Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಸುರೇಶ್ ಋಗ್ವೇದಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ :
ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ನೀಡುವ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷರು
, ಸಂಸ್ಕೃತಿ ಚಿಂತಕ ಸುರೇಶ್ ಎನ್ ಋಗ್ವೇದಿ ಅವರಿಗೆ ನೀಡಲಾಗಿದೆ.

 ಋಗ್ವೇದಿಯವರು ಕಳೆದ ಮೂರು ದಶಕಗಳ ನಿರಂತರ ಸೇವೆಯನ್ನು ಪರಿಗಣಿಸಿ ಸಂಸ್ಕೃತಿ ಮತ್ತು ಸಾಹಿತ್ಯ ಸಂಘಟನೆಯ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಎಚ್ ಎಲ್ ಎನ್ ರಾವ್ ತಿಳಿಸಿದ್ದಾರೆ.

 ಕಳೆದ 51 ವರ್ಷಗಳಿಂದ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ನೀಡಲ್ಪಡುತ್ತಿರುವ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಈ ಬಾರಿ ಋಗ್ವೇದಿಯವರಿಗೆ ಸಂದಿದೆ.

 3000ಕ್ಕೂ ಹೆಚ್ಚು ವಿವಿಧ ರಾಷ್ಟ್ರೀಯ ಮತ್ತು ರಾಜ್ಯದ ವಿವಿಧ ಕಾರ್ಯಕ್ರಮಗಳು, ರಾಷ್ಟ್ರೀಯತೆ, ಆಧ್ಯಾತ್ಮಿಕ, ಸಂಸ್ಕೃತಿ, ಪರಂಪರೆಯ ಕಾರ್ಯಕ್ರಮಗಳನ್ನು ಕಳೆದ 34 ವರ್ಷಗಳಿಂದ ನಿರಂತರವಾಗಿ ನೆರವೇರಿಸಿಕೊಂಡು ಬರುತ್ತಿರುವ ಋಗ್ವೇದಿ ಉಪನ್ಯಾಸಕರಾಗಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಜೊತೆಗೆ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷ, ಪದಾಧಿಕಾರಿಗಳಾಗಿ, ಕಾರ್ಯಕರ್ತರಾಗಿ ಸೇವೆಯನ್ನು ಸಲ್ಲಿಸುವ ಮೂಲಕ ಸಾಂಸ್ಕೃತಿಕ ಚಿಂತಕರಾಗಿ ಗಡಿನಾಡಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಜೈ ಹಿಂದ್ ಪ್ರತಿಷ್ಠಾನ ಋಗ್ವೇದಿ ಯೂತ್ ಕ್ಲಬ್, ಜಿಲ್ಲಾ ಗಮಕ ಕಲಾ ಪರಿಷತ್ತು, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು, ಜಿಲ್ಲಾ ಯುವ ಸಂಘಟನೆಗಳ ಒಕ್ಕೂಟ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಋಗ್ವೇದಿಯವರಿಗೆ ಆರ್ಯಭಟ ಪ್ರಶಸ್ತಿ ನೀಡಿರುವ ಸುಸಂದರ್ಭದಲ್ಲಿ ಅನೇಕ ಸಂಘ ಸಂಸ್ಥೆಗಳು ಅಭಿನಂದನೆ ಸಲ್ಲಿಸಿವೆ.

 ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 23ರ ಶನಿವಾರ ಸಂಜೆ 4 ಗಂಟೆಗೆ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ರಾಜೇಂದ್ರ ಬಾದಾಮಿಕರ್ ಉದ್ಘಾಟನೆ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದೂರದರ್ಶನದ ವಿಶ್ರಾಂತ ಹೆಚ್ಚುವರಿ ಮಹಾನ್ ನಿರ್ದೇಶಕರಾದ ನಾಡೋಜ ಡಾ. ಮಹೇಶ್ ಜೋಶಿ, ಅಂತರಾಷ್ಟ್ರೀಯ ಖ್ಯಾತಿಯ ವಿದ್ವಾಂಸರಾದ ವಿದ್ಯಾ ವಾಚಸ್ಪತಿ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಡಾ. ಎಚ್ ಎಲ್ ರಾವ್ ವಹಿಸಲಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸ ವಿಂಗಡನೆ ಕುರಿತು ಜಾಗೃತಿ ಮೂಡಿಸುವ ವಿಶೇಷ ಅಭಿಯಾನಕ್ಕೆ ಚಾಲನೆಇದೇ 24ರಂದು ಮಾಸಿಕ ಗಮಕ ಕಾರ್ಯಕ್ರಮಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಸುರೇಶ್ ಋಗ್ವೇದಿಸಹಕಾರ ಸಂಘದ ಆಡಳಿತ ಮಂಡಳಿ ವಜಾಕ್ಕೆ ಆಗ್ರಹಿಸಿ ಉಪನಿಬಂಧಕರಿಗೆ ದೂರುದಾರರಿಂದ ಮನವಿ"ರಾಹುಲ್ ಗಾಂಧಿ ಭಾರತ ವಿರೋಧಿ": ಕಾಂಗ್ರೆಸ್ ವಿರುದ್ಧ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿಸೈದ್ಧಾಂತಿಕ ಬದ್ಧತೆಯೊಂದಿಗೆ ಪಕ್ಷ ಬಲವರ್ಧನೆಗೆ ವಿಜಯೇಂದ್ರ ಕರೆ​​"ಕಾಂಗ್ರೆಸ್ ಪಕ್ಷದ ದಯನೀಯ ಸ್ಥಿತಿ ಬಗ್ಗೆ ಮೊದಲು ಆತ್ಮಾವಲೋಕನ ಮಾಡಿಕೊಳ್ಳಿ"- ವಾಗ್ದಾಳಿ"2024ರಲ್ಲಿ ನಿಮ್ಮ ತಮ್ಮನನ್ನು ಸೋಲಿಸಿದಂತೆ, 2028ರಲ್ಲಿ ನಿಮಗೂ ಅದೇ ಗತಿ":ಜೆಡಿಎಸ್ಚಿಕಿತ್ಸೆ ಸಿಗದೆ ಆಂಬ್ಯುಲೆನ್ಸ್‌ನಲ್ಲೇ 900 ಕಿಮೀ ಅಲೆದಾಡಿದ ಯುವಕ!ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು ಕೈಜೋಡಿಸಬೇಕು-ಡಾ.ಪ್ರಭಾ