Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಟಿ. ಎಂ. ಸಿ. ಬ್ಯಾಂಕ್ ಸರ್ವ ಸದಸ್ಯರ ಸಭೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಟೆಕ್ಸ್ ಟೈಲ್ ಮ್ಯಾನುಫ್ಯಾಕ್ಚರ್ ಕೋ ಆಪರೇಟಿವ್ ಬ್ಯಾಂಕ್ ನ 62 ನೇ ವಾರ್ಷಿಕ ಸರ್ವ ಸದಸ್ಯರ ಸಭೆ ನಡೆಯಿತು.

       ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಬ್ಯಾಂಕ್ ನ ಅಧ್ಯಕ್ಷರಾದ ಕೆ. ಪಿ. ವಾಸುದೇವ್ ಮಾತನಾಡಿ ನೇಕಾರರ ತವರೂರು ದೊಡ್ಡಬಳ್ಳಾಪುರಕ್ಕೆ ಮಾತ್ರ ಸೀಮಿತವಾಗಿದ್ದ ಬ್ಯಾಂಕ್ ನ ಕಾರ್ಯಕ್ಷೇತ್ರವನ್ನು ಮುಂದಿನ ದಿನಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿಸ್ತರಿಸಲು ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಟಿ. ಎಂ. ಸಿ. ಬ್ಯಾಂಕ್ ನೇಕಾರರಿಗೆ ಮಗ್ಗದ ಮೇಲೆ ಸಾಲ ನೀಡುವ ಏಕೈಕ ಬ್ಯಾಂಕ್ ಆಗಿದೆ. ಚಿನ್ನ, ಬೆಳ್ಳಿ ಯ ಮೇಲೆ ಸಾಲ, ವಾಹನಗಳ ಮೇಲಿನ ಸಾಲ ಸೇರಿದಂತೆ ಹಲವು ವಿಧಗಳಲ್ಲಿ ಮಧ್ಯಮ ವರ್ಗದವರಿಗೆ ಸಾಲ ಸೌಲಭ್ಯ ನಮ್ಮ ಬ್ಯಾಂಕ್ ವತಿಯಿಂದ ನೀಡಲಾಗುತ್ತಿದೆ. ಇದನ್ನು ನಗರದ ನೇಕಾರರು ಮಾತ್ರವಲ್ಲದೆ ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಹೇಳಿದರು.

         ಕಾರ್ಯಕ್ರಮದಲ್ಲಿ ಹತ್ತನೇ ತರಗತಿ ಹಾಗೂ ದ್ವಿತೀಯ ಪಿ. ಯು. ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಉತ್ತೀರ್ಣ ರಾದ ಬ್ಯಾಂಕ್ ನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಜೊತೆಗೆ ಕ್ರೀಡೆ ಹಾಗೂ ಯೋಗ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು.

          ಕಾರ್ಯಕ್ರಮದಲ್ಲಿ ಟಿ. ಎಂ. ಸಿ. ಬ್ಯಾಂಕ್ ಉಪಾಧ್ಯಕ್ಷ ಡಿ. ಪ್ರಶಾಂತ್ ಕುಮಾರ್, ನಿರ್ದೇಶಕರಾದ ಪಿ. ಸಿ. ವೆಂಕಟೇಶ್, ಜಿ. ಮಂಜುನಾಥ್, ಎ. ಆರ್. ಶಿವಕುಮಾರ್, ಕೆ. ಜಿ. ಗೋಪಾಲ್, ಬಿ. ಆರ್. ಉಮಾಕಾಂತ್, ನಾರಾಯಣ್ ಎನ್. ನಾಯ್ಡು, ಅನಿಲ್, ಎ. ಗಿರಿಜಾ, ಡಾ. ಇಂದಿರಾ, ವೃತ್ತಿಪರ ನಿರ್ದೇಶಕ ಎ. ಆರ್. ನಾಗರಾಜನ್, ಕೆ. ಎಂ. ಕೃಷ್ಣಮೂರ್ತಿ, ಪ್ರಭಾರಿ ವ್ಯವಸ್ಥಾಪಕಿ ಪುಷ್ಪಲತಾ ಮುಂತಾದವರು ಹಾಜರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!