ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿಯವರು ಭಾನುವಾರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಆಯೋಜಿಸಲಾಗಿದ್ದ ದಿವಂಗತ ಡಿ.ಸುಧಾಕರ್ ಅವರ ನುಡಿ ನಮನ ಕಾರ್ಯಕ್ರಮದ ಅಂಗವಾಗಿ ಕೈಗೊಳ್ಳಬೇಕಾಗಿದ್ದ ತಮ್ಮ ಅಧಿಕೃತ ಪ್ರವಾಸ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದಾಗಿ ರದ್ದುಗೊಳಿಸಿದ್ದಾರೆ.
ಮೇ 23, 2026 ರಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ವಿಶೇಷ ಕಾರ್ಯದರ್ಶಿ ಕೆ. ಚಿರಂಜೀವಿ ಅವರು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ಕಾರಣ: ಕೆಲವು ಅನಿವಾರ್ಯ ಕಾರಣಗಳ ಹಿನ್ನೆಲೆಯಲ್ಲಿ ಈ ಪ್ರವಾಸವನ್ನು ರದ್ದುಪಡಿಸಲು ಮುಖ್ಯಮಂತ್ರಿಗಳು ನಿರ್ದೇಶಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಈ ಪ್ರಕಟಣೆಯ ಪ್ರತಿಯನ್ನು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮಾಹಿತಿಗಾಗಿ ರವಾನಿಸಲಾಗಿದೆ.



