ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದ ಖಾಸಗಿ ಹೋಟೆಲ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎನ್‌ಡಿಎ (NDA) ನಾಯಕರ ಪ್ರಮುಖ ಸಮನ್ವಯ ಸಭೆ ನಡೆಯಿತು. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ಈ ಸಭೆ ಆಯೋಜನೆಗೊಂಡಿತ್ತು.
ಸಭೆಯಲ್ಲಿ ಮುಂಬರುವ ಚುನಾವಣೆಯ ಪೂರ್ವ ತಯಾರಿಗಳ ಕುರಿತು ಚರ್ಚಿಸಲಾಯಿತು. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎ.ಪಿ. ರಂಗನಾಥ್ ಅವರ ಗೆಲುವನ್ನು ಖಚಿತಪಡಿಸಲು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗೂಡಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳು ಮತ್ತು ಪ್ರಚಾರ ಯೋಜನೆಯ ಬಗ್ಗೆ ವಿಸ್ತೃತವಾಗಿ ಸಮಾಲೋಚಿಸಲಾಯಿತು.
ಈ ಸಮನ್ವಯ ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಚುನಾವಣಾ ಎನ್‌ಡಿಎ ಉಸ್ತುವಾರಿ ಗೋಪಿನಾಥ್ ರೆಡ್ಡಿ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಹಾಗೂ ಜೆಡಿಎಸ್ ಬೆಂ. ಗ್ರಾ. ಜಿಲ್ಲಾಧ್ಯಕ್ಷ ಕೆ.ವಿ. ಮಂಜುನಾಥ್ ಉಪಸ್ಥಿತರಿದ್ದರು.
ಅಲ್ಲದೆ, ಬಿಜೆಪಿ ಬೆಂ. ಗ್ರಾ. ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ತಾಲ್ಲೂಕು ಅಧ್ಯಕ್ಷರಾದ ಎಸ್.ಎಂ. ಹರೀಶ್ ಗೌಡ (ದೊಡ್ಡಬಳ್ಳಾಪುರ), ಎಸ್. ಮಹೇಶ್ (ದೇವನಹಳ್ಳಿ), ನೆಲಮಂಗಲದ ತಿಮ್ಮರಾಯಪ್ಪ, ನಾಗೇಶ್, ಅಂಬರೀಷ್, ಜಗದೀಶ್ ಚೌಧರಿ, ಜಿ. ಚಂದ್ರಣ್ಣ, ಕೆ. ಶ್ರೀನಿವಾಸ ಮೂರ್ತಿ, ಶ್ರೀಮತಿ ನಾಗವೇಣಿ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ವಿವಿಧ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.




