Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸ್ಥಳೀಯ ಮುಖಂಡರೇ ಮಾಜಿ ಸಚಿವ ದಿ. ಸುಧಾಕರ್ ನುಡಿನಮನ ಮಾಡಲಿ:ಕಂದಿಕೆರೆ ಜಗದೀಶ್

ಚಂದ್ರವಳ್ಳಿ ನ್ಯೂಸ್, ​ಹಿರಿಯೂರು:
ದಿವಂಗತ ಮಾಜಿ ಸಚಿವ ಡಿ. ಸುಧಾಕರ್ ಅವರ ನುಡಿನಮನ ಕಾರ್ಯಕ್ರಮವನ್ನು ಅನ್ಯ ತಾಲೂಕಿನ ಮುಖಂಡರಿಗೆ ಬಿಟ್ಟುಕೊಡದೆ
, ಸ್ಥಳೀಯ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಅವರ ಅಭಿಮಾನಿಗಳೇ ಸೇರಿ ಹಮ್ಮಿಕೊಳ್ಳಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಕಂದಿಕೆರೆ ಜಗದೀಶ್ ಆಗ್ರಹಿಸಿದ್ದಾರೆ.

​ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹಿರಿಯೂರು ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಡಿ. ಸುಧಾಕರ್ ಅವರಿಗೆ ಗೌರವ ಸಲ್ಲಿಸುವುದು ತಾಲೂಕಿನ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದಿದ್ದಾರೆ.

​ಕ್ಷೇತ್ರದ ಅಭಿವೃದ್ಧಿಗೆ ಸುಧಾಕರ್ ಕೊಡುಗೆ ಅಪಾರ:
​"ಡಿ. ಸುಧಾಕರ್ ಅವರು ಮೂರು ಅವಧಿಗೆ ಶಾಸಕರಾಗಿ ಹಾಗೂ ಒಂದು ಅವಧಿಯ ಸೋಲಿನಲ್ಲೂ ಕ್ಷೇತ್ರದ ಜನರ ಜೊತೆ ನಿಂತು ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರಿಂದಾಗಿ ಸಾವಿರಾರು ಮುಖಂಡರು ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಬೆಳೆದಿದ್ದಾರೆ, ಅಧಿಕಾರ ಅನುಭವಿಸಿದ್ದಾರೆ. ಅವರ ಅಕಾಲಿಕ ಮರಣ ತಾಲೂಕಿಗೆ ತುಂಬಲಾರದ ನಷ್ಟ," ಎಂದು ಜಗದೀಶ್ ಸ್ಮರಿಸಿದ್ದಾರೆ.

​'ಬ್ರಿಟಿಷ್ ಆಡಳಿತ ಬೇಡ': ಹೊರಗಿನವರ ಹಸ್ತಕ್ಷೇಪಕ್ಕೆ ವಿರೋಧ
​ಸ್ಥಳೀಯ ನಾಯಕರನ್ನು ಕಡೆಗಣಿಸಿ, ಅನ್ಯ ತಾಲೂಕಿನ ಮುಖಂಡರು ಹಿರಿಯೂರು ಮತದಾರರ ಪರವಾಗಿ ಕಾರ್ಯಕ್ರಮ ರೂಪಿಸುತ್ತಿರುವುದಕ್ಕೆ ಕಂದಿಕೆರೆ ಜಗದೀಶ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

​ಸ್ವಾಭಿಮಾನದ ಪ್ರಶ್ನೆ: "ನಮಗೆ ಬ್ರಿಟಿಷ್ ಆಡಳಿತ ಬೇಡ. ಸ್ಥಳೀಯ ನಾಯಕರನ್ನು ನಿರ್ಲಕ್ಷಿಸಿ ಹೊರಗಿನವರು ಕಾರ್ಯಕ್ರಮ ಮಾಡುವುದು ಎಷ್ಟು ಸರಿ? ಹಿರಿಯೂರಿನ ಸ್ಥಳೀಯ ಸ್ವಾಭಿಮಾನಿ ಮುಖಂಡರೇ ಈ ನುಡಿನಮನ ಕಾರ್ಯಕ್ರಮದ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸುವಷ್ಟು ಆರ್ಥಿಕವಾಗಿ ಸದೃಢರಾಗಿದ್ದಾರೆ," ಎಂದು ಅವರು ಟಾಂಗ್ ನೀಡಿದ್ದಾರೆ.

​ಪಕ್ಷಾತೀತ ಗೌರವ: ಸುಧಾಕರ್ ಅವರು ಎಲ್ಲಾ ಜಾತಿ, ಜನಾಂಗದವರನ್ನು ಸಮಾನವಾಗಿ ಕಂಡ ಜಾತ್ಯಾತೀತ ನಾಯಕರಾಗಿದ್ದರು. ಹೀಗಾಗಿ ಕೇವಲ ಕಾಂಗ್ರೆಸ್ ಮಾತ್ರವಲ್ಲದೆ, ಅನ್ಯ ಪಕ್ಷಗಳಲ್ಲಿರುವ ಅವರ ಅಭಿಮಾನಿಗಳೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕರೆ ನೀಡಿದ್ದಾರೆ.

​ಕುಟುಂಬಕ್ಕೆ ಹೊರೆಯಾಗದಿರಲಿ:
​ಮನೆಯ ಯಜಮಾನನನ್ನು ಕಳೆದುಕೊಂಡು ಈಗಾಗಲೇ ತೀವ್ರ ದುಃಖದಲ್ಲಿರುವ ಡಿ. ಸುಧಾಕರ್ ಅವರ ಕುಟುಂಬದ ಮೇಲೆ ಯಾವುದೇ ರೀತಿಯ ಆರ್ಥಿಕ ಅಥವಾ ಜವಾಬ್ದಾರಿಯ ಹೊರೆ ಹಾಕಬಾರದು. ಸ್ಥಳೀಯ ಕಾಂಗ್ರೆಸ್ ಮುಖಂಡರೇ ಒಟ್ಟಾಗಿ ಎಲ್ಲಾ ಹೊಣೆಗಾರಿಕೆಯನ್ನು ಹೊತ್ತು, ಮಾಜಿ ಸಚಿವರಿಗೆ ಅತ್ಯಂತ ಅರ್ಥಪೂರ್ಣವಾಗಿ ನುಡಿನಮನ ಸಲ್ಲಿಸಬೇಕು ಎಂದು ಕಂದಿಕೆರೆ ಜಗದೀಶ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!