕಸ್ಮಾತ್ ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ಹೇಗೆ ಧೈರ್ಯದಿಂದ ನಿರ್ವಹಿಸಬೇಕು ಎಂಬುದನ್ನು ಎಲ್ಲ ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು ಎಂದು ಕರೆ ನೀಡಿದರು.

ವಿಪತ್ತು ಸಂಭವಿಸದರೆ ಸಾರ್ವಜನಿಕರನ್ನು ಹೇಗೆ ರಕ್ಷಣೆ ಮಾಡಬೇಕು ಸುರಕ್ಷಿತವಾದ ಸ್ಥಳಕ್ಕೆ ಅವರನ್ನು ಹೇಗೆ ಸಾಗಿಸಬೇಕು ಎಂಬುದರ ಕುರಿತು ವಿಪತ್ತು ಸನ್ನದ್ಧತೆ ತರಬೇತಿ ನೀಡಲಾಗಿದೆ ಎಂದರು.

ವಿಪತ್ತು ನಿರ್ವಹಣೆ ಕುರಿತು ಒಂದು ವಾರ ನಡೆದ ತರಬೇತಿ‌ಯಲ್ಲಿ ಕಲಬುರಗಿ, ಯಾದಗಿರಿ, ರಾಯಚೂರು ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತರಬೇತಿಯಲ್ಲಿ ಉತ್ತಮ ನಡತೆಯಿಂದ ನಡೆದುಕೊಂಡ ಹಾಗೂ ವಿವಿಧ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು.

ಈ ವೇಳೆ ಮೈ ಭರತ್ ರಾಜ್ಯ ಸಂಚಾಲಕ ಅಶೋಕ್ ಕುಮಾರ್ ದಾಸ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯಕ್ರಮ ಸಹಾಯಕಿ ಲತಾ ಬಿ ವಿ, ಬೆಸೆಂಟ್ ಪಾರ್ಕ್ ಇನ್‌ಚಾರ್ಜ್ ಎಂ ಎ ಚಲ್ಲಯ್ಯ, ನನ್ನ ಭಾರತ ಸಂಯೋಜಕಿ ಜೆಮೈಮಾ ಜೇಸು ದಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ!ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಲೋಕಭವನಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್: ಸೋನಿಯಾ ಗಾಂಧಿ ಶುಭ ಹಾರೈಕೆ!ಡಿ.ಕೆ. ಶಿವಕುಮಾರ್ ಸಂಪುಟಕ್ಕೆ ಮುಹೂರ್ತ: ಡಿಸಿಎಂ ಆಗಿ ಜಿ. ಪರಮೇಶ್ವರ್ ಪದಗ್ರಹಣ, ರಾಜ್ಯಾದ್ಯಂತ ನೇರ ಪ್ರಸಾರ!ರಾಜ್ಯದ ಇತಿಹಾಸದಲ್ಲೇ ಪ್ರಥಮ: ಸ್ವಾಮೀಜಿ, ಫಾದರ್, ಮೌಲ್ವಿಗಳ ಸಮ್ಮುಖದಲ್ಲಿ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪದಗ್ರಹಣ!ಡಿ.ಕೆ.ಶಿವಕುಮಾರ್ ಸಿಎಂ ಬೆನ್ನಲ್ಲೇ ಕೆಪಿಸಿಸಿಗೆ ನೂತನ ಸಾರಥಿ: ಬಿ.ಕೆ. ಹರಿಪ್ರಸಾದ್ ಹೆಗಲಿಗೆ ಕೈ ಪಟ್ಟ?ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ದುರಂತ: 21 ಮಂದಿ ಸಜೀವ ದಹನ!ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ: ಇತಿಹಾಸ ಬರೆದ ಅದ್ಧೂರಿ ಸಮಾರಂಭ!ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ವಿ. ಸೋಮಣ್ಣಜಲ್ ಜೀವನ್ ಮಿಷನ್ 2.0: ನಾಗಾಲ್ಯಾಂಡ್ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿಜೆಡಿಎಸ್ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರ ಯಶಸ್ವಿ: ಪ್ರಮುಖ ನಾಯಕರಿಗೆ ಅಭಿನಂದನೆ