Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯಾಯಾಧೀಶರುಗಳಲ್ಲಿ ಸಂವೇದನಾಶೀಲತೆ ಬೆಳೆಸುವ ಅಗತ್ಯವಿದೆ-ಸುಪ್ರೀಂ

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಲೈಂಗಿಕ ಅಪರಾಧ ಮತ್ತು ದುರ್ಬಲ ಪ್ರಕರಣಗಳಲ್ಲಿ ನ್ಯಾಯಾಧೀಶರುಗಳಲ್ಲಿ ಸಂವೇದನಾಶೀಲತೆ ಬೆಳೆಸಲು ಭೋಪಾಲ್‌ನ ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿ ಕರಡು ಮಾರ್ಗದರ್ಶಿ ವರದಿಯೊಂದನ್ನು ರೂಪಿಸಲು ತಜ್ಞರ ಸಮಿತಿ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿ ಆದೇಶಿಸಿದೆ.

ಸಿಜೆಐ ಸೂರ್ಯಕಾಂತ್​ ಅವರನ್ನೊಳಗೊಂಡ ಪೀಠವು, ಸ್ತನಗಳನ್ನು ಹಿಡಿಯುವುದು, ಪೈಜಾಮದ ದಾರ ಎಳೆಯುವುದು ಅತ್ಯಾಚಾರದ ಪ್ರಯತ್ನವಲ್ಲ. ಬದಲಿಗೆ, ವಿವಸ್ತ್ರಗೊಳಿಸುವ ಉದ್ದೇಶದಿಂದ ಮಾಡಿದ ಲೈಂಗಿಕ ದೌರ್ಜನ್ಯ ಎಂದು ತೀರ್ಪು ನೀಡಿದ ಅಲಹಾಬಾದ್ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪನ್ನು ರದ್ದುಗೊಳಿಸಿ ಇದೇ ವೇಳೆ, ಹೈಕೋರ್ಟ್‌ನ ಈ ತೀರ್ಪನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಸುಪ್ರೀಂ ಪೀಠ ತಿಳಿಸಿತು.

ನ್ಯಾಯಾಂಗ ವಿಧಾನದಲ್ಲಿ ಸೂಕ್ಷ್ಮತೆ ಬೆಳೆಸುವ ಅವಶ್ಯಕತೆ ಇದೆ. ನ್ಯಾಯಾಂಗದ ಸದಸ್ಯರ ವಿಧಾನ ಮತ್ತು ಅದರ ಜೊತೆಗಿನ ನ್ಯಾಯಾಲಯದ ಕಾರ್ಯ ವಿಧಾನಗಳಲ್ಲಿ ಅಂತರ್ಗತ ಸೂಕ್ಷ್ಮತೆ ಮತ್ತು ವಿವೇಚನೆ ಬೆಳೆಸಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು.

ಲೈಂಗಿಕ ಅಪರಾಧಗಳು ಮತ್ತು ಇತರ ದುರ್ಬಲ ಪ್ರಕರಣಗಳ ಸಂದರ್ಭಗಳಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಾಂಗ ಪ್ರಕ್ರಿಯೆಗಳಲ್ಲಿ ಸೂಕ್ಷ್ಮತೆ ಮತ್ತು ಸಹಾನುಭೂತಿಯನ್ನು ಬೆಳೆಸಲು ಮಾರ್ಗಸೂಚಿಗಳ ಸಮಗ್ರ ವರದಿ ಸಿದ್ಧಪಡಿಸುವಂತೆ ಮಧ್ಯಪ್ರದೇಶದ ಭೋಪಾಲ್‌ನ ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿಗೆ ತಿಳಿಸಿದೆ.


ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್.ವಿ.ಅಂಜಾರಿಯಾ ಅವರನ್ನೊಳಗೊಂಡ ಪೀಠ ಫೆಬ್ರವರಿ 10ರಂದು ಹೊರಡಿಸಿದ ಆದೇಶದಲ್ಲಿ, ನ್ಯಾಯಾಧೀಶರಲ್ಲಿ ಸಹಜ ಸಂವೇದನಾಶೀಲತೆ ಮತ್ತು ಸೂಕ್ಷ್ಮ ವಿವೇಚನೆಯನ್ನು ಬೆಳೆಸಲು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದಿತು.


ಈ ಕುರಿತ ಮಾರ್ಗಸೂಚಿಗಳು ಸರಳ ಭಾಷೆಯಲ್ಲಿ ಸಾಮಾನ್ಯರಿಗೆ ಅರ್ಥವಾಗುವಂತೆ ಇರಬೇಕು. ಜಟಿಲ ಮತ್ತು ವಿದೇಶಿ ಪದಪ್ರಯೋಗಗಳಿಂದ ತುಂಬಿರಬಾರದು ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST